ಬೆಂಗಳೂರು, (ಜ.24): 2021ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯಂದು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಹೆಸರುಗಳನ್ನು ಪ್ರಕಟಿಸಲಾಗಿದೆ.

ರಾಜ್ಯ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಪ್ರಕಟಿಸಿದ್ದು, ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಹೆಸರುಗಳನ್ನು ಘೋಷಣೆ ಮಾಡಿದೆ.

ನಾನು ಇರುವಾಗ್ಲೇ ಈ ಕೆಲಸ ಪೂರ್ಣಗೊಳಿಸಿ: ಸಿಎಂಗೆ ದೇವೇಗೌಡ ಡಿಮ್ಯಾಂಡ್

29 ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರೇ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ನಗರ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. 

ಯಡಿಯೂರಪ್ಪ ಸಚಿವ ಸಂಪುಟದ ನೂತನ ಸಚಿವರಾದ ಆರ್.ಶಂಕರ್ ಹಾಗೂ ಎಂಟಿಬಿ ನಾಗರಾಜ್ ಹೊರತುಪಡಿಸಿ  ಉಳಿದೆಲ್ಲ ಸಚಿವರುಗಳು ಧ್ವಜಾರೋಹಣ ಮಾಡಲಿದ್ದಾರೆ. ಹಾಗಾದ್ರೆ ಯಾವ ಜಿಲ್ಲೆಯಲ್ಲಿ ಯಾರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

1.ಬಾಗಲಕೋಟೆ: ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ 
2. ರಾಮನಗರ: ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ 
3. ರಾಯಚೂರು: ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ
 4. ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ 
5. ಬೆಂಗಳೂರು ಗ್ರಾಮಾಂತರ: ಕಂದಾಯ ಸಚಿವ ಆರ್. ಅಶೋಕ್
6. ಧಾರವಾಡ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್
 7. ಚಿತ್ರದುರ್ಗ: ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು 
8. ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಸಕಾಲ ಸಚಿವ ಎಸ್. ಸುರೇಶ್ ಕುಮಾರ್ 
9. ಕೊಡಗು: ವಸತಿ ಸಚಿವ ವಿ. ಸೋಮಣ್ಣ 
10. ಚಿಕ್ಕಮಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ
11. ಹಾವೇರಿ: ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಬಸವರಾಜ ಬೊಮ್ಮಾಯಿ 
12. ದಕ್ಷಿಣ ಕನ್ನಡ: ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ 
13. ತುಮಕೂರು: ವೈದ್ಯಕೀಯ ಶಿಕ್ಷಣ ಮತ್ತು ಹಜ್ ಮತ್ತು ವಕ್ಫ್ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ 
14. ಗದಗ: ಸಣ್ಣ ಕೈಗಾರಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಚಂದ್ರಕಾಂತ ಸಿ ಪಾಟೀಲ್
15. ಕೋಲಾರ: ಸಣ್ಣ ನೀರಾವರಿ ಸಚಿವ ಸಿ.ಪಿ ಯೋಗೇಶ್ವರ. 
16. ಬೀದರ್: ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ 
17. ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ 
18. ಬಳ್ಳಾರಿ: ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ: ಆನಂದ್ ಸಿಂಗ್
19. ದಾವಣಗೆರೆ: ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ 
20. ಮೈಸೂರು: ಸಹಕಾರ ಸಚಿವ ಎಸ್‌.ಟಿ ಸೋಮಶೇಖರ್ 
21. ಕೊಪ್ಪಳ: ಕೃಷಿ ಸಚಿವ ಬಿ.ಸಿ. ಪಾಟೀಲ್ 
22. ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ. ಸುಧಾಕರ್
23. ಮಂಡ್ಯ: ಕ್ರೀಡೆ ಮತ್ತು ಯುವಜನ ಸಬಲೀಕರಣ ಸಚಿವ ಕೆ.ಸಿ. ನಾರಾಯಣಗೌಡ 
24. ಉತ್ತರ ಕನ್ನಡ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ 
25. ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ 
26. ಹಾಸನ: ಅಬಕಾರಿ ಸಚಿವ ಕೆ. ಗೋಪಾಲಯ್ಯ
27. ಕಲಬುರಗಿ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವ ಉಮೇಶ್ ಕತ್ತಿ 
28. ಉಡುಪಿ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್ ಅಂಗಾರ 
29. ಯಾದಗಿರಿ: ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ