ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸಿದ್ದ ಸಚಿವರ ಮಕ್ಕಳಿಗೆ ಸೋಲಾಗಿದೆ. ಹೌದು, ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ವಿರುದ್ಧ ಸ್ಪರ್ಧಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳಕರ್‌ ಅವರಿಗೆ ಸೋಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್‌ ವಿರುದ್ಧ ಸ್ಪರ್ಧಿಸಿದ್ದ ಸಚಿವ ಶಿವಾನಂದ ಪಾಟೀಲ್‌ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ ಸೋಲು ಕಂಡಿದ್ದಾರೆ.

ಬೆಂಗಳೂರು(ಜೂ.4): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸಿದ್ದ ಸಚಿವರ ಮಕ್ಕಳಿಗೆ ಸೋಲಾಗಿದೆ. ಹೌದು, ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ವಿರುದ್ಧ ಸ್ಪರ್ಧಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳಕರ್‌ ಅವರಿಗೆ ಸೋಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್‌ ವಿರುದ್ಧ ಸ್ಪರ್ಧಿಸಿದ್ದ ಸಚಿವ ಶಿವಾನಂದ ಪಾಟೀಲ್‌ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ ಸೋಲು ಕಂಡಿದ್ದಾರೆ.

ಇನ್ನು ಬೀದರ್‌ನಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಸಚಿವ ಈಶ್ವರ್‌ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ ಅವರು ಮಾತ್ರ ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಜ್ಯದ ಸಚಿವರ ಮಕ್ಕಳ ಪೈಕಿ ಸಾಗರ್ ಖಂಡ್ರೆ ಮಾತ್ರ ಗೆಲುವು ದಾಖಲಿಸಿದ್ದಾರೆ. ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾಸಾಹೇಬ್‌ ಜೊಲ್ಲೆ ವಿರುದ್ಧ ಸ್ಪರ್ಧಿಸಿದ್ದ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಗೆಲುವು ದಾಖಲಿಸಿದ್ದಾರೆ. 

Live Blog: ಪೆನ್ ಡ್ರೈವ್ ಕಮಾಲ್, ಹಾಸನದಲ್ಲಿ ಪ್ರಜ್ವಲ್ ರೇವಣ್ಣಂಗೆ ಸೋಲು

ಬೆಳಗಾವಿ: 

ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ವಿರುದ್ಧ ಸ್ಪರ್ಧಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳಕರ್‌ ಆರಂಭಿಕ ಸುತ್ತಿನಿಂದಲೂ ಹಿಂದೆ ಇದ್ದರು. ಜಗದೀಶ್‌ ಶೆಟ್ಟರ್‌ ಮೊದಲ ಸುತ್ತಿನಿಂದಲೂ ಮುನ್ನಡೆ ಸಾಧಿಸಿದ್ದರು. ಕೊನೆಗೆ ಮೃಣಾಲ್‌ ಹೆಬ್ಬಾಳಕರ್‌ ವಿರುದ್ಧ ಜಗದೀಶ್‌ ಶೆಟ್ಟರ್‌ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚಿಕ್ಕೋಡಿ: 

ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾಸಾಹೇಬ್‌ ಜೊಲ್ಲೆ ವಿರುದ್ಧ ಸ್ಪರ್ಧಿಸಿದ್ದ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಅವರು ಕೆಲವು ಸುತ್ತಿನಿಂದ ಮುನ್ನಡೆ ಸಾಧಿಸಿದ್ದರು. ಕೊನೆಗೆ ಅಣ್ಣಾಸಾಹೇಬ್‌ ಜೊಲ್ಲೆ ವಿರುದ್ಧ ಪ್ರಿಯಾಂಕ ಜಾರಕಿಹೊಳಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Live Blog: ಬಿಜೆಪಿಗೆ 240 ಕ್ಷೇತ್ರಗಳಲ್ಲಿ ಗೆಲುವು, ಕಾಂಗ್ರೆಸ್‌ಗೆ ಸಿಕ್ಕಿದೆ ಮರು ಜನ್ಮ

ಬಾಗಲಕೋಟೆ: 

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್‌ ವಿರುದ್ಧ ಸ್ಪರ್ಧಿಸಿದ್ದ ಸಚಿವ ಶಿವಾನಂದ ಪಾಟೀಲ್‌ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ ಅವರು ಚುನಾವಣಾ ಪ್ರಚಾರದ ಆರಂಭದಿಂದಲೂ ನನ್ನ ಲಕ್‌ ಎಲ್ಲರಿಗಿಂತ ಬಹಳ ಸ್ಟ್ರಾಂಗ್‌ ಇದೆ. ಬಾಗಲಕೋಟೆಯಲ್ಲಿ ಈ ಬಾರಿ ಗೆಲುವು ನನ್ನದೆ ಎಂದು ಹೇಳಿಕೊಂಡಿದ್ದರು. ಆದ್ರೆ, ಸಂಯುಕ್ತಾ ಪಾಟೀಲ್‌ಗೆ ಈ ಬಾರಿ ಲಕ್‌ ಕೈಕೊಟ್ಟಿದೆ. 

ಬೀದರ್‌: 

ಬೀದರ್‌ನಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಸಚಿವ ಈಶ್ವರ್‌ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ ಅವರು ಮಾತ್ರ ಗೆಲುವು ಸಾಧಿಸಿದ್ದಾರೆ. ಕೇಂದ್ರ ಸಚಿವರನ್ನೇ ಸೋಲಿಸುವ ಮೂಲಕ ಸಾಗರ್‌ ಖಂಡ್ರೆ ಅವರು ಲೋಕಸಭೆ ಪ್ರವೇಶಿಸಿದ್ದಾರೆ. ಬೀದರ್‌ನಲ್ಲಿ ಕೇಂದ್ರ ಸಚಿವರನ್ನೇ ಸೋಲಿಸುವ ಮೂಲಕ ಸಾಗರ್‌ ಖಂಡ್ರೆ ಸೋಲಿನ ರುಚಿ ತೋರಿಸಿದ್ದಾರೆ. 

ಸುನಿಲ್ ಬೋಸ್:

ಚಾಮರಾಜನಗರದಲ್ಲಿ ಸಚಿವ ಎಚ್‌.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆಲುವು ದಾಖಲಿಸಿದ್ದಾರೆ. 

ಗೆದ್ದ ಕುಟುಂಬದ ಸದಸ್ಯರು

ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆಯಲ್ಲಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಅವರ ಪತ್ನಿ ಹಾಗೂ ಕಾಂಗ್ರೆಸ್‌ನ ಹಿರಿಯ ಶಾಸಕ ಸಾಮನೂರು ಶಿವಶಂಕರಪ್ಪ ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಅವರು ಬಿಜೆಪಿ ಅಭ್ಯರ್ಥಿ ಗೀತಾ ಸಿದ್ದೇಶ್ವರ್‌ ಅವರು ವಿರುದ್ಧ ಗೆಲುವು ದಾಖಲಿಸಿದ್ದಾರೆ. 

ರಾಜಶೇಖರ್ ಹಿಟ್ನಾಳ್

ಕೊಪ್ಪಳದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರು ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್‌ ವಿರುದ್ಧ ಗೆಲುವು ದಾಖಲಿಸಿದ್ದಾರೆ. ರಾಜಶೇಖರ್ ಹಿಟ್ನಾಳ್ ಅವರು ಶಾಸಕ ರಾಘವೇಂದ್ರ ಹಿಟ್ನಾಳ್‌ ಅವರ ಸಹೋದರರಾಗಿದ್ದಾರೆ.