ವಿದ್ಯುತ್‌ ದರ ಹೆಚ್ಚಳ ಸರ್ಕಾರದ ತಪ್ಪು ನಿರ್ಧಾರ: ಶಾಸಕ ಅರವಿಂದ ಬೆಲ್ಲದ

ವಿದ್ಯುತ್‌ ದರ ಪರಿಷ್ಕರಣೆ ಮಾಡಲು ಆಗ್ರಹಿಸಿ ಇತಿಹಾಸದಲ್ಲೇ ಮೊದಲ ಬಾರಿಗೆ ವಾಣಿಜ್ಯೋದ್ಯಮ ಸಂಘದ ಸದಸ್ಯರು ರಾಜ್ಯಾದ್ಯಂತ ಬಂದ್‌ ಕರೆ ನೀಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

MLA Arvind Bellad Slams On Congress Govt At Dharwad gvd

ಧಾರವಾಡ (ಜೂ.22): ವಿದ್ಯುತ್‌ ದರ ಪರಿಷ್ಕರಣೆ ಮಾಡಲು ಆಗ್ರಹಿಸಿ ಇತಿಹಾಸದಲ್ಲೇ ಮೊದಲ ಬಾರಿಗೆ ವಾಣಿಜ್ಯೋದ್ಯಮ ಸಂಘದ ಸದಸ್ಯರು ರಾಜ್ಯಾದ್ಯಂತ ಬಂದ್‌ ಕರೆ ನೀಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುತ್‌ ವಿತರಣಾ ಸಂಸ್ಥೆ ಕೇಳಿದ ಪ್ರಮಾಣಕ್ಕಿಂತ ಹೆಚ್ಚು ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ಈ ಕುರಿತು ಸರ್ಕಾರ ಕೈಗೊಂಡ ನಿರ್ಧಾರ ತಪ್ಪಾಗಿದೆ. ಇದರಿಂದ ಕೈಗಾರಿಕೋದ್ಯಮಿಗಳು ಬೇರೆ ರಾಜ್ಯಗಳತ್ತ ಗಮನ ನೀಡುತ್ತವೆ. ಆಗ ನಿರುದ್ಯೋಗ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು.

ಗೃಹ ಜ್ಯೋತಿ ಯೋಜನೆಯ ಅಡಿ ಉಚಿತ ವಿದ್ಯುತ್‌ ನೀಡಲಿ. ಆದರೆ ವಾಮಮಾರ್ಗದ ಮೂಲಕ ವಿದ್ಯುತ್‌ ದರ ಏರಿಕೆ ಸರಿಯಲ್ಲ ಎಂದರು. ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಸ್ವಾಗತಿಸುತ್ತೇವೆ. ಆದರೆ, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆಟೋ, ಟೆಂಪೋ, ಖಾಸಗಿ ಬಸ್‌ ಮಾಲೀಕರು ತೊಂದರೆ ಸಿಲುಕುವಂತಾಗಿದ್ದು, ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು. ಅವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಬಿಆರ್‌ಟಿಎಸ್‌ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ಜನರು ಹುಬ್ಬಳ್ಳಿ -ಧಾರವಾಡ ಮಧ್ಯೆ ಸಂಚರಿಸುವ ಈ ಬಸ್‌ನಲ್ಲಿ ಉಚಿತ ಮಾಡಲು ಆಗ್ರಹಿಸಿದರು.

ಘೋಷಣೆ ಮಾಡಿದ ಯೋಜನೆ ಜಾರಿಗೆ ಸರ್ಕಾರ ನಿರಂತರ ಪ್ರಯತ್ನ: ಸಚಿವ ಶಿವಾನಂದ ಪಾಟೀಲ್

ಅನ್ನಭಾಗ್ಯ ಯೋಜನೆಯ 10 ಕೆಜಿ ಅಕ್ಕಿ ಪೂರೈಕೆಯ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೊಟ್ಟು ಮಾಡುವುದು ಸರಿಯಲ್ಲ. ಜನರಿಗೆ ಕೊಟ್ಟಮಾತಿನಂತೆ ನಡೆಯಬೇಕು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಬೇರೆ ಯಾವುದೇ ರಾಜ್ಯದಿಂದ ಅಕ್ಕಿ ಖರೀದಿಸಿ ಪೂರೈಸಬೇಕು. ಇಲ್ಲದಿದ್ದರೆ ಜನರು ದಂಗೆ ಏಳುತ್ತಾರೆ ಎಂದು ಎಚ್ಚರಿಸಿದರು.

5 ಕೆಜಿ ಅಕ್ಕಿ ಮೊತ್ತವನ್ನು ನೇರವಾಗಿ ಜನರ ಅಕೌಂಟ್‌ಗೆ ಹಾಕಿ: ರಾಜ್ಯ ಸರ್ಕಾರ ತಾನು ಕೊಟ್ಟಮಾತಿನಂತೆ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ವಿತರಣೆ ಮಾಡಬೇಕು. ಕೇಂದ್ರ ಸರ್ಕಾರ ವಿತರಣೆ ಮಾಡುತ್ತಿದ್ದ 5 ಕೆಜಿ ಅಕ್ಕಿಯ ಬದಲಿಗೆ ಅದರ ಮೊತ್ತವನ್ನು ನೇರವಾಗಿ ಜನರ ಬ್ಯಾಂಕ್‌ ಖಾತೆಗೆ ಹಾಕುವಂತೆ ನಾವೂ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ಸಣ್ಣ ಅಧಿಕಾರಿಗಳ ಮಾತು ಕೇಳಿ ಅಕ್ಕಿ ಸ್ಟಾಕ್‌ ಇದ್ದರೂ ಕೇಂದ್ರ ಕೊಡುತ್ತಿಲ್ಲ ಎಂದು ಆರೋಪ ಮಾಡುತ್ತಿದೆ. 

ರಾತ್ರಿ ಗಸ್ತು ನಡೆಸಿ: ಎಸ್ಪಿ, ಡಿಸಿಪಿಗಳಿಗೆ ಡಿಜಿಪಿ ಅಲೋಕ್‌ ಮೋಹನ್‌ ಸೂಚನೆ

ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲೂ ಕೇಂದ್ರ ಅಕ್ಕಿ ವಿತರಣೆ ಮಾಡುತ್ತಿಲ್ಲ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಹೇಳಿತ್ತು. ಆ ಪ್ರಕಾರ 10 ಕೆಜಿ ಅಕ್ಕಿ ವಿತರಣೆ ಮಾಡಲಿ. ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿಯ ಮೊತ್ತವನ್ನು ನೇರವಾಗಿ ಜನರ ಬ್ಯಾಂಕ್‌ ಖಾತೆಗೆ ಹಾಕುವಂತೆ ನಾವೂ ಒತ್ತಾಯ ಮಾಡುತ್ತೇವೆ ಎಂದರು. ಜೂನ್‌ 1ರಿಂದ ರಾಜ್ಯ ಸರ್ಕಾರ ಅಕ್ಕಿ ವಿತರಣೆ ಮಾಡಬೇಕಿತ್ತು. ಆದರೆ, ಕುಂಟು ನೆಪ ಹೇಳುತ್ತಿದೆ. ಆ ಮೂಲಕ ಜನರ ದಾರಿ ತಪ್ಪಿಸುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ ಎಂದರು.

Latest Videos
Follow Us:
Download App:
  • android
  • ios