ಕರ್ನಾಟಕದಲ್ಲಿ ಮತ್ತೆ ಭುಗಿಲೆದ್ದ ಡಿಸಿಎಂ ಕೂಗು..!
ನಾವೂ ಬೇಡಿಕೆ ಇಟ್ಟಿದ್ದೇವೆ. ಆದರೆ, ಈ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುತ್ತೆ. ಹಾಗಂತ, ಡಿಸಿಎಂ ಸ್ಥಾನ ನೀಡದೆ ಇದ್ದರೂ ನಮಗಾರಿಗೂ ಅಸಮಾಧಾನ ಏನೂ ಇಲ್ಲ ಎಂದ ಸಚಿವ ಜಮೀರ್ ಅಹ್ಮದ್ ಖಾನ್
ವಿಜಯಪುರ/ಹುಬ್ಬಳ್ಳಿ(ಜೂ.23): 'ಡಿಸಿಎಂ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಎಲ್ಲ ಸಮಾಜಕ್ಕೂ ತಮ್ಮ ಸಮಾ ಜದವರಿಗೆ ಡಿಸಿಎಂ ಸ್ಥಾನ ಸಿಗಬೇಕು ಎನ್ನುವ ಹಂಬಲ ಇರುತ್ತದೆ. ಮುಸ್ಲಿಂ ಸೇರಿದಂತೆ ಲಿಂಗಾಯತ, ದಲಿತ ಸಮಾಜಗಳಿಂದಲೂ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇದೆ. ನಾವು ಕೂಡ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇವೆ' ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ನಗರದ ಹೊರಭಾಗದಲ್ಲಿರುವ ಮದರಸಾದಲ್ಲಿ ಮುಸ್ಲಿಂ ಧರ್ಮಗುರು ತನೀರ್ ಪೀರಾ ಹಾಸ್ಮಿ ಅವರ ಆಶೀರ್ವಾದ ಪಡೆಯಲು ಶನಿವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಹೆಚ್ಚುವರಿ ಡಿಸಿಎಂ ಸ್ಥಾನಗಳಿಗೆ ಬೇಡಿಕೆ ಇಟ್ಟಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, 'ನಾವೂ ಬೇಡಿಕೆ ಇಟ್ಟಿದ್ದೇವೆ. ಆದರೆ, ಈ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುತ್ತೆ. ಹಾಗಂತ, ಡಿಸಿಎಂ ಸ್ಥಾನ ನೀಡದೆ ಇದ್ದರೂ ನಮಗಾರಿಗೂ ಅಸಮಾಧಾನ ಏನೂ ಇಲ್ಲ' ಎಂದರು.
ಪ್ರದೀಪ್ ಈಶ್ವರ್‌ನನ್ನು ಮೊದಲ ಬಾರಿಗೆ ನೋಡಿ ಯಾರೋ ಹುಚ್ಚ ಅನ್ಕೊಂಡಿದ್ದೆ; ಡಿಸಿಎಂ ಡಿ.ಕೆ. ಶಿವಕುಮಾರ್
3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ತೊಂದರೆ ಏನು: ರಾಜಣ್ಣ
ಹುಬ್ಬಳ್ಳಿ: 'ಮೂರು ಡಿಸಿಎಂ ಮಾಡಿದರೆ ತೊಂದರೆ ಏನು? ಈ ಕುರಿತಾದ ಸಚಿವ ಸತೀಶ ಜಾರಕಿಹೊಳಿ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ' ಎಂದು ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ 3 ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, 'ನಾನು ಮೊದಲಿನಿಂದಲೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿ ಎಂದು ಹೇಳುತ್ತಲೇ ಬಂದಿದ್ದೇನೆ. ಮಧ್ಯೆ ಲೋಕಸಭಾ ಚುನಾವಣೆ ಬಂದಿದ್ದರಿಂದ ಎಐಸಿಸಿ ಅಧ್ಯಕ್ಷರು ಸಾ ರ್ವಜನಿಕವಾಗಿ ಈ ಬಗ್ಗೆ ಪ್ರಸ್ತಾಪಿಸಬೇಡಿ ಎಂದಿದ್ದರು. ಆದ್ದರಿಂದ ನಾವೆಲ್ಲಾ ಸುಮ್ಮನಿದ್ದೆವು. ಇದೀಗ ಸತೀಶ ಜಾರಕಿಹೊಳಿಯವರು ಹೆಚ್ಚುವರಿ ಡಿಸಿಎಂ ಸೃಷ್ಟಿಯಾಗ ಬೇಕು ಎಂದು ಹೇಳಿದ್ದಾರೆ. ಅವರು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ. ಅವರು ಮಾತನಾಡಿದ್ದು ಸರಿಯಾಗಿಯೇ ಇದೆ. ಅವರ ಹೇಳಿಕೆಗೆ ನನ್ನ ಸಹಮತವಿದೆ' ಎಂದರು.