Asianet Suvarna News Asianet Suvarna News

ಶೇ.80ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಹಾಕಿದ್ರೂ ಇಬ್ರೇ ಮಿನಿಸ್ಟ್ರು! ಶಾಮನೂರಿಗೆ ರಾಠೋಡ್‌ 'ಸಾಮಾಜಿಕ ನ್ಯಾಯ'ದ ಪಾಠ

ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರ ಕಡೆಗಣನೆ ವಿಚಾರವಾಗಿ ಮಾಧ್ಯಮ ಪ್ರಕಟಣೆ ನೀಡಿರುವ ಸಿದ್ಧರಾಮಯ್ಯ ಆಪ್ತ ಎಂಎಲ್‌ಸಿ ಪ್ರಕಾಶ್‌ ರಾಥೋಡ್‌, ಕಳೆದ ಚುನಾವಣೆಯಲ್ಲಿ ಶೇ. 80ರಷ್ಟು ಮುಸ್ಲೀಮರು ಕಾಂಗ್ರೆಸ್‌ಗೆ ಮತ ಹಾಕಿದ್ದರೂ ಅವರಿಗೆ 2 ಮಂತ್ರಿ ಸ್ಥಾನವಷ್ಟೇ ನೀಡಿದ್ದೇವೆ ಎಂದಿದ್ದಾರೆ.
 

mla prakash rathod According to the survey 80 percentage of Muslims voted for Congress in assembly election san
Author
First Published Oct 6, 2023, 7:43 PM IST

ಬೆಂಗಳೂರು (ಅ.6): ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರ ಕಡೆಗಣನೆ ಮಾಡಲಾಗುತ್ತದೆ. ಅವರ ಪಾಡು ನಾಯಿಪಾಡಾಗಿದೆ ಎಂದು ಹೇಳಿಕೆ ನೀಡಿದ್ದ ಹಿರಿಯ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ  ಸಿದ್ದರಾಮಯ್ಯ ಆಪ್ತ, ಎಂಎಲ್‌ಸಿ ಪ್ರಕಾಶ್ ರಾಥೋಡ್ ಮಾಧ್ಯಮ ಪ್ರಕಟಣೆ ನೀಡಿದ ವಿರೋಧ ವ್ಯಕ್ತಪಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ನನಗೆ ಅತೀವ ನೋವು ತಂದಿದೆ. ಸಾಮಾಜಿಕ ನ್ಯಾಯ ಕಾಂಗ್ರೆಸ್‌ ಪಕ್ಷದ ಜೀವಾಳ ಎನ್ನುವುದನ್ನು ಶಿವಶಂಕರಪ್ಪ ಅವರಿಗೆ ಯಾರೂ ತಿಳಿ ಹೇಳುವ ಅಗತ್ಯ ಇಲ್ಲ. ಆದರೆ ರಾಜ್ಯದ ಪ್ರಚಲಿತ ಕಾಂಗ್ರೆಸ್ ಆಡಳಿತದಲ್ಲಿ ಲಿಂಗಾಯತರು ಕಂಗಾಲಾಗಿದ್ದಾರೆ. ಪ್ರಮುಖ ಹುದ್ದೆಗಳಿಗೆ ಲಿಂಗಾಯತ ಸಮುದಾಯದ ಸದಸ್ಯರನ್ನು ಪರಿಗಣಿಸುತ್ತಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಅವರ ಸಾರ್ವಜನಿಕ ಹೇಳಿಕೆಯು ನನಗೆ ತೀರಾ ನಿರಾಶೆ ಉಂಟು ಮಾಡಿದೆ. ಈ ರೀತಿ ಹೇಳಿಕೆ ನಿಮಗೆ ದೊಡ್ಡ ಸಂಖ್ಯೆಯಲ್ಲಿ ಮತ ನೀಡಿದ ಸಮುದಾಯವನ್ನ ಮರೆತಿದ್ದೀರಿ. ಕಾಂಗ್ರೆಸ್‌ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದವರ ಕೊಡುಗೆಯನ್ನು ಮರೆತಿದ್ದೀರಿ ತಮ್ಮ ಸಮುದಾಯದವರ ಬಗ್ಗೆ ಮಾತನಾಡುವ ಮೂಲಕ ಉಳಿದೆಲ್ಲ ಸಮುದಾಯವರಿಗೆ ನೋವುಂಟು ಮಾಡಿದ್ದೀರಿ ಎಂದು ಪ್ರಕಾಶ್‌ ರಾಥೋಡ್‌ ಬರೆದಿದ್ದಾರೆ.

ನೀವು ಕೇವಲ ಒಂದು ಸಮುದಾಯದ ಮತಗಳಿಂದ 7 ಬಾರಿ ಆಯ್ಕೆಯಾದವರಲ್ಲ . ಕೇವಲ ಒಂದು ಸಮುದಾಯದ ಬೆರಳೆಣಿಕೆಯಷ್ಟು ಅಧಿಕಾರಿಗಳ ಪರವಾಗಿ ನೀವು ಧ್ವನಿ ಎತ್ತಿರುವ ವಿಷಯ ನನಗೆ ಬೇಸರ ತಂದಿದೆ. ಸಮೀಕ್ಷೆ ಪ್ರಕಾರ 80% ರಷ್ಟು ಮುಸ್ಲಿಮರು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಆದರೆ, ಲಿಂಗಾಯತರ ಕಡೆಯಿಂದ ಕಾಂಗ್ರೆಸ್‌ಗೆ ಬಂದಿರುವ ಮತಗಳು ಕೇವಲ 20% ಮಾತ್ರ. ಇಷ್ಟಿದ್ದರೂ ರಾಜ್ಯ ಸಂಪುಟದಲ್ಲಿ ಲಿಂಗಾಯತರಿಗೆ 7 ಸ್ಥಾನಗಳನ್ನು ನೀಡಲಾಗಿದೆ. ಮುಸ್ಲಿಂ ಸಮುದಾಯವರಿಗೆ ಕೇವಲ 2 ಸ್ಥಾನಗಳನ್ನು ಮಾತ್ರ ನೀಡಲಾಗಿದೆ. ಲಂಬಾಣಿ ಸಮುದಾಯವು ಶೇ. 80ರಷ್ಟು ಮತಗಳನ್ನು ಕಾಂಗ್ರೆಸ್‌ ಪಕ್ಷಕ್ಕೆ ನೀಡಿದೆ. ಹಲವಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಪ್ರಮುಖ ಪಾತ್ರ ವಹಿಸಿದೆ. ಆದರೂ ಲಂಬಾಣಿ ಸಮುದಾಯದವರಿಗೆ ಮಂತ್ರಿಸ್ಥಾನ ಸಿಕ್ಕಿಲ್ಲ. ಉಪ್ಪಾರ, ಬಣಜಿಗ ಹಾಗೂ ಯಾದವ ಸಮುದಾಯಕ್ಕೂ ಸಹ ಮಂತ್ರಿಸ್ಥಾನ ನೀಡಿಲ್ಲ ಎಂದು ಹೇಳಿದ್ದಾರೆ.

ಲಿಂಗಾಯತರಿಗೆ ಸೂಕ್ತ ಸ್ಥಾನಮಾನ: ಶಾಮನೂರ ಶಿವಶಂಕರಪ್ಪ ಸಿಎಂಗಿಂತ ಹಿರಿಯರು, ಸಚಿವ ಪಾಟೀಲ

ದಾವಣಗೆರೆ ಜಿಲ್ಲೆಯ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರ ಮತಗಳು ಶೇ. 40 ರಷ್ಟಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶೇ.‌20ರಷ್ಟು ಮತಗಳಿವೆ. ಹಿಂದುಳಿದ ವರ್ಗಗಳ ಶೇ. 15ರಷ್ಟು ಮತಗಳಿಂದ ಕಾಂಗ್ರೆಸಿಗೆ 6 ಶಾಸಕರು ಚುನಾಯಿತರಾದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ ಗೆಲ್ಲುವಂತಹ ವಾತಾವರಣ ಸೃಷ್ಟಿಯಾಗಿವೆ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ. ಈ ಪರಿಶ್ರಮಕ್ಕೆ ಎಲ್ಲಾ ಶಾಸಕರು ಮತ್ತು ನಾಯಕರು ಸಕ್ರಿಯವಾಗಿ ಬೆಂಬಲಿಸಬೇಕು ಎಂದು ಹೇಳುವ ಮೂಲಕ ಶಾಮನೂರು ಶಿವಶಂಕರಪ್ಪ ಅವರ ನಡೆಯನ್ನು ಖಂಡಿದ್ದಾರೆ.

ಶಾಮನೂರು ಹೇಳಿಕೆಯಿಂದ ಸರ್ಕಾರಕ್ಕೆ ಡ್ಯಾಮೇಜ್ ಇಲ್ಲ: ಸಚಿವ ಡಿ.ಸುಧಾಕರ್

Follow Us:
Download App:
  • android
  • ios