ಎಚ್.ಡಿ.ಕುಮಾರಸ್ವಾಮಿಯನ್ನು ಒಮ್ಮೆ ಗವರ್ನರ್ ಮಾಡಬೇಕು: ಶಾಸಕ ಇಕ್ಬಾಲ್ ಹುಸೇನ್ ವ್ಯಂಗ್ಯ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಎಂಎಲ್ಎ, ಎಂಪಿ ಎಲೆಕ್ಷನ್ ಮಾಡಿ ಎರಡು ಬಾರಿ ಸಿಎಂ ಆಗಿದ್ದಾರೆ. ಅವರು ಗವರ್ನರ್ ಒಮ್ಮೆಯೂ ಆಗಿಲ್ಲ, ಅದನ್ನೂ ಮಾಡಿ ಬಿಡಬೇಕು. ಗವರ್ನರ್ ಮಾಡಿದರೆ ಅಲ್ಲಾದರೂ ಅಚ್ಚುಕಟ್ಟಾಗಿ ಇರುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವ್ಯಂಗ್ಯವಾಡಿದರು.
ರಾಮನಗರ (ಜ.12): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಎಂಎಲ್ಎ, ಎಂಪಿ ಎಲೆಕ್ಷನ್ ಮಾಡಿ ಎರಡು ಬಾರಿ ಸಿಎಂ ಆಗಿದ್ದಾರೆ. ಅವರು ಗವರ್ನರ್ ಒಮ್ಮೆಯೂ ಆಗಿಲ್ಲ, ಅದನ್ನೂ ಮಾಡಿ ಬಿಡಬೇಕು. ಗವರ್ನರ್ ಮಾಡಿದರೆ ಅಲ್ಲಾದರೂ ಅಚ್ಚುಕಟ್ಟಾಗಿ ಇರುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ತುಂಬು ಹೃದಯದಿಂದ ಸ್ವಾಗತ ಮಾಡುತ್ತೇವೆ. ಅವರೊಮ್ಮೆ ಗವರ್ನರ್ ಆಗುವುದರ ಬಗ್ಗೆಯೂ ಆಲೋಚನೆ ಮಾಡಲಿ ಎಂದು ಹೇಳಿದರು. ಕಾಂಗ್ರೆಸ್ ನಲ್ಲಿ ಮೂವರು ಡಿಸಿಎಂ ಬಗ್ಗೆ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದಾರೆ. ನಮ್ಮ ಹೈಕಮಾಂಡ್ ಬಲಿಷ್ಠವಾಗಿದೆ. ಈ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ಈ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ: ರಾಮನ ಪಾದಸ್ಪರ್ಶವಾಗಿರುವ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ಸಚಿವರ ಜೊತೆಯೂ ಚರ್ಚಿಸಲಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅನುದಾನ ನಿಗದಿಯಾಗಲಿದೆ ಎಂದರು. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರು ಗೈರಾಗುವ ಕುರಿತ ಪ್ರಶ್ನೆಗೆ ಬಿಜೆಪಿಯವರಿಗೆ ರಾಮನ ವಿಚಾರ ಹೊಸದಿರಬಹುದು. ಆದರೆ, ನಮಗೆ ಹೊಸದಲ್ಲ. ಈ ಮಣ್ಣಿನಲ್ಲಿ ಎಲ್ಲಾ ಧರ್ಮಗಳಿಗೂ ಗೌರವವಿದೆ. ಆದರೆ, ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಇಕ್ಬಾಲ್ ಹುಸೇನ್ ಹೇಳಿದರು.
ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪುವ ಮಾತೇ ಇಲ್ಲ: ಶಿಕ್ಷಕರ ಬೇಡಿಕೆ ಮಧು ಬಂಗಾರಪ್ಪ ಹೇಳಿದ್ದೇನು?
ನಾನೂ ಸಹ ರಾಮಭಕ್ತ: ನಾನೂ ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ.! ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ದೆವು. ಅದನ್ನ ಭಕ್ತಿ ಪೂರ್ವಕವಾಗಿ ಮಾಡೇ ಮಾಡುತ್ತೇವೆ ಎಂದು ರಾಮನಗರ ಶಾಸಕ ಇಕ್ಬಾಲ್ ಹಸೇನ್ ತಿಳಿಸಿದರು. ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನದಲ್ಲಿ ಭಾಗಿಯಾದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅತ್ತ ರಾಮಮಂದಿರ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಧರ್ಮಯುದ್ಧ ನಡೆಯುತ್ತಿರುವ ಹೊತ್ತಿನಲ್ಲೇ ಇತ್ತ ರಾಮೋತ್ಸವದ ಜಪ ಜಪಿಸಿದರು.
ರಾಮಮಂದಿರ ನಿರ್ಮಾಣ ಸಂಬಂಧ ಸ್ಥಳದ ಸರ್ವೆ ವರದಿ ಕೇಳಿದ್ದೇನೆ: ಸಂಸದ ಡಿ.ಕೆ.ಸುರೇಶ್
ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಅಂತೆಯೇ ರಾಮನ ಪೂಜೆಯನ್ನೂ ಮಾಡ್ತೇನೆ. ರಾಮಮಂದಿರ ವಿಚಾರವನ್ನ ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ ಎಂದರು. ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ಗೆ ತನ್ನದೇ ಆದ ಬದ್ಧತೆ, ಸಿದ್ದಾಂತ ಇದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡುತ್ತಿದ್ದಾರೋ ಇಲ್ವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರೋ ವಿಚಾರ. ಆದರೆ ನಾವು ರಾಮನನ್ನ ಮನೆ ದೇವರು ಅಂತ ಪೂಜೆ ಮಾಡುತ್ತೇವೆ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ತಿದ್ದಾರೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು.