ತಮ್ಮ ಶಾಸಕರನ್ನೇ ಹೆದರಿಸಲು ಕಾಂಗ್ರೆಸ್ ಆಪರೇಷನ್ ತಂತ್ರ: ಬಾಲಚಂದ್ರ ಜಾರಕಿಹೊಳಿ
ಸ್ಪಷ್ಟಬಹುಮತಗಳೊಂದಿಗೆ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆದರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಿದ್ದಾರೆ.
ಬೆಳಗಾವಿ (ಆ.23): ಸ್ಪಷ್ಟಬಹುಮತಗಳೊಂದಿಗೆ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆದರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಯಾವ ಶಾಸಕರೂ ಹೋಗುವ ಪ್ರಶ್ನೆಯೇ ಇಲ್ಲ ಎಂದು ಎಂದು ಕೆಎಂಎಫ್ ಮಾಜಿ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವು ಸುಮ್ಮನಿರದಿದ್ದರೇ ಬಿಜೆಪಿ, ಜೆಡಿಎಸ್ ಶಾಸಕರನ್ನು ಕರೆ ತರುತ್ತೇವೆಂದು ಕಾಂಗ್ರೆಸ್ ಶಾಸಕರನ್ನೇ ಹೆದರಿಸಲಾಗುತ್ತಿದೆ. ಕಳೆದ ಬಾರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರದಲ್ಲಿ ಮೊದಲ ತಿಂಗಳಲ್ಲೇ ಆರಂಭವಾಗಿ ಒಂದು ವರ್ಷ ನಂತರ ಸ್ಫೋಟವಾಗಿತ್ತು. ಈಗ ಕಾಂಗ್ರೆಸ್ ಮುಖಂಡರು ಈಗಲೇ ಎಚ್ಚೆತ್ತುಕೊಂಡು ತಮ್ಮ ಶಾಸಕರನ್ನು ಹೆದರಿಸುತ್ತಿದ್ದಾರೆ. ಇದು ನನ್ನ ವೈಯಕ್ತಿಕ ಹೇಳಿಕೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಜನ ಸ್ಪಷ್ಟಬಹುಮತ ನೀಡಿದ್ದಾರೆ. ಅವರು ಒಳ್ಳೆಯರೀತಿ ಸರ್ಕಾರ ನಡೆಸಬೇಕು. ಅವರಿಗೆ ತೊಂದರೆ ಕೊಟ್ಟು ನಾವ್ಯಾಕೆ ಕೆಟ್ಟು ಹೆಸರು ತೆಗೆದುಕೊಳ್ಳಬೇಕು ಎಂದರು.
ಚಂದ್ರಯಾನ-3ರಿಂದಾಗಿ ನೈಸ್ ದಾಖಲೆ ಬಿಡುಗಡೆ ಮುಂದಕ್ಕೆ: ಎಚ್.ಡಿ.ಕುಮಾರಸ್ವಾಮಿ
ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ: ಮುಂಬರುವ ಬೆಳಗಾವಿ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿಲ್ಲ. ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಲೋಕಸಭಾ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸಿನ ಮೇಲೆಯೇ ನಡೆಯುತ್ತದೆ. ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡುತ್ತೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಲ್ಲಿನ ಬಣಗಳಿಂದಾಗಿ ಜನರು ನಮ್ಮ ವಿರುದ್ಧ ತೀರ್ಪು ನೀಡಿದ್ದಾರೆ. ಈಗ ಜಿಲ್ಲೆಯಲ್ಲಿ ಪಕ್ಷದಲ್ಲಿ ಯಾವುದೇ ಬಣಗಳು ಇಲ್ಲ. ನಾವೆಲ್ಲರೂ ಒಂದಾಗಿಯೇ ಚುನಾವಣೆ ಎದುರಿಸುತ್ತೇವೆ. ಪಕ್ಷದ ಹೈಕಮಾಂಡ್ ಯಾರಿಗೆ ನಾಯಕತ್ವ ಜವಾಬ್ದಾರಿ ವಹಿಸುತ್ತದೆಯೋ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಣ್ಣನಾಗಿ ಹೇಳ್ತೀನಿ, ಲೂಟಿ ನಿಲ್ಲಿಸಿ: ಡಿಕೆಶಿಗೆ ಎಚ್‌ಡಿಕೆ ಟಾಂಗ್
ಜಿಲ್ಲಾ ವಿಭಜನೆಗೆ ಸಹಮತ: ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಯಾಗಲೇಬೇಕಿದೆ. ಗೋಕಾಕ, ಚಿಕ್ಕೋಡಿಯನ್ನು ನೂತನ ಜಿಲ್ಲೆಯನ್ನಾಗಿಸಬೇಕು. ಈ ಮೊದಲು ಬೆಳಗಾವಿ ಜಿಲ್ಲೆ ವಿಭಜನೆ ಮಾಡಬಾರದೆಂದು ದೊಡ್ಡ ದೊಡ್ಡ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದರು. ಆದರೆ, ಈಗ ಮತ್ತೆ ಜಿಲ್ಲಾ ವಿಭಜನೆ ಕೂಗು ಕೇಳಿಬರುತ್ತಿದೆ. ಬೇರೆ ತಾಲೂಕಿನವರು ಜಿಲ್ಲಾ ಘೋಷಣೆಗೆ ಬೇಡಿಕೆಯಿಟ್ಟಿದ್ದಾರೆ. ಅದು ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.