ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ ಅವರು ಆತ್ಮೀಯರಾಗಿದ್ದರೂ ಯಾವತ್ತೂ ನನ್ನ ಜತೆಗೆ ಕಾಂಗ್ರೆಸ್‌ ಸೇರ್ಪಡೆ ಕುರಿತು ಮಾತನಾಡಿಲ್ಲ. ಕಾಂಗ್ರೆಸ್‌ ಅಂದ್ರೆ ಸಮುದ್ರವಿದ್ದಂತೆ, ಯಾರು ಬರುತ್ತಾರೆ, ಯಾರು ಹೋಗುತ್ತಾರೆನ್ನುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಹೇಳಿದರು.

ಕಾರವಾರ (ಆ.20): ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ ಅವರು ಆತ್ಮೀಯರಾಗಿದ್ದರೂ ಯಾವತ್ತೂ ನನ್ನ ಜತೆಗೆ ಕಾಂಗ್ರೆಸ್‌ ಸೇರ್ಪಡೆ ಕುರಿತು ಮಾತನಾಡಿಲ್ಲ. ಕಾಂಗ್ರೆಸ್‌ ಅಂದ್ರೆ ಸಮುದ್ರವಿದ್ದಂತೆ, ಯಾರು ಬರುತ್ತಾರೆ, ಯಾರು ಹೋಗುತ್ತಾರೆನ್ನುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಹೇಳಿದರು. ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ ಅವರ ಘರ್‌ ವಾಪ್ಸಿ ಕುರಿತ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ನಾನು ರಾಜಕೀಯಕ್ಕೆ ಬರುವ ಮೊದಲೇ ಕಾಂಗ್ರೆಸ್‌ ಸಮುದ್ರ ಎಂದು ನನಗೆ ಕೆಲವರು ಹೇಳುತ್ತಿದ್ದರು. 

ಈಗಲೂ ಅದನ್ನೇ ಹೇಳುತ್ತಾರೆ. ಮುಂದೆಯೂ ಕಾಂಗ್ರೆಸ್‌ ಎನ್ನುವುದು ಸಮುದ್ರವೇ ಆಗಿರುತ್ತದೆ. ಮಂಕಾಳ ವೈದ್ಯ ಸಚಿವರಾಗಬೇಕೆನ್ನುವ ತೀರ್ಮಾನವನ್ನು ಹೈಕಮಾಂಡ್‌ ತೆಗೆದುಕೊಂಡಿದೆ. ಅದೇ ರೀತಿ ಯಾರು ಪಕ್ಷಕ್ಕೆ ಬರಬೇಕು, ಬರಬಾರದು ಎನ್ನುವ ಕುರಿತು ಪಕ್ಷದ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳುತ್ತದೆ. ಹೈಕಮಾಂಡ್‌ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ಇದರಲ್ಲಿ ವೈಯಕ್ತಿಕ ಎನ್ನುವುದು ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು. 

ರಾಜ್ಯದಲ್ಲಿ ಅವನತಿಯ ಹಾದಿಯಲ್ಲಿ ಬಿಜೆಪಿ ಸಾಗಿದೆ: ಐವನ್‌ ಡಿಸೋಜ ಟೀಕೆ

ಹೆಬ್ಬಾರ್‌ ಕಾಂಗ್ರೆಸ್‌ ಸೇರ್ಪಡೆ ವಿರೋಧಿಸಿ ಶಾಸಕ ಭೀಮಣ್ಣ ನಾಯ್ಕ ನೀಡಿರುವ ಹೇಳಿಕೆ ವೈಯಕ್ತಿಕವೋ, ಪಕ್ಷದ್ದೋ ಗೊತ್ತಿಲ್ಲ. ಅವರ ಅಭಿಪ್ರಾಯ ಅವರು ಹೇಳಿದ್ದಾರೆ. ನಾನೊಬ್ಬ ಜವಾಬ್ದಾರಿ ಸ್ಥಾನದಲ್ಲಿದ್ದು ಏನನ್ನೂ ಹೇಳಲು ಆಗಲ್ಲ. ಈ ವಿಚಾರದಲ್ಲಿ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದರು. ಹೆಬ್ಬಾರ್‌ 10 ವರ್ಷಗಳಿಂದ ನನಗೆ ಆತ್ಮೀಯ ಸ್ನೇಹಿತರು. ಅವರು ಸಚಿವರಾಗಿದ್ದಲೂ ನಮ್ಮ ಸ್ನೇಹ ಹಾಳಾಗಿಲ್ಲ. ತಾವು ಸಚಿವನಾದಾಗಲೂ ಸ್ನೇಹ ಹಾಗೇ ಇದೆ. 

ನಾನು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಜಿ.ಟಿ.ದೇವೇಗೌಡ

ನಮ್ಮ ಬಳಿ ಪಕ್ಷ ಸೇರ್ಪಡೆ ಬಗ್ಗೆ ಅವರು ಯಾವುದೇ ಚರ್ಚೆ ಮಾಡಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಇದೇ ವೇಳೆ ಸ್ಪಷ್ಟನೆ ನೀಡಿದರು. ಡಿ.ಕೆ.ಶಿವಕುಮಾರ್‌ ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳಲು ಆಪರೇಷನ್‌ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಕ್ಕೆ, ಕಾಂಗ್ರೆಸ್‌ನ 136 ಸೀಟು ಡಿಕೆಶಿ, ಸಿದ್ದರಾಮಯ್ಯ ಇಬ್ಬರದ್ದೂ ಟೀಮ್‌ ಆಗಿದೆ. ಅದರಲ್ಲಿ ಆ ಟೀಮ್‌, ಈ ಟೀಮ್‌ ಎಂಬುದಿಲ್ಲ. ಎಲ್ಲರೂ ಒಂದಾಗಿ ಕೆಲಸ ಮಾಡುತ್ತೇವೆ. ಡಿ.ಕೆ.ಶಿವಕುಮಾರ್‌ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಹೈಕಮಾಂಡ್‌ ತೀರ್ಮಾನಿಸಿದರೆ ನಾವು 136 ಶಾಸಕರೂ ಅದಕ್ಕೆ ಬದ್ಧರಾಗಿರುತ್ತೇವೆ ಎಂದರು.