Asianet Suvarna News Asianet Suvarna News

ಶಾಸಕ ಯತ್ನಾಳ್ ಮಹಾ ಸುಳ್ಳುಗಾರ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಯತ್ನಾಳ್ ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಾಶಿಮ್ ಪೀರಾ ದರ್ಗಾದ ಧರ್ಮಾಧಿಕಾರಿ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮೀ ಮೌಲ್ವಿ ಜೊತೆಗೆ ವೇದಿಕೆ ಹಂಚಿಕೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

MLA Basanagouda Patil Yatnal is a Big Liar Says CM Siddaramaiah gvd
Author
First Published Dec 8, 2023, 10:23 PM IST

ಬೆಳಗಾವಿ (ಡಿ.08): ಯತ್ನಾಳ್ ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಾಶಿಮ್ ಪೀರಾ ದರ್ಗಾದ ಧರ್ಮಾಧಿಕಾರಿ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮೀ ಮೌಲ್ವಿ ಜೊತೆಗೆ ವೇದಿಕೆ ಹಂಚಿಕೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಶ್ಮೀ ಅವರೊಂದಿಗೆ ಬಹಳ ವರ್ಷಗಳಿಂದ ಸಂಬಂಧ ಇದೆ. ಯತ್ನಾಳ್ ಮಹಾ ಸುಳ್ಳುಗಾರ. ಹಾಶ್ಮೀ ಅವರ ಮೇಲಿನ ಆರೋಪ ಸಾಬೀತು ಮಾಡಲಿ. 

ಅವರದ್ದೇ ಸರ್ಕಾರ 10 ವರ್ಷಗಳಿಂದ ಇದೆ. ಇಷ್ಟು ವರ್ಷ ಏನು ಮಾಡುತ್ತಿದ್ದರು? ಬರೀ ಆರೋಪ ಮಾಡುವುದಲ್ಲ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ಯತ್ನಾಳ್‌ ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಪಕ್ಷದ ಅಧ್ಯಕ್ಷಗಿರಿಗಾಗಿ ಸರ್ವ ಪ್ರಯತ್ನ ಮಾಡಿದರು. ಕಡೆಗೂ ಯಾವುದೂ ದಕ್ಕಲಿಲ್ಲ. ಇದರಿಂದ ಅವರು ಹತಾಶ ರಾದಂತಿದೆ. ಹೀಗಾಗಿ ಸುಳ್ಳು ಆರೋಪ ಮಾಡುತ್ತಾ ದ್ವೇಷದ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಹೇಳಿದರು.

ಯತ್ನಾಳ ಆರೋಪ ಸಾಬೀತುಪಡಿಸಲಿ: ಮುಸ್ಲಿಂ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಸ್ಮಿ ಪ್ರಚೋದನಾಕಾರಿ ಭಾಷಣ ಮಾಡಿರುವ ಆರೋಪ ಸಾಬೀತಾಗಿಲ್ಲ.ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕೇವಲ ಹಿಟ್‌ ಆ್ಯಂಡ್‌ ರನ್‌ ಮಾಡದೇ ಅದನ್ನು ಸಾಬೀತು ಪಡಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಒತ್ತಾಯಿಸಿದರು. ನಗರದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ರಾಜಕೀಯ ದೃಷ್ಟಿಯಿಂದ ಯತ್ನಾಳ ಸಮಾಜ ವಿಭಜನೆ ಕೆಲಸ ಮಾಡುತ್ತಾರೆ. ಅದು ಸತ್ಯಕ್ಕೆ ದೂರವಾದ ವಿಚಾರ ಎಂದರಲ್ಲದೆ, ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಕುರಿತು ಚರ್ಚೆ ಮಾಡಲಾಗುತ್ತಿದೆ ಎಂದರು.

ಮೆಕ್ಕೆಜೋಳ ಘಟಕ ದುರಂತ ಸಂತ್ರಸ್ತರಿಗೆ 5 ಲಕ್ಷ ರು. ಪರಿಹಾರ: ಸಚಿವ ಸಂತೋಷ್‌ ಲಾಡ್‌

ಪತ್ರ ಬರೆದು ತಿಂಗಳಾಯ್ತು: ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ ಎಂಬ ಬಿಜೆಪಿ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಬಿಜೆಪಿಗೆ, ಕೇಂದ್ರ ಸರ್ಕಾರಕ್ಕೆ ನಾಚಿಕೆ ಆಗಬೇಕು. ನಿರ್ಮಲಾ ಸೀತಾರಾಮನ್ ಕರ್ನಾಟಕದವರು. ಅವರಿಗೆ ನಾಚಿಕೆ ಆಗುವುದಿಲ್ಲವೇ? ಇದನ್ನು ಹೇಳುವ ಮುಂಚೆ ಅವರು ಉತ್ತರ ಕೊಡಬೇಕು. ಪತ್ರ ಬರೆದು ಒಂದೂವರೆ ತಿಂಗಳಾದರೂ ಒಂದು ರುಪಾಯಿ ಬಿಡುಗಡೆ ಮಾಡಿಲ್ಲ ಎಂದವರು ದೂರಿದರು.

Follow Us:
Download App:
  • android
  • ios