ಭ್ರಷ್ಟಾಚಾರದ ಪಾಪದ ಕೂಸು ಹುಟ್ಟು ಹಾಕಿದವರೇ ಕಾಂಗ್ರೆಸ್ಸಿಗರು: ಬಿ.ವೈ.ವಿಜಯೇಂದ್ರ

ಬಿಜೆಪಿ ಬ್ಲಾಕ್‌ಮೇಲ್‌ ರಾಜಕಾರಣ ಮಾಡುತ್ತಿದೆ ಎಂದು ಡಿಕೆಶಿ ಹೇಳಿಕೆ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಎಂದು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿರುಗೇಟು ನೀಡಿದ್ದಾರೆ. 

MLA BY Vijayendra Slams On Congress Govt gvd

ಶಿವಮೊಗ್ಗ (ಆ.10): ಬಿಜೆಪಿ ಬ್ಲಾಕ್‌ಮೇಲ್‌ ರಾಜಕಾರಣ ಮಾಡುತ್ತಿದೆ ಎಂದು ಡಿಕೆಶಿ ಹೇಳಿಕೆ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಎಂದು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್‌ ಮೇಲೆ ಈ ರೀತಿಯ ಆರೋಪ ಕೇಳಿ ಬರುತ್ತಿಲ್ಲ, ರಾಜ್ಯದ ಎಲ್ಲಾ ಮಂತ್ರಿಗಳ ಮೇಲೂ ಆರೋಪ ಕೇಳಿ ಬರುತ್ತಿದೆ. ಮುಂಬರುವ ದಿನಗಳಲ್ಲಿ ಎಲ್ಲಾ ಸತ್ಯ ಸಂಗತಿಗಳು ಹೊರ ಬರುತ್ತವೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳೊಳಗೆ ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಯ ವರ್ಗಾವಣೆ ಮಾಡಿಸಲಾಗುತ್ತಿಲ್ಲ, ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿಲ್ಲ ಎಂದು ಶಾಸಕರಲ್ಲಿ ಬೇಸರವಿದೆ. ಯಾಕಾಗಿ ನಾವು ಶಾಸಕರಾಗಿದ್ದೇವೆ ಎಂದು ಅವರನ್ನೇ ಅವರು ಪ್ರಶ್ನೆ ಮಾಡಿಕೊಳ್ಳುವ ವಾತಾವರಣ ಸೃಷ್ಟಿಯಾಗಿದೆ. ಕ್ಷೇತ್ರದ ಜನತೆ ಕೂಡ ಶಾಪ ಹಾಕುತ್ತಿದ್ದಾರೆ ಎಂದರು.

ಸಮಸ್ಯೆ ಬಗೆಹರಿಸಲು ಸರ್ಕಾರವೇ ನಿಮ್ಮ ಮುಂದೆ ಬರಲಿದೆ: ಸಚಿವ ನಾಗೇಂದ್ರ

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷದವರು ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಆಗ ದೇಶದಲ್ಲಿ ಮತ್ತು ರಾಜ್ಯದಲ್ಲಿ ಭ್ರಷ್ಟಾಚಾರದ ಕೂಸು ಪಾಪದ ಹುಟ್ಟು ಹಾಕಿದವರೇ ಕಾಂಗ್ರೆಸ್ಸಿಗರು ಎಂದು ಹೇಳಿದ್ದೆವು, ಈಗ ಅದು ನಿಜವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದು ಮೂರು ತಿಂಗಳಾಗಲಿಲ್ಲ, ಆಗಲೇ ಇವರ ಹಣೆಬರಹ ಏನೆಂದು ರಾಜ್ಯದ ಜನತೆಗೆ ಗೊತ್ತಾಗುತ್ತಿದೆ ಎಂದು ದೂರಿದರು.

ವರ್ಗಾವಣೆ ದಂಧೆಯಲ್ಲಿ: ಕಾಂಗ್ರೆಸ್‌ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ಮಂತ್ರಿಗಳ ವಿರುದ್ಧವೇ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಗುತ್ತಿಗೆದಾರರು ಮಂತ್ರಿಗಳಿಗೆ ನೇರ ಸವಾಲು ಹಾಕಿದ್ದಾರೆ. ಸತ್ಯ ಹೊರ ಬರುತ್ತಿದೆ. ಇವರ ಬಂಡವಾಳ ಬಯಲಾಗಿದೆ ಎಂದು ಆರೋಪಿಸಿದರು.

ದಳಪತಿಗಳ ತಳಮಳ: ಒಂದು ಕಾಲದ ಆಪ್ತ ಮಿತ್ರರು ಈಗ ಆಜನ್ಮ ಶತ್ರುಗಳು!

ಭ್ರಷ್ಟಾಚಾರ ಎಂದರೆ ಕಾಂಗ್ರೆಸ್‌ ಪಕ್ಷ: ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ ಎಂದು ಗೊತ್ತಾಗುತ್ತಿದೆ. ರಾಜ್ಯದ ಜನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ರಾಜ್ಯದ ಜನ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ ಎಂದು ಭವಿಷ್ಯ ನುಡಿದರು.

Latest Videos
Follow Us:
Download App:
  • android
  • ios