Asianet Suvarna News Asianet Suvarna News

ಡಿಕೆಶಿ ಯಾವ ಕಾಲಕ್ಕೂ ಸಿಎಂ ಆಗಲ್ಲ: ಶಾಸಕ ಯತ್ನಾಳ್‌ ಸ್ಫೋಟಕ ಹೇಳಿಕೆ

ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಯಾವ ಕಾಲಕ್ಕೂ ಮುಖ್ಯಮಂತ್ರಿ ಆಗಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭವಿಷ್ಯ ನುಡಿದರು. 

Mla Basanagouda Patil Yatnal Slams On DCM DK Shivakumar gvd
Author
First Published Aug 18, 2023, 11:05 PM IST

ವಿಜಯಪುರ (ಆ.18): ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಯಾವ ಕಾಲಕ್ಕೂ ಮುಖ್ಯಮಂತ್ರಿ ಆಗಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭವಿಷ್ಯ ನುಡಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ಅವರು ಸದ್ಯಕ್ಕೆ ಸೂಪರ್‌ ಸಿಎಂ ಆಗಿದ್ದಾರೆ. ಎಲ್ಲ ರಾಜಭಾರ ಡಿಕೆಶಿ ಮಾಡುತ್ತಿದ್ದಾರೆ. 

ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರಿ ನೋವಿದೆ. ಸಿದ್ದರಾಮಯ್ಯನವರು ಸುಮ್ಮನೆ ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ, ಎಲ್ಲ ಆಡಳಿತ ಮಾತ್ರ ಡಿ.ಕೆ.ಶಿವಕುಮಾರ ಅವರ ಕೈಯಲ್ಲಿದೆ. ಮುಂದಿನ ಆರು ತಿಂಗಳಾಗಲಿ ಇಲ್ಲವೇ ಐದು ವರ್ಷಗಳಾಗಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸಿದ್ದರಾಮಯ್ಯನವರೇ ಕಾಂಗ್ರೆಸ್ಸಿನ ಕೊನೆಯ ಮುಖ್ಯಮಂತ್ರಿ ಎಂದು ಹೇಳಿದರು.

ಬಿಜೆಪಿಗರು ಕಾಂಗ್ರೆಸ್‌ಗೆ ಹೋಗಲ್ಲ, ನಾಳೆ ಏನಾಗುತ್ತೋ ಗೊತ್ತಿಲ್ಲ: ಪ್ರಲ್ಹಾದ್‌ ಜೋಶಿ

ಇನ್ನು 6 ತಿಂಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ: ಆರು ತಿಂಗಳೊಳಗೆ ಅಥವಾ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರದ ಪತನ ನಿಶ್ಚಿತ. ಈಗಾಗಲೇ 25 ಶಾಸಕರು ಕಾಂಗ್ರೆಸ್‌ ಪಕ್ಷದಿಂದ ಹೊರಬರಲು ಸಿದ್ಧರಾಗಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ‘ಬಾಂಬ್‌’ ಸಿಡಿಸಿದ್ದಾರೆ. 

ಕಾಂಗ್ರೆಸ್‌ ಸರ್ಕಾರ ಐದು ವರ್ಷ ಕಾಲ ಸುಭದ್ರ ಆಡಳಿತ ನೀಡಲಿದೆ ಎಂಬ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಯತ್ನಾಳ್‌, ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ದೊಡ್ಡಮಟ್ಟದ ವರ್ಗಾವಣೆ ದಂಧೆ, ಐದು ಗ್ಯಾರಂಟಿಗಳ ಮೋಸದಿಂದಾಗಿ ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಶಾಸಕರು ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್‌ನ 136 ಶಾಸಕರ ಪೈಕಿ 90ಕ್ಕೂ ಅಧಿಕ ಶಾಸಕರು ಅತೃಪ್ತಿ ಹೊಂದಿದ್ದಾರೆ. 25 ಶಾಸಕರು ಪಕ್ಷದಿಂದ ಹೊರಬರಲು ಸಿದ್ಧರಿದ್ದಾರೆ. ಇದರಿಂದಾಗಿ ಲೋಕಸಭೆ ಚುನಾವಣೆ ಒಳಗಾಗಿ ಅಥವಾ ಲೋಕಸಭೆ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರಿನ ಎಲ್ಲ ಶಾಸಕರ ಬಾಯಿ ಬಂದ್‌ ಮಾಡಿ ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ಸರ್ಕಾರದಲ್ಲಿನ ಭ್ರಷ್ಟಾಚಾರ ಕುರಿತು ಅವರದ್ದೇ ಪಕ್ಷದ ಶಾಸಕ ಬಸವರಾಜ ರಾಯರೆಡ್ಡಿ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಹೊಟ್ಟೆಈಗ ಖಾಲಿಯಾಗಿದೆ. 

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿಗೆ ಶ್ರಮಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಎರಡು ವರ್ಷ ಅಭಿವೃದ್ಧಿಗಾಗಿ ಹಣ ಕೇಳಬೇಡಿ ಎಂದು ಹೇಳಿದ್ದಾರೆ. ಇದು ಆಡಳಿತಾರೂಢ ಪಕ್ಷದ ಶಾಸಕರನ್ನು ಕಂಗೆಡಿಸಿದೆ ಎಂದಿರುವ ಯತ್ನಾಳ್‌, ನಾವಾಗಿಯೇ ಕಾಂಗ್ರೆಸ್‌ ಸರ್ಕಾರವನ್ನು ಕೆಡವಲ್ಲ. ಅದಾಗಿಯೇ ಬೀಳಲಿದೆ. ಕಾಂಗ್ರೆಸ್‌ನಿಂದ ಶಾಸಕರು ಬಂದರೆ ನಾವು ಸ್ವಾಗತಿಸುತ್ತೇವೆ. ಸರ್ಕಾರ ರಚನೆ ಮಾಡುತ್ತೇವೆ. ನಾವೇನು ಸನ್ಯಾಸಿಗಳಲ್ಲ ಎಂದರು.

Follow Us:
Download App:
  • android
  • ios