ಅಧಿವೇಶನ ಮುಗಿದ ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಕೆಲ ಶಾಸಕರು ಪತ್ರ ಬರೆದಿದ್ದು ನಿಜ. ಆದರೆ, ಇದು ಯಾವುದೇ ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧಾನದಿಂದ ಅಲ್ಲ ಎಂದು ಕಾಂಗ್ರೆಸ್‌ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದ್ದಾರೆ. 

ಬೆಂಗಳೂರು (ಜು.28): ಅಧಿವೇಶನ ಮುಗಿದ ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಕೆಲ ಶಾಸಕರು ಪತ್ರ ಬರೆದಿದ್ದು ನಿಜ. ಆದರೆ, ಇದು ಯಾವುದೇ ಸಚಿವರ ಕಾರ್ಯವೈಖರಿ ಬಗ್ಗೆ ಅಸಮಾಧಾನದಿಂದ ಅಲ್ಲ ಎಂದು ಕಾಂಗ್ರೆಸ್‌ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗದ ಕಾರಣಕ್ಕೆ ಆ ವೇಳೆ ಒಂದು ವಾರದ ಮಟ್ಟಿಗೆ ಬೇಸರ ಇದ್ದದ್ದು ನಿಜ. 

ಆದರೆ, ಈಗ ಅದು ದೂರವಾಗಿದೆ. ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನನಗೆ ಮಂತ್ರಿ ಸ್ಥಾನ ನೀಡುವ ಘೋಷಣೆ ಮಾಡಿದ್ದಾರೆ. ಅವರಾಗಿ ನೀಡುವವರೆಗೆ ಕಾಯುತ್ತೇನೆ ಎಂದರು. ಶಾಸಕರು ಮತ್ತು ಸಚಿವರ ನಡುವೆ ಸಾಮರಸ್ಯ ಮೂಡಬೇಕಾದರೆ ಪ್ರತಿ ಮೂರು ತಿಂಗಳಿಗೊಮ್ಮೆ ಶಾಸಕಾಂಗ ಪಕ್ಷದ ಸಭೆ ನಡೆಯಬೇಕು ಎನ್ನುವುದು ತಮ್ಮ ಸ್ವಂತ ಅಭಿಪ್ರಾಯ. ಈ ಹಿನ್ನೆಲೆಯಲ್ಲಿ ಕೆಲ ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ನಿಜ ಎಂದರು.

ಬೆಳೆಹಾನಿ ವೈಜ್ಞಾನಿಕ ವರದಿ ಸಲ್ಲಿ​ಸಲು ಸೂಚನೆ: ಸಚಿ​ವ ಮಧು ಬಂಗಾರಪ್ಪ

ಬಿಜೆಪಿಯಿಂದಾಗಿ ರಾಜ್ಯ ದಿವಾಳಿಯಂಚಿಗೆ: ‘ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಹಾಗೂ ಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯವು ಆರ್ಥಿಕವಾಗಿ ದಿವಾಳಿಯಾಗುವ ಹಂತ ತಲುಪಿದೆ. 2.55 ಲಕ್ಷ ಕೋಟಿ ರು. ಮೊತ್ತದ ಕಾಮಗಾರಿಗಳು ಬಾಕಿ ಇವೆ. ತನ್ಮೂಲಕ ಮುಂದಿನ 5 ವರ್ಷ ಶಾಸಕರು ಯಾವುದೇ ಪ್ರಮುಖ ಕಾಮಗಾರಿ ಕೈಗೆತ್ತಿಕೊಳ್ಳಲಾಗದಂತೆ ಮಾಡಿ ಹೋಗಿದ್ದಾರೆ’ ಎಂದು ಕಾಂಗ್ರೆಸ್‌ ಸದಸ್ಯ ಶಿವಲಿಂಗೇಗೌಡ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರ ಅನುಪಸ್ಥಿತಿಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ 12 ಸಾವಿರ ಕೋಟಿ ರು. ಮೊತ್ತದ ಕೊರತೆ ಬಜೆಟ್‌ ಮಂಡಿಸಿದ್ದಾರೆ. ಅವರ ಸುದೀರ್ಘ ಇತಿಹಾಸದಲ್ಲಿ ಮೊದಲ ಬಾರಿಗೆ ಕೊರತೆ ಬಜೆಟ್‌ ಮಂಡಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಕಾರಣ. ರಾಜ್ಯವನ್ನು ಆರ್ಥಿಕವಾಗಿ ಹಾಗೂ ಅಭಿವೃದ್ಧಿ ವಿಚಾರದಲ್ಲಿ ಹಾಳು ಮಾಡಿ ಹೋಗಿದ್ದಾರೆ. ಅವರು ಈಗ ಸದನದಲ್ಲಿ ಇದ್ದಿದ್ದರೆ ಎಲ್ಲವನ್ನೂ ಪ್ರಶ್ನಿಸುತ್ತಿದ್ದೆ ಎಂದರು.

ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳನ್ನು ಅಮಾಯಕರೆಂದು ಪರಿಗಣಿಸುವುದು ಅಪಾಯಕಾರಿ: ಸಿ.ಟಿ.ರವಿ

ಸಿದ್ದರಾಮಯ್ಯ ಸರ್ಕಾರದಲ್ಲಿ 2013-18ರ ಅವಧಿಯಲ್ಲಿ ಕೈಗಾರಿಕಾ ಬೆಳವಣಿಗೆ ದರ ಶೇ.8.70 ರಷ್ಟಿತ್ತು. ಇದೀಗ ಶೇ.3.86ಕ್ಕೆ ತಂದಿದ್ದಾರೆ. ಇವರು ಕೈಗಾರಿಕೆ ಅಭಿವೃದ್ಧಿ ಮಾಡುತ್ತಾರಾ? ಇವರ ಹಣೆಬರಹಕ್ಕೆ ಎಲ್ಲಾ ಕ್ಷೇತ್ರಗಳನ್ನೂ ಹಾಳು ಮಾಡಿದ್ದಾರೆ. ಸೇವಾವಲಯದಲ್ಲಿ ಶೇ.9.6ರಷ್ಟು ಪ್ರಗತಿ ಇತ್ತು. ಅದು ಶೇ.4.25ಕ್ಕೆ ಇಳಿದಿದೆ. ಕಳೆದ ಆರು ತಿಂಗಳಲ್ಲೇ 95,000 ಕೋಟಿ ರು. ಕಾಮಗಾರಿಗಳಿಗೆ ಅನುಮೋದನೆ ನೀಡಿ ರಾಜ್ಯದ ಆರ್ಥಿಕತೆ ಮೇಲೆ ಬಂಡೆ ಎಳೆದಿದ್ದಾರೆ ಎಂದು ಕಿಡಿ ಕಾರಿದರು.