ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ: ಸಚಿವ ಅಶೋಕ್
ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗಟ್ಟಿಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಯಾಕೆ ಕರೆದು ಸಚಿವ ಸ್ಥಾನ ಕೊಡೋಣ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರು (ಏ.23): ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗಟ್ಟಿಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್,ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಯಾಕೆ ಕರೆದು ಸಚಿವ ಸ್ಥಾನ ಕೊಡೋಣ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ರಮ್ಯಾ ಅವರು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲೇ ಇರಲಿ. ಅವರು ಕಾಂಗ್ರೆಸ್ ಸಾಮಾಜಿಕ ಮಾಧ್ಯಮದ ಸಂಚಾಲಕರಾಗಿದ್ದರು. ಹಾಗಾಗಿ ಕಾಂಗ್ರೆಸ್‌ಗೆ ಅನುಕೂಲವಾಗಲಿ ಅಂತಾ ಇಂತಾ ಸ್ಟೇಟ್‌ಮೆಂಟ್ ಕೊಟ್ಟಿದ್ದಾರೆ. ನಮ್ಮಪಕ್ಷಕ್ಕೆ ಅವರ ಅಗತ್ಯವೇ ಇಲ್ಲ ಎಂದು ಅಶೋಕ್ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ವನಾಶ ಆಗಲಿದೆ: ಲಿಂಗಾಯತ ಸಿಎಂ ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, ಸಿದ್ದರಾಮಯ್ಯ ಹೇಳಿಕೆಯನ್ನು ನಾನು ಖಡಾಖಂಡಿತವಾಗಿ ಖಂಡಿಸ್ತೇನೆ. ಸ್ವಾಮೀಜಿಗಳು ಸಹ ಇದನ್ನು ಖಂಡಿಸಿದ್ದಾರೆ. ಸಮುದಾಯ ವಿರೋಧಿ ಹೇಳಿಕೆ ಇದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ವನಾಶ ಆಗಲಿದೆ. ಲಿಂಗಾಯತರ ಶಾಪ ಕಾಂಗ್ರೆಸ್‌ಗೆ ತಟ್ಟುತ್ತೆ ಎಂದು ಅಶೋಕ್ ಹೇಳಿದರು.
ಸಿಎಂ ಸ್ಥಾನ ಬಿಟ್ಟ ಮೇಲೆ ಬಿಎಸ್‌ವೈ ವರ್ಚಸ್ಸು ಹೆಚ್ಚಿದೆ: ಬಿ.ವೈ.ವಿಜಯೇಂದ್ರ
ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು: ಸಿದ್ದರಾಮಯ್ಯ ಹಿರಿಯರು. ಅವರಿಂದ ಇಂಥ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಸಿದ್ದರಾಮಯ್ಯ ಲಿಂಗಾಯತ ಸಮುದಾಯದ ಆತ್ಮ ಕುಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಇದೇ ಕಾಂಗ್ರೆಸ್ ಸಂಸ್ಕೃತಿ, ಇದು ಸಿದ್ದರಾಮಯ್ಯ ಘನತೆಗೆ ತಕ್ಕದಲ್ಲ. ಮುಂದಿನ ದಿನಗಳಲ್ಲಿ ಜನ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ ಎಂದು ತಿಳಿಸಿದರು.
ಸಿದ್ದು ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ, ಸಿಎಂ ಬೊಮ್ಮಾಯಿ: ಯಾವುದೇ ಸಮಾಜದ ಸಿಎಂ, ಮಂತ್ರಿ ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡ್ತಾರೆ. ಲೋಪದೋಷ ಆಗಿದ್ರೆ ಅದು ವೈಯಕ್ತಿಕ ಮಟ್ಟದಲ್ಲಿ ಆಗಿರುತ್ತಷ್ಟೇ. ರಾಹುಲ್ ಗಾಂಧಿ ಮೋದಿ ಸಮಯದಾಯದ ಬಗ್ಗೆ ಮಾತಾಡಿದ ಹಾಗೆ ಸಿದ್ದರಾಮಯ್ಯ ಲಿಂಗಾಯತ ಸಮುದಾಯದ ಬಗ್ಗೆ ಮಾತನಾಡಿದಾರೆ. ಇದು ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಎಚ್‌ಡಿಕೆಗೆ ಅನಾರೋಗ್ಯ: ಮಣಿಪಾಲ್ ಆಸ್ಪತ್ರೆಗೆ ದಾಖಲು! ವೈದ್ಯರು ಹೇಳಿದ್ದೇನು?
ಇನ್ನು ಕರ್ನಾಟಕದಲ್ಲಿ ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.