Asianet Suvarna News Asianet Suvarna News

ಮುಸ್ಲಿಮರು ಮತ ಹಾಕಿಲ್ಲವೆಂದು ಎಚ್‌ಡಿಕೆ ಎದೆಮುಟ್ಟಿ ಹೇಳ್ತಾರಾ?: ಸಚಿವ ಜಮೀರ್

ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ಗೆಲ್ಲುತ್ತಿದ್ದರೆ ಎಂಬುದನ್ನು ಎದೆ ಮುಟ್ಟಿಕೊಂಡು ಹೇಳಬೇಕು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಗ್ರಹಿಸಿದ್ದಾರೆ. 

Minister Zameer Ahmed Khan Slams On HD Kumaraswamy gvd
Author
First Published Sep 25, 2023, 10:35 AM IST

ಬೆಂಗಳೂರು (ಸೆ.25): ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ಗೆಲ್ಲುತ್ತಿದ್ದರೆ ಎಂಬುದನ್ನು ಎದೆ ಮುಟ್ಟಿಕೊಂಡು ಹೇಳಬೇಕು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಗ್ರಹಿಸಿದ್ದಾರೆ. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್‌ ಶಾಸಕರು ಗೆದ್ದಿರುವ ಬಹುತೇಕ ಕಡೆ ಅಲ್ಪಸಂಖ್ಯಾತರ ಮತಗಳಿಂದಲೇ ಗೆದ್ದಿದ್ದಾರೆ. 

ಹೊಳೆನರಸೀಪುರದಲ್ಲಿ ಎಚ್. ಡಿ.ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿಕ್ಕ ನಾಯಕನಹಳ್ಳಿ ಸುರೇಶ್ ಬಾಬು, ಗುರುಮಿಠಕಲ್‌ನ ನಾಗನಗೌಡ ಕಂದಕೂರು, ದೇವದುರ್ಗದ ಕರೆಮ್ಮ, ಚನ್ನ ರಾಯಪಟ್ಟಣದಲ್ಲಿ ಬಾಲಕೃಷ್ಣ ಇವರೆಲ್ಲ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು. ಕುಮಾರಸ್ವಾಮಿ ಅವರು ಬಿಜೆಪಿ ಜತೆ ಹೋಗುವ ಸಲುವಾಗಿ ಮುಸ್ಲಿಂ ಮತ ಕೊಡಲಿಲ್ಲ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಜಮೀರ್ ಅಹಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಸ್‌ವೈ ಭೇಟಿಯಾಗಿ ಆಶೀರ್ವಾದ ಪಡೆದ ನಿಖಿಲ್‌ ಕುಮಾರಸ್ವಾಮಿ: ಮಹತ್ವದ ಮಾತುಕತೆ

ವಿಜಯನಗರದ ಸಮಸ್ಯೆ ದರ್ಶನ: ನೂತನ ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್ ಖಾನ್‌ ಅವರು ಕೂಡ ಜನರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಈ ಹೊತ್ತಿನಲ್ಲಿ ''ಕನ್ನಡಪ್ರಭ'' ಕೂಡ ಜಿಲ್ಲೆ ಎದುರಿಸುತ್ತಿರುವ ಹತ್ತು ಪ್ರಮುಖ ಸಮಸ್ಯೆಗಳನ್ನು ಪಟ್ಟಿ ಮಾಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಇತ್ತ ಚಿತ್ತಹರಿಸಲಿ ಎಂಬ ಆಶಯ ಹೊಂದಿದೆ.

ನಿವೇಶನ ಬೇಡಿಕೆ: ಹೊಸಪೇಟೆ ನಗರ ಜಿಲ್ಲಾ ಕೇಂದ್ರವಾಗಿದೆ. ಜತೆಗೆ ಈ ಭಾಗದ ಪ್ರಮುಖ ವಾಣಿಜ್ಯ ನಗರಿಯಾಗಿಯೂ ಬೆಳೆದಿದೆ. ಹಾಗಾಗಿ ಖಾಲಿ ನಿವೇಶನ (ಸೈಟ್‌)ಗಳ ಬೆಲೆಯೂ ಗಗನಕ್ಕೇರಿದೆ. ಸರ್ಕಾರವೇ ಬಡ, ಮಧ್ಯಮ ವರ್ಗದವರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಿ ಎಂಬುದು ಬಡ, ಮಧ್ಯಮ ವರ್ಗದವರ ಆಗ್ರಹವಾಗಿದೆ. ಈಗಾಗಲೇ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ)ಕ್ಕೆ 20 ಸಾವಿರಕ್ಕೂ ಅಧಿಕ ಜನರು ನಿವೇಶನದ ಬೇಡಿಕೆಯನ್ನಿಟ್ಟಿದ್ದಾರೆ. ಸರ್ಕಾರವೇ ಆಶ್ರಯ ಯೋಜನೆಯಡಿ ಜಿ ಪ್ಲಸ್‌ 2, ಇಲ್ಲವೇ ಜಿ ಪ್ಲಸ್‌ 3 ಮಾಡಿ ನಿವೇಶನದ ಜತೆಗೆ ಮನೆಗಳನ್ನು ಕಟ್ಟಿಸಿಕೊಡಲಿ ಎಂಬ ಬೇಡಿಕೆ ಜನರದ್ದಾಗಿದೆ.

ಕಾವೇರಿ ವಿಚಾರದಲ್ಲಿ ರಾಜ್ಯದ ಸಂಸದರಿಗೆ ಮೋದಿ ಬಳಿ ಹೋಗಲು ಧೈರ್ಯವಿಲ್ಲ: ಸಚಿವ ತಂಗಡಗಿ

ಸಕ್ಕರೆ ಕಾರ್ಖಾನೆ ಬೇಡಿಕೆ: ಚಿತ್ತವಾಡ್ಗಿಯ ಐಎಸ್‌ಆರ್‌ ಸಕ್ಕರೆ ಕಾರ್ಖಾನೆ ಮುಚ್ಚಿದ ಬಳಿಕ ಈ ಭಾಗದ ಕಬ್ಬು ಬೆಳೆಯುವ ರೈತರು ಹೊಸ ಕಾರ್ಖಾನೆಗೆ ಬೇಡಿಕೆ ಸಲ್ಲಿಸಿದ್ದರು. ಹಿಂದಿನ ಸರ್ಕಾರ ಹಂಪಿ ಶುಗರ್ಸ್‌ ಎಂಬ ಕಾರ್ಖಾನೆ ಸ್ಥಾಪನೆಗೆ ಹಸಿರು ನಿಶಾನೆ ನೀಡಿದ್ದಾರೆ. ಈಗ ಜಾಗದ ವಿವಾದದಿಂದ ಈ ಕಾರ್ಖಾನೆ ಸ್ಥಾಪನೆಯೂ ವಿಳಂಬವಾಗಿದ್ದು, ಸಕ್ಕರೆ ಕಾರ್ಖಾನೆ ಬೇಗ ಸ್ಥಾಪನೆಯಾಗಲಿ ಎಂಬುದು ರೈತರ ಬೇಡಿಕೆಯಾಗಿದೆ.

Follow Us:
Download App:
  • android
  • ios