ಜೈಲಿಗೆ ಹೋದರೂ ಸೀಟು ಬಿಡುವುದಿಲ್ಲ ಎಂಬ ಮನಸ್ಥಿತಿ ಸಿದ್ದರಾಮಯ್ಯನವರಿಗಿದೆ: ಶಾಸಕ ಸಿಮೆಂಟ್ ಮಂಜುನಾಥ್
ಜೈಲಿಗೆ ಹೋದರೂ ಸೀಟು ಬಿಡುವುದಿಲ್ಲ ಎಂಬ ಮನಸ್ಥಿತಿಯನ್ನು ಹೊಂದಿದ ವ್ಯಕ್ತಿ ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷವೂ ಒಂದೇ ಧೋರಣೆ ಉಳ್ಳವರು ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರೂ ಆದ ಶಾಸಕ ಸಿಮೆಂಟ್ ಮಂಜುನಾಥ್ ಟೀಕಿಸಿದರು.
ಮೈಸೂರು (ಆ.22): ಜೈಲಿಗೆ ಹೋದರೂ ಸೀಟು ಬಿಡುವುದಿಲ್ಲ ಎಂಬ ಮನಸ್ಥಿತಿಯನ್ನು ಹೊಂದಿದ ವ್ಯಕ್ತಿ ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷವೂ ಒಂದೇ ಧೋರಣೆ ಉಳ್ಳವರು ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರೂ ಆದ ಶಾಸಕ ಸಿಮೆಂಟ್ ಮಂಜುನಾಥ್ ಟೀಕಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವು ಅಧಿಕಾರ ಮಾಡಬಾರದೆಂದು ನಾವು ಹೇಳುತ್ತಿಲ್ಲ. ದೇವರಾಜ ಅರಸು ಅವರಿಗೆ ಹೋಲಿಕೆ ಮಾಡಿಕೊಳ್ಳುವ ಸಿದ್ದರಾಮಯ್ಯ ಅವರು ಅಧಿಕಾರ ಎಂಬ ಸೀಟನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನೇರವಾಗಿ ಆರೋಪ ಇರುವ ಕಾರಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಲ್ಲದೆ, ತನಿಖೆ ಎದುರಿಸಬೇಕು. ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸಾಬೀತಾದರೆ ಮತ್ತೆ ಸಿಎಂ ಆಗಬಹುದು; ನಮಗೇನೂ ಬೇಜಾರಿಲ್ಲ ಎಂದು ಅವರು ತಿಳಿಸಿದರು. ಅಧಿಕಾರದಲ್ಲಿರುವ ಕಾಂಗ್ರೆಸ್, ದಲಿತರ ದುಡ್ಡನ್ನು ಲೂಟಿ ಮಾಡುವುದನ್ನು ನಿಲ್ಲಿಸಬೇಕು. ಮೊಟ್ಟ ಮೊದಲು ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟು ಕೆಳಗಿಳಿಯಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯಪಾಲರು ಒಬ್ಬ ದಲಿತ ವ್ಯಕ್ತಿ ಎಂಬ ಏಕೈಕ ಕಾರಣಕ್ಕಾಗಿ ಕಾಂಗ್ರೆಸ್ಸಿಗರು ಅವರ ಅವಹೇಳನ ಮಾಡುತ್ತಿರುವ ಸಂಶಯ ಬರುತ್ತಿದೆ. ಒಬ್ಬ ಪರಿಶಿಷ್ಟ ಪಂಗಡದ ಹೆಣ್ಣುಮಗಳು ರಾಷ್ಟ್ರಪತಿ ಹುದ್ದೆಗೆ ಏರಿದಾಗ ಕಾಂಗ್ರೆಸಿನವರು ಏಕವಚನದಲ್ಲಿ ಸಂಬೋಧಿಸಿದ್ದರು. ಎಸ್.ಇ.ಪಿ, ಟಿ.ಎಸ್.ಪಿ ಹಣವನ್ನು ಅನ್ಯ ಉದ್ದೇಶಕ್ಕಾಗಿ ಬಳಸಿ ದುರ್ಬಳಕೆ ಮಾಡಿದ್ದಾಗಿ ಅವರು ಆರೋಪಿಸಿದರು. ರಾಜ್ಯಪಾಲರ ಅವಹೇಳನ ಖಂಡನೀಯ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಬದುಕಿದೆಯೇ ಸತ್ತಿದೆಯೇ?
ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ಜಯಭೇರಿ: ಕಾಂಗ್ರೆಸ್‌ಗೆ ಮುಖಭಂಗ
ರಾಜ್ಯಪಾಲರ ಚಿತ್ರಕ್ಕೆ ಚಪ್ಪಲಿಯಲ್ಲಿ ಕಾಂಗ್ರೆಸ್ಸಿ ನವರು ಹೊಡೆದರಲ್ಲವೇ? ಇವರಿಗೆ ಕಿಂಚಿತ್ತು ಮಾನ ಮರ್ಯಾದೆ ಇದೆಯೇ ಎಂದರು. ರಾಜ್ಯಪಾಲರನ್ನು ಏಕವಚನದಲ್ಲಿ ಮಾತನಾಡಿದ ಮುಖಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕಿತ್ತು. ಆದರೆ, ಆ ಕೆಲಸ ಆಗಿಲ್ಲ ಎಂದು ಅವರು ಟೀಕಿಸಿದರು. ಜಿಲ್ಲಾ ಅಧ್ಯಕ್ಷ ಎಲ್. ನಾಗೇಂದ್ರ, ಮಾಜಿ ಶಾಸಕ ಹರ್ಷವರ್ಧನ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಘು, ಕೇಬಲ್ಮಹೇಶ್, ನಗರ ಎಸ್ಸಿ ಮೋರ್ಚಾ ಅಧ್ಯಕ್ಷ ಶೈಲೇಂದ್ರ, ಜಿಲ್ಲೆಗಳ ಎಸ್ ಸಿ. ಮತ್ತು ಎಸ್. ಟಿ ಮೋರ್ಚಾಗಳ ಅಧ್ಯಕ್ಷರು ಹಾಗೂ ಜಿಲ್ಲೆಯ ವಿವಿಧ ಮುಖಂಡರು ಇದ್ದರು.