Karnataka Politics : ರಮೇಶ್ ಜಾರಕಿಹೊಳಿ ಸಿಎಂ ಭೇಟಿ - ಕುತೂಹಲ ಮೂಡಿಸಿದ ಮೀಟಿಂಗ್

  •  ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ 
  • ಆರ್ ಟಿ ನಗರ ನಿವಾಸದಲ್ಲಿ ಸಿಎಂ‌ ಭೇಟಿಯಾದ ರಮೇಶ್ ಜಾರಕಿಹೊಳಿ
  •  ಸಂಪುಟ ಪುನಾರಚನೆ ಎಂಬ ಸುದ್ದಿ ಬೆನ್ನಲ್ಲೇ ಸಿಎಂ ಭೇಟಿಯಾಗಿರುವ ರಮೇಶ್ ಜಾರಕಿಹೊಳಿ
MLA Ramesh Jarkiholi Meets  CM Basavaraj Bommai snr

ಬೆಂಗಳೂರು (ಜ.06): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion ) ಚರ್ಚೆ ಜೋರಾಗಿದೆ. ಸಂಕ್ರಾಂತಿ ವೇಳೆಗೆ ಹೊಸ ಸಂಪುಟ ರಚನೆಯಾಗಬಹುದು ಎಂಬ ಗುಸು ಗುಸು ಕೇಳಿಬರುತ್ತಿದೆ. ಅಲ್ಲದೇ ಕೆಲ ಹಳಬರಿಗೆ ಕೊಕ್ ನೀಡಿ ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಸುದ್ದಿಯು ಜೋರಾಗಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾಗಿದ್ದಾರೆ.  ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 

 ಸಿಎಂ ಬೊಮ್ಮಾಯಿ ಅವರ ಆರ್ ಟಿ ನಗರ ನಿವಾಸದಲ್ಲಿ ಭೇಟಿಯಾದ ರಮೇಶ್ ಜಾರಕಿಹೊಳಿ ಸುದೀರ್ಘ ಚರ್ಚೆ ನಡೆಸಿದ್ದಾರೆ.   ಸಂಪುಟ ಪುನಾರಚನೆ (Cabinet Expansion) ಎಂಬ ಸುದ್ದಿ ಬೆನ್ನಲ್ಲೇ ಸಿಎಂ ಭೇಟಿಯಾಗಿರುವ ರಮೇಶ್ ಜಾರಕಿಹೊಳಿ ನಡೆಯು  ಕುತೂಹಲಕ್ಕೆ ಕಾರಣವಾಗಿದೆ,  ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಯೇ ಸಿಎಂ ಭೇಟಿಗೆ ಮಹೇಶ್ ಕುಮಟ ಹಳ್ಳಿ (mahesh Kumatalli) ಅವರು ಸಹ ಆಗಮಿಸಿದ್ದು ಇನ್ನಷ್ಟು ಕುತೂಹಲ ಮೂಡಿಸಿದೆ. 

ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ ರಮೇಶ್ ಜಾರಕಿಹೊಳಿ  ಮಾದ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.

ಸಚಿವ ಸ್ಥಾನ ನನಗೆ ಕೊಡಲಿ ಎಂದ ಮುಖಂಡ :  

ದಾವಣಗೆರೆ (Davanagere)  ಜಿಲ್ಲಾ ಮಂತ್ರಿ ಸ್ಥಾನ ನನ್ನನ್ನು ಬಿಟ್ಟು, ಇನ್ಯಾರಿಗೆ ಕೊಡುತ್ತಾರೆ ಹೇಳಿ ಎನ್ನುವ ಮೂಲಕ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್‌.ಎ.ರವೀಂದ್ರನಾಥ್‌ (SA Ravindranath) ಸಂಚಲನ ಮೂಡಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸಂಪುಟ ವಿಸ್ತರಣೆಯಾದರೆ ದಾವಣಗೆರೆಗೆ (Davanagere) ಪ್ರಾತಿನಿಧ್ಯ ನೀಡುವುದಾದರೆ, ನನಗೇ ಮಂತ್ರಿ ಸ್ಥಾನವನ್ನು ನೀಡಬೇಕು. ನನ್ನ ಬಿಟ್ಟು ಬೇರೆ ಯಾರಿಗೂ ಸಚಿವ ಸ್ಥಾನ ನೀಡಲು ಬರುವುದಿಲ್ಲ ಎಂದು ಹೇಳಿದ್ದರು.

ನನಗೆ ಸಚಿವ ಸ್ಥಾನ ನೀಡಲಿ, ನೀಡದಿರಲಿ ಬಿಜೆಪಿ (BJP) ಕಾರ್ಯಕರ್ತನಾಗಿರುತ್ತೇನೆ. ಆಕಸ್ಮಾತ್‌ ಸಚಿವ ಸಂಪುಟ ವಿಸ್ತರಣೆಯಾದಲ್ಲಿ (Cabinet expansion), ದಾವಣಗೆರೆ ಜಿಲ್ಲೆಗೂ ಪ್ರಾತಿನಿಧ್ಯ ನೀಡುವು ದಾದರೆ ನನಗೇ ಸಚಿವ ಸ್ಥಾನ ನೀಡಬೇಕು. ಬೇರೆಯವರಿಗೆ ನೀಡುವುದಕ್ಕೆ ಬರುವುದಿಲ್ಲ ಎಂದು ಹೇಳಿದ್ದರು.  ಅನಾರೋಗ್ಯದ ಕಾರಣದಿಂದ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುತ್ತಾರೆಂಬ ಚರ್ಚೆಯೇ ಇಲ್ಲಿ ಅಪ್ರಸ್ತುತ. ಬಸವರಾಜ ಬೊಮ್ಮಾಯಿ ಅವರೇ ಸಿಎಂ (Karnataka CM) ಆಗಿ ಮುಂದುವರಿಯಲಿದ್ದಾರೆ. ಬೊಮ್ಮಾಯಿ ಸಿಎಂ ಅವಧಿ ಪೂರೈಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದರು.

ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ಸಚಿವ ಕೆ.ಎಸ್‌.ಈಶ್ವರಪ್ಪ(KS Eshwarappa) ಸಮಕಾಲೀನರಾದ, ಜನಸಂಘದಿಂದಲೂ ಗುರುತಿಸಿಕೊಂಡಿರುವ ಸಂಘ ಪರಿವಾರದ ಶಿಸ್ತಿನ ಸಿಪಾಯಿ ಅಂತಲೇ ಗುರುತಿಸಲ್ಪಟ್ಟ, ರೈತ ಹೋರಾಟಗಾರರೂ ಆದ ಉತ್ತರ ಶಾಸಕ ಎಸ್‌.ಎ.ರವೀಂದ್ರನಾಥ್‌ ತಾವು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂಬ ಮಾತುಗಳನ್ನು ಆಡುತ್ತಿದ್ದಂತೆಯೇ ಜಿಲ್ಲೆಯ ಬಿಜೆಪಿ ಪಾಳೆಯದಲ್ಲಿ ಸಂಚಲನ ಮೂಡಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆಯಾದರೆ, ಜಿಲ್ಲೆಗೊಂದು ಸಚಿವ ಸ್ಥಾನವಂತೂ ನಿಶ್ಚಿತ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

ಹೊಸ ಮುಖಗಳಿಗೆ ಅವಕಾಶ ನೀಡಲಿ :  ಬಿಜೆಪಿ ಸರ್ಕಾರದಲ್ಲಿ ಎರಡು- ಮೂರು ಬಾರಿ ಸಚಿವರಾಗಿದ್ದವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಿ ಎಂದು ಮಾಜಿ ಸಚಿವ ರೇಣುಕಾಚಾರ್ಯ(MP Renukacharya) ಹೇಳಿದ್ದರು.  ಗುಜರಾತ್‌(Gujarat) ಮಾದರಿಯಲ್ಲಿ ಸಂಪುಟ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕಾರ್ಯಕಾರಿಣಿ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಕುರಿತು ನಾವು ಪಕ್ಷದ ವರಿಷ್ಠರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು. ಇದೇ ವೇಳೆ ನನಗೆ ಸಚಿವನಾಗುವ(Minister) ಆಸೆ ಇಲ್ಲ. ಅದರ ಬಗ್ಗೆ ಅಪೇಕ್ಷಯೂ ಇಲ್ಲ. ನನಗೆ ಶಾಸಕ ಸ್ಥಾನದಲ್ಲಿ ತೃಪ್ತಿ ಇದೆ. ಬಿಜೆಪಿಯನ್ನು(BJP) ಗೆಲ್ಲಿಸಿಕೊಂಡು ಬರುವ ಕೆಲಸವನ್ನು ಹಿರಿಯರು ಮಾಡಬೇಕು. ಅಧಿಕಾರ ಅನುಭವಿಸಿದ ನಾಯಕರು ಸಚಿವ ಸ್ಥಾನ ತ್ಯಾಗ ಮಾಡಲಿ ಎಂದು ತಿಳಿಸಿದರು. ನನಗೇ ಸಚಿವ ಸ್ಥಾನ ಕೊಡಬೇಕೆಂದಿಲ್ಲ. ಯಾರಿಗೆ ಬೇಕಾದರೂ ಸಚಿವ ಸ್ಥಾನ ನೀಡಲಿ. ಹೊಸ ಮುಖಗಳಿಗೆ ಸಚಿವ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಅವರು ಹೇಳಿದ್ದರು.

ರಾಜೀನಾಮೆ ಕೇಳಿದ್ರೆ ಕೊಡಲು ಸಿದ್ಧ; ಈಶ್ವರಪ್ಪ

ಪಕ್ಷವು ರಾಜೀನಾಮೆ ಕೇಳಿದರೆ ಧಾರಾಳವಾಗಿ ಬಿಟ್ಟುಕೊಡಲು ತಯಾರಾಗಿದ್ದೇವೆ. ನನ್ನನ್ನು ತೆಗೆಯೋದಿದ್ದರೆ ನಾನು ಸಹ ತಯಾರಿದ್ದೇನೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ(KS Eshwarappa) ತಿಳಿಸಿದ್ದಾರೆ. 
ಹಿರಿಯರನ್ನು ಸಂಪುಟದಿಂದ ಕೈಬಿಡಬೇಕು ಎಂಬ ಶಾಸಕ ರೇಣುಕಾಚಾರ್ಯ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸ್ಥಾನದಿಂದ ಕೆಳಗಿಳಿದು ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಅಧಿಕಾರ ಎಷ್ಟರ ಮಟ್ಟಿಗೆ ಒಳ್ಳೇದು ಕೆಟ್ಟದು ಎಂಬುದು ನಮಗೆ ಗೊತ್ತಿದೆ ಎಂದರು. ಇನ್ನು ಶಿವಮೊಗ್ಗದಲ್ಲಿ(Shivamogga) ಮುಂದಿನ ಹಿಂದುಳಿದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಲ್ಲಿ ನಾವು ಮುಂದಿನ ಚುನಾವಣೆಗಳ(Election) ಬಗ್ಗೆ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios