ಸಿಎಂಗೆ ಕೊರೋನಾ: ಮತ್ತಿಬ್ಬರು ಸಚಿವರು ಸೆಲ್ಫ್ ಕ್ವಾರಂಟೈನ್

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಮತ್ತಿಬ್ಬರು ಸಚಿವರು ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ.

Ministers byrathi basavaraj Kota Srinivas Poojary self quarantine after BSY covid positive

ಬೆಂಗಳೂರು, (ಆ.03): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಸಿಎಂ ಸಂಪರ್ಕಕ್ಕೆ ಬಂದಿದ್ದು ಸಚಿವರಾದ, ಅಶೋಕ್, ಬಸವರಾಜ್ ಬೊಮ್ಮಾಯಿ ಮತ್ತು ಡಿಸಿಎಂ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಇದೀಗ ಮತ್ತಿಬ್ಬರು ಸಚಿವರ ಸರದಿ.

ಸಿಎಂಗೆ ಕೊರೋನಾ: ಯಾರನ್ನೆಲ್ಲಾ ಭೇಟಿಯಾಗಿದ್ರು, ಯಾರೆಲ್ಲಾ ಕ್ವಾರಂಟೈನ್ ಆದ್ರು...?

ಮತ್ತಿಬ್ಬರು ಕ್ವಾರಂಟೈನ್
ಹೌದು...ಮತ್ತಿಬ್ಬರು ಸಚಿವರಾದ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಮತ್ತು ಮೀನುಗಾರಿಕಾ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹ ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ. ಸಚಿವ ಬಿ.ಎ ಬಸವರಾಜ ಅವರು ಗುರುವಾರ ಸಿಎಂ ಯಡಿಯೂರಪ್ಪ ಜೊತೆಗೆ ಮೆಟ್ರೋ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಇನ್ನು  ಜುಲೈ 30ರಂದು  ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರಿಕೆ ಇಲಾಖೆಯ 2013-14 ರಿಂದ 2018-19 ರವರೆಗಿನ ಮಾಹಿತಿನ್ನೊಳಗೊಂಡ ಅಂಕಿ-ಅಂಶಗಳ ಸಂಚಿಕೆ‌ ಬಿಡುಗಡೆ ವೇಳೆ ಸಚಿವ‌ ಕೋಟ ಶ್ರೀನಿವಾಸ ಪೂಜಾರಿ ಇದ್ದರು. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮದ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.

Latest Videos
Follow Us:
Download App:
  • android
  • ios