Asianet Suvarna News Asianet Suvarna News

ಸರ್ಕಾರಕ್ಕೆ ಒಳಗಿನಿಂದಲೇ ಏನೋ ಆಗುತ್ತಿರುವಂತಿದೆ: ಅಶ್ವತ್ಥನಾರಾಯಣ

ಈ ಸರ್ಕಾರ ಬಹಳ ದಿನ ಇರುವುದಿಲ್ಲ ಎಂದು ಕಾಂಗ್ರೆಸ್‌ನವರೇ ಹೇಳುತ್ತಿದ್ದರು. ಯಾಕೋ ಅವರ ಹೇಳಿಕೆ ನಿಜವಾಗುವಂತೆ ಕಾಣಿಸುತ್ತಿದೆ ಎಂದು ಬಿಜೆಪಿ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾರ್ಮಿಕವಾಗಿ ಹೇಳಿದ್ದಾರೆ. 

MLA Dr CN Ashwath Narayan Slams On Siddaramaiah Govt gvd
Author
First Published Jul 25, 2023, 4:45 AM IST

ಬೆಂಗಳೂರು (ಜು.25): ಈ ಸರ್ಕಾರ ಬಹಳ ದಿನ ಇರುವುದಿಲ್ಲ ಎಂದು ಕಾಂಗ್ರೆಸ್‌ನವರೇ ಹೇಳುತ್ತಿದ್ದರು. ಯಾಕೋ ಅವರ ಹೇಳಿಕೆ ನಿಜವಾಗುವಂತೆ ಕಾಣಿಸುತ್ತಿದೆ ಎಂದು ಬಿಜೆಪಿ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾರ್ಮಿಕವಾಗಿ ಹೇಳಿದ್ದಾರೆ. ವಿದೇಶದಲ್ಲಿ ಕುಳಿತು ಕಾಂಗ್ರೆಸ್‌ ಸರ್ಕಾರ ಉರುಳಿಸಲು ಆಪರೇಷನ್‌ ನಡೆಸುತ್ತಿದ್ದಾರೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಸೋಮವಾರ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್‌ ಶಾಸಕರ ಬೆಂಬಲ ಇಲ್ಲದೆ ಇದು ಆಗುತ್ತದೆಯೇ? ದೊಡ್ಡ ಮಟ್ಟದಲ್ಲಿ ಆಗಬೇಕಿರುವ ಕಾರ್ಯ ಇದು. 

ಕಾಂಗ್ರೆಸ್‌ನಲ್ಲಿ ಏನಾಗುತ್ತಿದೆ ಎನ್ನುವುದು ಶಿವಕುಮಾರ್‌ ಅವರಿಗೆ ಗೊತ್ತು. ಇದರಲ್ಲಿ ಬಿಜೆಪಿಯ ಪಾತ್ರ ಏನಿಲ್ಲ ಎಂದು ಸ್ಪಷ್ಟಪಡಿಸಿದರು. ಸಿಂಗಾಪುರದಲ್ಲಿ ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ? ಯಾವ ರೀತಿ ಸರ್ಕಾರ ಉರುಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಲಿ. ಅವರದ್ದೇ ಸರ್ಕಾರವಿದೆ. ಇಂಟೆಲಿಜೆನ್ಸ್‌ ಇದೆ. ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್‌ ಅವರು ಮುಖ್ಯಮಂತ್ರಿಯನ್ನು ಹುದ್ದೆಯಿಂದ ಇಳಿಸುವುದು, ಹುದ್ದೆಗೆ ಕೂರಿಸುವುದು ಗೊತ್ತಿದೆ ಎನ್ನುತ್ತಾರೆ. ಇವರೆಲ್ಲರ ಹೇಳಿಕೆಯಿಂದ ಈ ಸರ್ಕಾರಕ್ಕೆ ಒಳಗಿಂದಲೇ ಏನೋ ಆಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಮಹದೇಶ್ವರ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ವೆಂಕಟೇಶ್‌

ಕಾಂಗ್ರೆಸ್‌ ಸರ್ಕಾರದಿಂದ ಜನ ವಿರೋಧಿ ನೀತಿ: ಕಾಂಗ್ರೆಸ್‌ ಪಕ್ಷದ ರಾಜ್ಯ ಸರ್ಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಇದು ಖಂಡನೀಯ ಎಂದು ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ್‌ ಹೇಳಿದ್ದಾರೆ. ನಗರದ ಫ್ರೀಡಂಪಾರ್ಕ್ ಬಳಿ ವಿಧಾನಸಭೆಯಲ್ಲಿ ಬಿಜೆಪಿಯ 10 ಶಾಸಕರ ಅಮಾನತು ಮತ್ತು ಪ್ರತಿಪಕ್ಷಗಳ ಒಕ್ಕೂಟದ ಸಭೆಗೆ ಆಗಮಿಸಿದ ರಾಜಕೀಯ ಪಕ್ಷಗಳ ನಾಯಕರ ಸ್ವಾಗತಕ್ಕೆ ಐಎಎಸ್‌ ಅಧಿಕಾರಿಗಳ ನಿಯೋಜನೆ ಮಾಡಿದ ಕ್ರಮವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೇವಲ 60 ದಿನದಲ್ಲಿ ಜನತೆ ತತ್ತರಿಸಿ ಹೋಗುವಂತಾಗಿದೆ. ರಾಜ್ಯ ಸರ್ಕಾರದ ನಡವಳಿಕೆ, ಧೋರಣೆ, ಕಾರ್ಯವೈಖರಿಯು ಸಮಾಜಕ್ಕೆ ನಿರಾಸೆಯನ್ನು ತಂದಿದೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಸಮಾಜವಿರೋಧಿ ಶಕ್ತಿಗಳನ್ನು ಹೇಳುವವರು, ಕೇಳುವವರಿಲ್ಲವಾಗಿದೆ. ಇಡೀ ಕರ್ನಾಟಕದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಜೈನ ಮುನಿಯನ್ನು ಬರ್ಬರವಾಗಿ ಕತ್ತರಿಸಿ ಹಾಕಿದ್ದಾರೆ. ಯುವಬ್ರಿಗೇಡ್‌ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದೇಶದ್ರೋಹಿಗಳು, ಭಯೋತ್ಪಾದಕರನ್ನು ಸದೆಬಡಿಯಬೇಕು ಎಂದು ಹೇಳಿದರು. ಪ್ರತಿಪಕ್ಷಗಳ ಮುಖಂಡರನ್ನು ಸ್ವಾಗತಿಸಲು ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಿದ್ದರು. ಕಾಂಗ್ರೆಸ್‌ ಪಕ್ಷದಲ್ಲಿ ಕಾರ್ಯಕರ್ತರ ಕೊರತೆಯೇ ಇದಕ್ಕೆ ಕಾರಣ. ಇದು ಪ್ರಗತಿಪರ ರಾಜ್ಯ ಕರ್ನಾಟಕಕ್ಕೆ ಆದ ಅವಮಾನ. ಪ್ರತಿಪಕ್ಷದ ಧ್ವನಿಯನ್ನು ಹತ್ತಿಕ್ಕಲು ಸದನದಿಂದ ಶಾಸಕರನ್ನು ಅಮಾನತು ಮಾಡಿದ್ದಾರೆ. 

ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜಿಗೆ ‘ರಾಜಕೀಯ ಗ್ರಹಣ’: ಕಾಮಗಾರಿ ಇನ್ನೂ ಅಪೂರ್ಣ

ಸಭಾಧ್ಯಕ್ಷ ನಡೆಯ ವಿರುದ್ಧ ನಿರ್ಣಯ ಮಂಡಿಸಲಾಗುವುದು. ಕಾಂಗ್ರೆಸ್‌ ಪಕ್ಷವು ಯಾವುದೇ ಷರತ್ತಿಲ್ಲದೇ ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವ ಭರವಸೆ ನೀಡಿ ಮೋಸದಿಂದ ಅಧಿಕಾರಕ್ಕೆ ಬಂದಿದೆ. ಷರತ್ತು ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಜನಪರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುವ ಕ್ರಮವು ಜನವಿರೋಧಿಯಾಗಿದೆ. ರಾಜ್ಯದಲ್ಲಿ ಕೊಲೆ, ಗಲಭೆಗಳು ಹೆಚ್ಚಾಗುತ್ತಿದ್ದು, ಇಂತಹ ಸರ್ಕಾರವನ್ನು ಕಿತ್ತೆಸೆಯಲು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ. ರೈತವಿರೋಧಿ, ಜನವಿರೋಧಿ, ವಿದ್ಯಾರ್ಥಿಗಳ ವಿರೋಧಿ, ದಲಿತ ವಿರೋಧಿ ಮಾತ್ರವಲ್ಲದೇ, ಹಿಂದುಳಿದವರ ವಿರೋಧಿ ಧೋರಣೆಗಳನ್ನು ಸರ್ಕಾರ ಹೊಂದಿದೆ ಎಂದರು.

Follow Us:
Download App:
  • android
  • ios