ಪರಿಶಿಷ್ಟ ಜಾತಿಯ ಪ್ರಭಾವಿಗಳಾದ ಡಾ.ಜಿ.ಪರಮೇಶ್ವರ್‌ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಪರಿಶಿಷ್ಟ ಪಂಗಡದ ಸತೀಶ್‌ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ಸಭೆ ನಡೆಸಿರುವುದು ಕಾಂಗ್ರೆಸ್‌ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು(ಜ.05):  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿರುವ ವೇಳೆಯಲ್ಲೇ ಗುರುವಾರ ರಾತ್ರಿ ಸಚಿವರಾದ ಡಾ.ಜಿ.ಪರಮೇಶ್ವರ್‌, ಎಚ್‌.ಸಿ.ಮಹದೇವಪ್ಪ ಹಾಗೂ ಸತೀಶ್‌ ಜಾರಕಿಹೊಳಿ ಪ್ರತ್ಯೇಕ ಸಭೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಪರಿಶಿಷ್ಟ ಜಾತಿಯ ಪ್ರಭಾವಿಗಳಾದ ಡಾ.ಜಿ.ಪರಮೇಶ್ವರ್‌ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಪರಿಶಿಷ್ಟ ಪಂಗಡದ ಸತೀಶ್‌ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ಸಭೆ ನಡೆಸಿರುವುದು ಕಾಂಗ್ರೆಸ್‌ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಅಸೆಂಬ್ಲಿ ಟಿಕೆಟ್‌ ವಂಚಿತ 15 ಜನಕ್ಕೆ ನಿಗಮ-ಮಂಡಳಿ ಪಟ್ಟ?

ಸಿದ್ದರಾಮಯ್ಯ ದೆಹಲಿಗೆ ತೆರಳುವ ವೇಳೆ ಸತೀಶ್‌ ಜಾರಕಿಹೊಳಿ ಅವರು ಕಾರಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ತೆರಳಿ ಮಾತುಕತೆ ನಡೆಸಿದ್ದರು. ಇದೀಗ ಭೋಜನಕೂಟದ ನೆಪದಲ್ಲಿ ಮೂವರೂ ಸಚಿವರು ಸಭೆ ನಡೆಸಿದ್ದಾರೆ. ಹೀಗಾಗಿ ಈ ಸಭೆಯ ಉದ್ದೇಶವೇನು? ಹಾಗೂ ಸಭೆಯಲ್ಲಿ ಚರ್ಚೆಯಾಗಿರುವುದೇನು ಎಂಬ ಬಗ್ಗೆ ತೀವ್ರ ಕುತೂಹಲ ಮೂಡಿದೆ.