ಕುಮಾರಸ್ವಾಮಿ ಅವರಂತಹ ರಾಜಕಾರಣಿಗಳ ಹೇಳಿಕೆಗಳಿಂದಲೇ ನಾಗಮಂಗಲದಲ್ಲಿ ನಡೆದಂತಹ ಗಲಭೆಗಳು ನಡೆಯುತ್ತವೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಬೆಂಗಳೂರು (ಸೆ.12): ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿರುವ ಗಲಭೆಯಲ್ಲಿ ಸರ್ಕಾರದ ಪಾತ್ರವೇನಿಲ್ಲ. ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಗಳು ಆಗಿದ್ದಾರೆ. ಎರಡು ಬಾರಿ ಸಿಎಂ ಆಗಿದ್ದವರು. ಇಂತಹ ರಾಜಕಾರಣಿಗಳ ಹೇಳಿಕೆಗಳಿಂದಲೇ ಗಲಬೆಗಳು ಆಗುತ್ತವೆ ಎಂದು ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಗುರುವಾರ ನಾಗಮಂಗಲ ಗಲಭೆ ಬಗ್ಗೆ ಮಾತನಾಡಿದ ಅವರು, ನಾಗಮಂಗಲ ಗಲಭೆ ಆಗಬಾರದಿತ್ತು. ರಾತ್ರಿ ನಾನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ನಾನು ಟಚ್ ಇದ್ದೆ. ಈ ಗಲಭೆ ರಾತ್ರಿಯೇ ಕಂಟ್ರೋಲ್ ಗೆ ಬಂದಿದೆ ಎಂದರು. ಇದಕ್ಕೆ ಮಾಧ್ಯಮದವರು ಕುಮಾರಸ್ವಾಮಿ ಹೇಳಿಕೆ ವಿಚಾರದ ಬಗ್ಗೆ ಏನು ಹೇಳ್ತೀರಿ ಎಂದು ಕೇಳಿದರೆ, ಇಂತಹ ರಾಜಕಾರಣಿಗಳ ಹೇಳಿಕೆಗಳಿಂದಲೇ ಗಲಭೆಗಳ ಆಗೋದು. ಸರ್ಕಾರದ ಪಾತ್ರವೇನು ಇದರಲ್ಲಿ? ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಗಳು ಆಗಿದ್ದಾರೆ. ಎರಡು ಬಾರಿ ಸಿಎಂ ಆಗಿದ್ದರು. ಈ ಘಟನೆ ಆಗಿರೋದು ನನಗೆ ನೋವು ಆಗಿದೆ ಎಂದರು.

ಕೊನೆಗೂ 402 ಪಿಎಸ್ಐ ಪರೀಕ್ಷೆ ಮುಂದೂಡಿಕೆ ಮಾಡಿದ ಸರ್ಕಾರ!

ಹಬ್ಬಗಳನ್ನು ಸ್ವಾಗತ ಮಾಡಿ ಮಸೀದಿ ಗುರುಗಳಿಂದ ಸಂದೇಶ ಹೋಗಿದೆ. ಗಣೇಶ ಹಬ್ಬ, ಕ್ರಿಸ್ ಮಸ್ , ರಂಜಾನ್ ಹಬ್ಬಗಳು ಎಲ್ಲರೂ ಸೇರಿ ಮಾಡಬೇಕು. ಗಣೇಶ ಹಬ್ಬವೂ ನಮ್ಮದು, ಬಕ್ರೀದ್ ಹಬ್ಬ ನಮ್ಮದು ಎಂದು ಹೇಳಬೇಕು. ಆದರೆ, ಕೆಲವರು ಇಂತಹ ಹೇಳಿಕೆಗಳು ಕೊಡುವುದು ಬೇಡ. ನಾವೆಲ್ಲರೂ ಸೇರಿ ಹಬ್ಬ ಮಾಡಬೇಕು. ಬಿಜೆಪ ನಿಯೋಗ ಭೇಟಿ ವಿಚಾರದ ಬಗ್ಗೆ ಮಾತನಾಡಿ, ಬಿಜೆಪಿಯವರು ರಾಜಕೀಯ ಬಿಟ್ಟು ಬೇರೆ ಏನಾದರೂ ಮಾಡಿದ್ದಾರಾ? ಅವರಿಗೆ ಎಲ್ಲದರಲ್ಲೂ ರಾಜಕೀಯ. ನೋವು ಪಡುವುದು ಬಿಟ್ಟು ರಾಜಕೀಯ ಲಾಭ ತೆಗೆದುಕೊಳ್ಳಲು ನೋಡ್ತಾರೆ. ಕುಮಾರಸ್ವಾಮಿ ಅವರಿಗೆ ಯಾರು ಬುದ್ದಿವಾದ ಹೇಳ್ತಾರೆ. ನಾನು ಒಳ್ಳೆಯ ಮಾತು ಹೇಳುತ್ತಿದ್ದೇನೆ. ಮಾಜಿ ಸಿಎಂ ಆ ರೀತಿ ಹೇಳಿಕೆ ಕೊಡ್ತಾರಾ.? ನಾನು ಘಟನಾ ಸ್ಥಳಕ್ಕೆ ಹೋಗುವುದಿಲ್ಲ ಎಂದು ಸಚಿವ ಜಮೀರ್ ಹೇಳಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು? 
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿಯಾಗಿದೆ.

ನಾಗಮಂಗಲ ಗಲಭೆಗೆ ವೋಟ್ ಬ್ಯಾಂಕ್ ರಾಜಕಾರಣದ ಮತಾಂಧರೇ ಕಾರಣ: ನಿಖಿಲ್ ಕುಮಾರಸ್ವಾಮಿ

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ' ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.