ಬಿಜೆಪಿಯವರು ಯಾಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಗೊತ್ತಿಲ್ಲ. ಅವರಿಗೆ ಚರ್ಚೆಗೆ ಬೇರೆ ವಿಷಯಗಳಿಲ್ಲ, ಹೀಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ. ಹಿಂದು-ಮುಸ್ಲಿಂ ಗಲಾಟೆ ಮಾಡಿಸುವುದೇ ಬಿಜೆಪಿಯವರ ಕೆಲಸ ಎಂದು ಸಚಿವ ಜಮೀರ್‌ ಅಹ್ಮದ್ ಖಾನ್‌ ಟೀಕಿಸಿದರು.

ಹುಬ್ಬಳ್ಳಿ (ಡಿ.16): ಸ್ಪೀಕರ್‌ಗೆ ನಾವು ಸೇರಿದಂತೆ ಬಿಜೆಪಿಯವರೂ ಕೈ ಮುಗಿಯಬೇಕು ಅಂದಿದ್ದೆ. ಸ್ಪೀಕರ್‌ಗೆ ಸಿಎಂ ಸೇರಿದಂತೆ ಎಲ್ಲರೂ ಕೈಮುಗಿಯುತ್ತಾರೆ. ಅದರಲ್ಲಿ ತಪ್ಪೇನಿದೆ ಎಂದು ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆಯನ್ನು ಸಚಿವ ಜಮೀರ್‌ ಅಹ್ಮದ್ ಖಾನ್‌ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಸಿಕ್ಕು ಇಷ್ಟು ವರ್ಷಗಳಲ್ಲಿ ಮುಸ್ಲಿಂ ಸ್ಪೀಕರ್ ಆಗಿರಲಿಲ್ಲ. ಕಾಂಗ್ರೆಸ್ ಮುಸ್ಲಿಮರಿಗೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿಯವರು ಯಾಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಗೊತ್ತಿಲ್ಲ. ಅವರಿಗೆ ಚರ್ಚೆಗೆ ಬೇರೆ ವಿಷಯಗಳಿಲ್ಲ, ಹೀಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ. ಹಿಂದು-ಮುಸ್ಲಿಂ ಗಲಾಟೆ ಮಾಡಿಸುವುದೇ ಬಿಜೆಪಿಯವರ ಕೆಲಸ ಎಂದು ಟೀಕಿಸಿದರು.

ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ₹10 ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದಾರೆ. ಇದು ಸ್ವಾಗತಾರ್ಹ, ಬಿಜೆಪಿಯವರು ಸಬ್ ಕಾ ವಿಕಾಸ್ ಅಂತಾ ಹೇಳಿ ಮುಸ್ಲಿಮರ ಅನುದಾನ ಕಡಿತ ಮಾಡಿದ್ದಾರೆ ಎಂದರು. ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸುತ್ತಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಯಾವತ್ತೂ ಸಿದ್ದರಾಮಯ್ಯನವರ ಪರವಾಗಿದ್ದೇನೆ. ಸದ್ಯಕ್ಕೆ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ, ಅವರೇ ಇರುತ್ತಾರೆ. ಸದ್ಯಕ್ಕೆ ಖುರ್ಚಿ ಖಾಲಿ ಇಲ್ಲ ಎಂದರು. ಎರಡೂವರೆ ವರ್ಷದ ನಂತರ ಡಿ.ಕೆ‌.‌ ಶಿವಕುಮಾರ್ ಸಿಎಂ ಆಗುತ್ತಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಲು ತಡಬಡಾಯಿಸಿದರು.

ಕರ್ನಾಟಕ ದೇಶದ ನಂ.1 ಸಿರಿಧಾನ್ಯ ಬೆಳೆವ ರಾಜ್ಯ ಆಗಲಿ: ಸಿಎಂ ಸಿದ್ದರಾಮಯ್ಯ

ಮೂರು ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್‌ಗೆ ಬೇಡಿಕೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್‌, ಹಾವೇರಿ, ಬೀದರ್‌ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರಿಗೆ ಟಿಕೆಟ್‌ ನೀಡುವಂತೆ ಕೇಳಲಾಗಿದೆ ಎಂದು ವಸತಿ ಮತ್ತು ವಕ್ಫ್‌ ಸಚಿವ ಜಮೀರ್‌ ಅಹಮದ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಲೋಕಸಭೆಗೆ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಕೇಂದ್ರದ ದುರಾಡಳಿತದಿಂದ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. 

ಕರ್ನಾಟಕ ಮಾತ್ರವಲ್ಲ, ಇಡೀ ದೇಶದಲ್ಲಿ ಜನರಿಗೆ ಬದಲಾವಣೆ ಬೇಕಿದೆ. ಜನ ಈಗ ತೀರ್ಮಾನ ತೆಗೆದುಕೊಂಡಾಗಿದೆ. ಕನಿಷ್ಠ ನಾವು ರಾಜ್ಯದಲ್ಲಿ 25 ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ತಿಳಿಸಿದರು. ಇದೇ ವೇಳೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವ ವಿಚಾರವಾಗಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್‌ ಮೇಲಿನ ಅಭಿಮಾನದಿಂದ ಶಾಸಕ ಅಬ್ಬಯ್ಯ ಪ್ರಸಾದ್‌ ಆ ಹೆಸರು ಪ್ರಸ್ತಾಪಿಸಿದ್ದಾರೆ. ಅವರ ಅಭಿಪ್ರಾಯ ಪ್ರಸ್ತಾಪ ಮಾಡುವುದರಲ್ಲಿ ತಪ್ಪೇನಿದೆ ಎಂದರು.

ಅತ್ತಿಗೆ ಕಳೆದುಕೊಂಡು ನೋವಿನಲ್ಲಿದ್ದೇವೆ: ಫ್ಯಾನ್ಸ್‌ ಬಳಿ ಕೈ ಮುಗಿದು ಶ್ರೀಮುರಳಿ ಮನವಿ!

ಜೆಡಿಎಸ್ ಹೆಸರು ಜೆಡಿ''ಕೆ'' ಆಗಲಿ: ಜೆಡಿಎಸ್‌ ಇದೀಗ ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ. ಬಿಜೆಪಿ ಜತೆಗೆ ಕೈಜೋಡಿಸಿದ ಮೇಲೆ ಅದು ಕೋಮುವಾದಿಯಾಗಿದೆ. ಜೆಡಿಎಸ್‌ ನಿಂದ ''ಎಸ್‌'' ತೆಗೆದು ಜೆಡಿ''ಕೆ'' ಮಾಡಲಿ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಹೇಳಿದರು. ''ಕೆ'' ಅಂದರೆ ಕೋಮುವಾದಿ ಆದರೂ ಆಗಬಹುದು ಅಥವಾ ಕುಮಾರಸ್ವಾಮಿ ಅಂತಾದರೂ ಆಗಬಹುದು ಎಂದು ಲೇವಡಿ ಮಾಡಿದರು.