Asianet Suvarna News Asianet Suvarna News

ಶಾಸಕ ಗೋಪಾಲಕೃಷ್ಣ ರಾಜೀನಾಮೆ ನೋವು ತಂದಿದೆ: ಸಚಿವ ಶ್ರೀರಾಮುಲು

ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ ಅವರನ್ನು ಕರೆದುಕೊಂಡು ಬಂದು ಗೆಲ್ಲಿಸಿದೆವು. ಆದರೆ ಅವರು ಈಗ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಬೇಸರ ಮೂಡಿಸಿದೆ. ಕೂಡ್ಲಿಗಿ ಬಿಜೆಪಿ ಕಾರ್ಯಕರ್ತರಿಗೆ ತುಂಬಾ ನೋವಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. 

MLA Gopalakrishnas Resignation is Painful Says Minsiter B Sriramulu gvd
Author
First Published Apr 2, 2023, 4:00 AM IST

ಬಳ್ಳಾರಿ (ಏ.02): ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ ಅವರನ್ನು ಕರೆದುಕೊಂಡು ಬಂದು ಗೆಲ್ಲಿಸಿದೆವು. ಆದರೆ ಅವರು ಈಗ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಬೇಸರ ಮೂಡಿಸಿದೆ. ಕೂಡ್ಲಿಗಿ ಬಿಜೆಪಿ ಕಾರ್ಯಕರ್ತರಿಗೆ ತುಂಬಾ ನೋವಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಗೋಪಾಲಕೃಷ್ಣ ಅವರು ಯಾವ ಕಾರಣಕ್ಕೆ ಪಕ್ಷ ಬಿಟ್ಟರು ಎಂಬುದನ್ನು ಹೇಳಿಲ್ಲ. ಒಟ್ಟಾರೆ ಅವರು ಪಕ್ಷ ಬಿಟ್ಟಿರುವುದು ಕಾರ್ಯಕರ್ತರಿಗೆ ಬೇಸರ ತರಿಸಿದೆ ಎಂದರು. 

ರಾಜ್ಯಾದ್ಯಂತ ಸುತ್ತಾಡುವ ಶ್ರೀರಾಮುಲು ಇದೀಗ ಕ್ಷೇತ್ರ ಗಟ್ಟಿ ಮಾಡಿಕೊಳ್ಳಲು ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದೀರಾ? ಎಂಬ ಪ್ರಶ್ನೆಗೆ, ಹಾಗೇನಿಲ್ಲ, ಇನ್ನೂ ಟಿಕೆಟ್‌ ಫೈನಲ್‌ ಆಗಿಲ್ಲ, ಹೀಗಾಗಿ ವಿಜಯನಗರ, ಬಳ್ಳಾರಿ ಓಡಾಡುತ್ತಿದ್ದೇನೆ. ಸ್ಟಾರ್‌ ಕ್ಯಾಂಪೇನ್‌ ಲಿಸ್ಟ್‌ ಬಂದ ಬಳಿಕ ರಾಜ್ಯಾದ್ಯಂತ ಸುತ್ತಾಡುತ್ತೇನೆ. ಒಂದು ಕ್ಷೇತ್ರಕ್ಕೆ ಸೀಮಿತವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಪಕ್ಷಕ್ಕೆ ತಿಳಿಸಿದ್ದೇನೆ. ಅದರೆ ಅಂತಿಮವಾಗಿಲ್ಲ ಎಂದರು. ಶಾಸಕ ನಾಗೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯಾರನ್ನೂ ನಾನು ಬೆದರಿಸಿಲ್ಲ. ಬಾಲಿಶದ ಹೇಳಿಕೆ ಕೊಡುವುದು ಸರಿಯಲ್ಲ. ಬೆದರಿಕೆ ಹಾಕುವ ಸಂಸ್ಕೃತಿ ನಮ್ಮದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಿಂದ ಕಾನೂನು ಬಾಹಿರವಾಗಿ ಮೀಸಲಾತಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಕಳೆದ ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಇನ್ನಷ್ಟುಅಭಿವೃದ್ಧಿಗೆ ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕೆಂದು ಸಚಿವ ಬಿ. ಶ್ರೀರಾಮುಲು ಹೇಳಿದರು. ಪಟ್ಟಣದ ಹಳೇ ತಾಲೂಕು ಕಚೇರಿ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಹಯೋಗದಲ್ಲಿ ವಸತಿ ಯೋಜನೆಯಡಿ ಮುಂಜೂರಾಗಿರುವ ಮನೆಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಸತಿ ಯೋಜನೆಯಡಿ ಕ್ಷೇತ್ರಕ್ಕೆ 4 ಸಾವಿರಕ್ಕೂ ಹೆಚ್ಚಿನ ಮನೆಗಳನ್ನು ಮುಂಜೂರು ಮಾಡಿಸಿದ್ದೇನೆ. ಪ್ರತಿ ಮನೆಗೆ 3.5 ಲಕ್ಷ ಸಹಾಯಧನ ಇದೆ. ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾವಿರಾರು ಕೋಟಿ ಅನುದಾವನ್ನು ತಂದು ಈ ಭಾಗದ ಅಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸಿದ್ದೇನೆ. ತುಂಗಭದ್ರಾ ಹಿನ್ನೀರು, ಭದ್ರಾ ಮೇಲ್ದಂಡೆಯಂತ ಬೃಹತ್‌ ಯೋಜನೆಗಳಿಂದ ಕುಡಿಯುವ ನೀರಿನ ಸಮಸ್ಯೆ ನೀಗುವ ಜತೆಗೆ ರೈತಾಪಿ ವರ್ಗದ ಅಭಿವೃದ್ಧಿಗೆ ನೆರವಾಗಿದೆ. ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯಾಗಬೇಕು. ಈ ಬಾರಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿ ಆಶೀರ್ವದಿಸಬೇಕೆಂದರು.

ಶಾಸಕ ರಾಮಣ್ಣ ಲಮಾಣಿಗೆ ಟಿಕೆಟ್‌ ನೀಡುವುದಕ್ಕೆ ಬಿಜೆಪಿ ಮುಖಂಡರ ವಿರೋಧ

ತರಾತುರಿಯಲ್ಲಿ ಮುಗಿದ ಕಾರ್ಯಕ್ರಮ: ಚುನಾವಣಾ ಆಯೋಗ ಕರೆದಿದ್ದ ಸುದ್ದಿಗೋಷ್ಠಿಯಿಂದ ಎಚ್ಚೆತ್ತ ಅಧಿಕಾರಿಗಳು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು 12ರ ಬದಲಿಗೆ 10ಕ್ಕೆ ನಿಗದಿ ಗೊಳಿಸಿದ್ದರು. ಸಚಿವ ಬಿ. ಶ್ರೀರಾಮುಲು ಚುನಾವಣಾ ನೀತಿ ಸಂಹಿತೆ ಜಾರಿ ಆಗಬಹುದೆನ್ನುವ ಕಾರಣದಿಂದ ಕೆಲವೇ ಕೆಲವು ನಿಮಿಷಗಳಲ್ಲಿ ವಸತಿ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಲು ತರಾ ತುರಿಯಲ್ಲಿ ವೇದಿಕೆಯಿಂದ ನಿರ್ಗಮಿಸಿದರು.

Follow Us:
Download App:
  • android
  • ios