ರಾಜ್ಯಸಭೆ ಚುನಾವಣೆಯ ಹಿಂದಿನ ದಿನವಾದ ಸೋಮವಾರ ಕೆಆರ್‌ಪಿಸಿ ಪಕ್ಷದ ಶಾಸಕ ಜನಾರ್ದನರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಜನಾರ್ಧನರೆಡ್ಡಿ ಮತ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗೆ ಎಂಬಂತಾಗಿದೆ. 

ಬೆಂಗಳೂರು (ಫೆ.27): ರಾಜ್ಯಸಭೆ ಚುನಾವಣೆಯ ಹಿಂದಿನ ದಿನವಾದ ಸೋಮವಾರ ಕೆಆರ್‌ಪಿಸಿ ಪಕ್ಷದ ಶಾಸಕ ಜನಾರ್ದನರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಜನಾರ್ಧನರೆಡ್ಡಿ ಮತ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗೆ ಎಂಬಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಜನಾರ್ದನ ರೆಡ್ಡಿ ಕ್ಷೇತ್ರದ ಅಂಜನಾದ್ರಿ ಬೆಟ್ಟಕ್ಕೆ 100 ಕೋಟಿ ರು., ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಂತರ ರು. ನೀಡಿದ್ದು, ಜತೆಗೆ ಐತಿಹಾಸಿಕ ಆನೆಗೊಂದಿ ಉತ್ಸವವನ್ನು ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರು ಸೋಮವಾರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ವೇಳೆ ರಾಜ್ಯಸಭೆ ಚುನಾವಣೆ ಮತದಾನದ ಬಗ್ಗೆಯೂ ಚರ್ಚೆ ನಡೆದಿದ್ದು, ಕಾಂಗ್ರೆಸ್‌ಗೆ ಮತ ಹಾಕಲು ಒಪ್ಪಿರುವುದಾಗಿ ತಿಳಿದುಬಂದಿದೆ.

ಡಿಕೆಶಿ ಆಪ್ತ ಪೋಲಿಂಗ್ ಏಜೆಂಟ್‌: ಇನ್ನು ಇದಕ್ಕೆ ಪೂರಕವಾಗಿ ಡಿ.ಕೆ. ಶಿವಕುಮಾರ್‌ ಆಪ್ತ ಯೋಗೇಂದ್ರ ವಿಕ್ರಮ್‌ ಅವರನ್ನು ಕೆಆರ್‌ಪಿಸಿ ಪಕ್ಷದ ಪೋಲಿಂಗ್‌ ಏಜೆಂಟ್‌ ಆಗಿ ನೇಮಿಸಿದ್ದು ಇದಕ್ಕೆ ಜನಾರ್ಧನರೆಡ್ಡಿ ಅವರು ಸಹಿ ಹಾಕಿದ್ದಾರೆ. ಹೀಗಾಗಿ ಜನಾರ್ದನರೆಡ್ಡಿ ಅವರು ಮತ ಹಾಕುವಾಗ ಯೋಗೇಂದ್ರ ವಿಕ್ರಮ್‌ ಅವರಿಗೆ ತೋರಿಸಿ ಹಾಕಬೇಕು.

ಅಭಿವೃದ್ಧಿ ಶೂನ್ಯ ಗ್ಯಾರಂಟಿ ಕಾಂಗ್ರೆಸ್‌ ಸರ್ಕಾರ: ಬಿ.ವೈ.ವಿಜಯೇಂದ್ರ ಆರೋಪ

ಇನ್ನೂ ಏನೂ ತೀರ್ಮಾನ ಮಾಡಿಲ್ಲ: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನರೆಡ್ಡಿ, ಐತಿಹಾಸಿಕ ಆನೆಗೊಂದಿ ಉತ್ಸವವನ್ನು ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಮಾರ್ಚ್‌ ತಿಂಗಳಲ್ಲಿ ಈ ಉತ್ಸವ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಆಹ್ವಾನ ನೋಡಲು ಹೋಗಿದ್ದೆ. ರಾಜ್ಯಸಭೆ ಚುನಾವಣೆ ಮತ ಹಾಕಲು ಎಲ್ಲರೂ ಮನವಿ ಮಾಡಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೂ ಮನವಿ ಮಾಡಿದ್ದಾರೆ. ಆದರೆ ನಾನು ಇನ್ನೂ ಏನೂ ತೀರ್ಮಾನ ಮಾಡಿಲ್ಲ ಎಂದರು.