Mandya: ದೇವೇಗೌಡರ ಬೆನ್ನಿಗೆ ಚೂರಿ ಹಾಕೋಲ್ಲ: ಶಾಸಕ ಸಿ.ಎಸ್.ಪುಟ್ಟರಾಜು
ರಾಜಕಾರಣ ಬಿಡುತ್ತೇನೆಯೇ ಹೊರತು ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ. ಮಾಜಿ ಪ್ರಧಾನಿ ದೇವೇಗೌಡರಿಗೆ ಇಳಿ ವಯಸ್ಸಿನಲ್ಲಿ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದರೆ ದೇವರು ಕ್ಷಮಿಸೋಲ್ಲ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಸ್ಪಷ್ಟಪಡಿಸಿದರು.
ಮಂಡ್ಯ (ಡಿ.20): ರಾಜಕಾರಣ ಬಿಡುತ್ತೇನೆಯೇ ಹೊರತು ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ. ಮಾಜಿ ಪ್ರಧಾನಿ ದೇವೇಗೌಡರಿಗೆ ಇಳಿ ವಯಸ್ಸಿನಲ್ಲಿ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದರೆ ದೇವರು ಕ್ಷಮಿಸೋಲ್ಲ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಸ್ಪಷ್ಟಪಡಿಸಿದರು. ಪಂಚರತ್ನ ಯಾತ್ರೆ ಅಂಗವಾಗಿ ತಾಲೂಕಿನ ಶಿವಳ್ಳಿ ಗ್ರಾಮದ ಮಾರಮ್ಮ ದೇವಾಲಯದ ಮುಂಭಾಗ ದುದ್ದ ಹೋಬಳಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಚುನಾವಣೆಯಲ್ಲಿ ಎಲ್ಲರ ವಿಶ್ವಾಸ ಗಳಿಸಿಯೇ ಕೆಲಸ ಮಾಡುತ್ತೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.
2023ಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಸ್ತೋಮ ಜೆಡಿಎಸ್ ಪರವಾಗಿ ಎದ್ದಿದೆ ಎಂದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಡಿ.24ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ಆಗಮಿಸುವ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಡಿ.24ರಂದು ಬೆಳಗ್ಗೆ 9ಗಂಟೆಗೆ ಕೆಆರ್‌ಎಸ್‌ನಿಂದ ಪಂಚರತ್ನ ಯಾತ್ರೆ ನಾಥ್‌ರ್ ಬ್ಯಾಂಕ್, ಕಟ್ಟೇರಿ, ಅರಳಕುಪ್ಪೆ, ಹರವು, ಕ್ಯಾತನಹಳ್ಳಿ, ಕೆನ್ನಾಳು ಮಾರ್ಗವಾಗಿ ಪಾಂಡವಪುರ ಪಟ್ಟಣ ಪ್ರವೇಶಿಸಲಿದೆ. ಪಾಂಡವಪುರ ಪಟ್ಟಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಎಚ್.ಡಿ.ಕುಮಾರಸ್ವಾಮಿ ಮಾತನಾಡುವರು ಎಂದರು.
Mandya: ಡಿ.24ಕ್ಕೆ ಮೇಲುಕೋಟೆಗೆ ಪಂಚರತ್ನ ರಥಯಾತ್ರೆ: ಶಾಸಕ ಸಿ.ಎಸ್.ಪುಟ್ಟರಾಜು
ಆನಂತರ ಚಿಕ್ಕಾಡೆ, ಚಿಕ್ಕಬ್ಯಾಡರಹಳ್ಳಿ ಸರ್ಕಲ್, ಕನಗನಮರಡಿ, ಹುಲಿಕೆರೆ ಮಾರ್ಗವಾಗಿ ಶಿವಳ್ಳಿ ತಲುಪಿ ಶಿವಳ್ಳಿಯಲ್ಲಿ ದೊಡ್ಡಮಟ್ಟದ ಸಾರ್ವಜನಿಕ ಸಭೆ ನಡೆಯಲಿದೆ. ಸಭೆ ಪ್ರಾರಂಭವಾಗುವ ತನಕ ನವೀನ್ ಸಜ್ಜು ಅವರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಂತರ ಶಿವಳ್ಳಿಯಲ್ಲಿ ವಾಸ್ತವ್ಯ ಇರಲಿದ್ದಾರೆ ಎಂದರು. ದುದ್ದ ಹೋಬಳಿಯ ಋುಣ ನನ್ನ ಮೇಲಿದೆ. ಶಕ್ತಿ ಮೀರಿ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಅಭಿವೃದ್ಧಿ ಕೆಲಸಗಳಲ್ಲಿ ಯಾರಿಂದಲೂ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ಪುಟ್ಟರಾಜು ನಿಮ್ಮ ಮನೆ ಮಗನ ರೀತಿ ಕೆಲಸ ಮಾಡುತ್ತಾನೆ ಎಂದರು.
Mandya: ನನ್ನ ಜೀವನೋತ್ಸಾಹ ಕುಂದಿಲ್ಲ: ಎಸ್.ಎಂ.ಕೃಷ್ಣ
ದುದ್ದ ಹೋಬಳಿಯ ರಸ್ತೆಗಳ ಅಭಿವೃದ್ಧಿಗೆ 40 ರಿಂದ 50 ಕೋಟಿ ಕೆಲಸ ನಡೆಯುತ್ತಿದೆ. ಈ ಭಾಗದಲ್ಲಿ ವ್ಯವಸಾಯ ಮಾಡಲು ನೀರು, ವಿದ್ಯುಚ್ಛಕ್ತಿ ದೊರಕಿದರೆ ರೈತರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ದುದ್ದ ಹೋಬಳಿಯ ಕೆರೆಗಳ ನೀರು ತುಂಬಿಸುವ ಯೋಜನೆ ಇನ್ನೊಂದು ವಾರದಲ್ಲಿ ಕೆಲಸ ಮುಗಿಯಲಿದ್ದು, ಅಧಿವೇಶನದ ಮುಗಿದ ನಂತರ ಮುಖ್ಯಮಂತ್ರಿಗಳ ದಿನಾಂಕ ನಿಗದಿ ಮಾಡಿ ಉದ್ಘಾಟನೆ ನೆರವೇರಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ, ಮುದಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರದ ಕೊಪ್ಪಲು ಶಂಕರೇಗೌಡ, ಬಾಲರಾಜು,ಬೆಟ್ಟಸ್ವಾಮಿ, ಜಯಶಂಕರ, ಮಾದೇಗೌಡ ಇತರರು ಹಾಜರಿದ್ದರು.