Asianet Suvarna News Asianet Suvarna News

ದ್ವೇಷದಿಂದ ಕಾಂಗ್ರೆಸ್‌ ಸರ್ಕಾರದ ಆಡಳಿತ ಆರಂಭ: ವಿಜಯೇಂದ್ರ

ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹಾಗೂ ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ಕಾಂಗ್ರೆಸ್‌ ದ್ವೇಷದ ರಾಜಕಾರಣದಿಂದಲೇ ಆಡಳಿತ ಪ್ರಾರಂಭಿಸಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. 

MLA BY Vijayendra Slams On Karnataka Congress Government gvd
Author
First Published May 28, 2023, 8:02 AM IST

ಬೆಂಗಳೂರು (ಮೇ.28): ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹಾಗೂ ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ಕಾಂಗ್ರೆಸ್‌ ದ್ವೇಷದ ರಾಜಕಾರಣದಿಂದಲೇ ಆಡಳಿತ ಪ್ರಾರಂಭಿಸಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಶನಿವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ನಡೆಗೆ ಬಿಜೆಪಿ ಬಗ್ಗುವುದಿಲ್ಲ. 

ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯಾದಾಗ ಅನುಕಂಪದ ಆಧಾರದಲ್ಲಿ ಅವರ ಕುಟುಂಬಕ್ಕೆ ಉದ್ಯೋಗ ನೀಡಲಾಗಿತ್ತು. ಅದನ್ನು ಸರ್ಕಾರ ರದ್ದುಪಡಿಸಿದೆ. ಕಾಂಗ್ರೆಸ್‌ ಇಷ್ಟೊಂದು ಕೀಳುಮಟ್ಟದ ರಾಜಕಾರಣ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ ಎಂದು ಟೀಕಾಪ್ರಹಾರ ನಡೆಸಿದರು. ತಡವಾಗಿಯಾದರೂ ಸಚಿವ ಸಂಪುಟ ರಚನೆ ಮಾಡಲಾಗಿದೆ. ಇನ್ನಾದರೂ ಸರ್ಕಾರ ತಾನು ಕೊಟ್ಟಭರವಸೆಗಳನ್ನು ಈಡೇರಿಸುವ ಕೆಲಸ ಮಾಡಬೇಕು. ಜನರು ಸಾಕಷ್ಟುನಿರೀಕ್ಷೆಯನ್ನು ಸರ್ಕಾರದ ಮೇಲೆ ಇಟ್ಟುಕೊಂಡಿದ್ದಾರೆ ಎಂದರು.

ಬೆಂ.ನಗರ ವಿವಿಯಲ್ಲಿ ವಿದೇಶಿ ಭಾಷೆಯಲ್ಲಿ ಡಿಗ್ರಿ: ಫ್ರೆಂಚ್‌, ಜರ್ಮನ್‌, ಸ್ಪ್ಯಾನಿಷ್‌ ಭಾಷೆ ಪರಿಚಯ

ಸೋಲಿನ ಹೊಣೆ ಎಲ್ಲರೂ ಹೊರಬೇಕು: ಬಿಜೆಪಿಯ ಸೋಲಿಗೆ ಯಾವುದೇ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡುವುದು ಸರಿಯಲ್ಲ. ನಾವೆಲ್ಲರೂ ಸೋಲಿನ ಹೊಣೆ ಹೊರಬೇಕು ಎಂದು ಬಿಜೆಪಿಯ ನೂತನ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ದೇವಾಲಯ ವಿಧಾನಸೌಧಕ್ಕೆ ಮೊದಲ ಬಾರಿಗೆ ಶಾಸಕನಾಗಿ ಬಂದಿದ್ದೇನೆ. ಈ ದಿನ ತುಂಬಾ ಸಂತೋಷ ಹಾಗೂ ಹೆಮ್ಮೆ ಎನಿಸುತ್ತಿದೆ. ಈ ಅವಕಾಶ ಮಾಡಿಕೊಟ್ಟಶಿಕಾರಿಪುರ ವಿಧಾನಸಭಾ ಕ್ಷೇತ್ರದ ಎಲ್ಲಾ ಮತದಾರರು, ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ದೇವರು ಮೆಚ್ಚುವ ರೀತಿ ಪ್ರಾಮಾಣಿಕವಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಸಕ್ರಿಯವಾಗಿ ಕೆಲಸ ಮಾಡುತ್ತೇನೆ. ರಾಜ್ಯದ ಹಾಗೂ ಪಕ್ಷದ ಹಿತದೃಷ್ಟಿಯಿಂದ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದರು.

ಚಾಲಕರಹಿತ ‘ನಮ್ಮ ಮೆಟ್ರೋ’ ನಿರ್ವಹಣೆಗೆ ಬೈಯಪ್ಪನಹಳ್ಳಿ ಡಿಪೋ ಬಳಿ ಹೊಸ ಕೇಂದ್ರ ನಿರ್ಮಾಣ

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಈ ರೀತಿಯ ಚರ್ಚೆ ಮಾಡುವುದು ಸರಿಯಲ್ಲ. ಬಿಜೆಪಿ ಹಿನ್ನಡೆಗೆ ಸಾಕಷ್ಟುಕಾರಣಗಳಿವೆ. ಪಕ್ಷದ ಹಿರಿಯರಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಂತೋಷ್‌ ಸೇರಿದಂತೆ ಹಿರಿಯರು ಕುಳಿತು ಚರ್ಚಿಸುತ್ತಿದ್ದಾರೆ. ಪಕ್ಷದ ಸೋಲಿಗೆ ಯಾರೋ ಒಬ್ಬರನ್ನು ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ನಾವೆಲ್ಲರೂ ಸೋಲಿನ ಹೊಣೆ ಹೊರಬೇಕು ಎಂದು ಹೇಳಿದರು.

Follow Us:
Download App:
  • android
  • ios