Asianet Suvarna News Asianet Suvarna News

ಬೆಲೆ ಏರಿಸಿ ಬದುಕು ಮೂರಾಬಟ್ಟೆ ಮಾಡುತ್ತಿರುವ ಬಿಜೆಪಿ: ಯತೀಂದ್ರ ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಬೆಲೆ ಏರಿಕೆಯ ಮೂಲಕ ರೈತರ ಬದುಕನ್ನು ಮೂರಾಬಟ್ಟೆಮಾಡುತ್ತಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಚಿಕ್ಕಯ್ಯಛತ್ರ ಗ್ರಾಮದಲ್ಲಿ 50 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

MLA Yathindra Siddaramaiah Slams On BJP Govt At Nanjangud gvd
Author
First Published Mar 17, 2023, 9:22 PM IST

ನಂಜನಗೂಡು (ಮಾ.17): ಬಿಜೆಪಿ ಸರ್ಕಾರ ಬೆಲೆ ಏರಿಕೆಯ ಮೂಲಕ ರೈತರ ಬದುಕನ್ನು ಮೂರಾಬಟ್ಟೆಮಾಡುತ್ತಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಚಿಕ್ಕಯ್ಯಛತ್ರ ಗ್ರಾಮದಲ್ಲಿ 50 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸಾಲಮನ್ನಾ, ಕೃಷಿ ಭಾಗ್ಯ, ಹಾಲಿನ ಸಬ್ಸಿಡಿ ಹೆಚ್ಚಳ, ಹೈನುಗಾರಿಕೆಗೆ ಉತ್ತೇಜನ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ರೈತರ ಬದುಕನ್ನು ಸುಧಾರಣೆ ಮಾಡಲಾಗಿತ್ತು. ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರ್ಕಾರ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿತ್ತು. 

ಆದರೆ ರಸಗೊಬ್ಬರ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮೂಲಕ ರೈತರ ಬದುಕನ್ನು ಮೂರಾಬಟ್ಟೆಮಾಡಿದೆ ಎಂದು ದೂರಿದರು. ತಾಲೂಕಿನ ಚಿಕ್ಕಯ್ಯನ ಛತ್ರದ ರೈತ ಸಂಪರ್ಕ ಕೇಂದ್ರದ ಕಾಮಗಾರಿ ಹಲವಾರು ವರ್ಷಗಳಿಂದ ಜಾಗದ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಈಗ ಸ್ಥಳೀಯ ಮುಖಂಡರ ಸಹಾಯದಿಂದ ಸಮಸ್ಯೆಯನ್ನು ಬಗೆಹರಿಸಿ 50 ಲಕ್ಷ ವೆಚ್ಚದಲ್ಲಿ ಕಾಮಗಾರಿ ಮುಕ್ತಾಯವಾಗಿ ಕಟ್ಟಡ ಉದ್ಘಾಟನೆಗೊಂಡಿದೆ. ಇದರಿಂದ ಈ ಭಾಗದ ರೈತರಿಗೆ ಸಕಾಲದಲ್ಲಿ ನೆರವು ದೊರಕುವ ಮೂಲಕ ಸಹಾಯವಾಗಲಿದೆ ಎಂದರು. ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ 1.4 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿ, ತಾಂಡವಪುರ, ಕುಪ್ಪರವಳ್ಳಿ, ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ವಿವೇಕ ಯೋಜನೆಯಲ್ಲಿ ತಲಾ 15 ಲಕ್ಷ ರು. ವೆಚ್ಚದಲ್ಲಿ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಕುಡಿಯುವ ನೀರಿನ ಕೊರತೆ ನೀಗಿಸಿದ ಬಿಜೆಪಿ: ಸಿಎಂ ಬೊಮ್ಮಾಯಿ

ಟೋಲ್‌ ಸಮಸ್ಯೆ ಬಗೆಹರಿಸಲಿ: ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಹೆಚ್ಚಿನ ಟೋಲ್‌ ಸುಂಕ ವಸೂಲಿ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ಬಗ್ಗೆ ಸಾರ್ವಜನಿಕರು ತಮ್ಮ ಅಳಲು ತೋಡಿಕೊಂಡರೂ ಸಹ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಹೆಚ್ಚಿನ ಹೊರೆಯಾಗದಂತೆ ಟೋಲ್‌ ದರ ನಿಗದಿಪಡಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.

ದರ್ಶನ್‌ ಧ್ರುವನಾರಾಯಣ್‌ಗೆ ಟಿಕೆಟ್‌- ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್‌ ಅವರ ಹಠಾತ್‌ ನಿಧನರಾದ್ದರಿಂದ ಅವರ ಪುತ್ರ ದರ್ಶನ್‌ಧ್ರವ ಅವರಿಗೆ ಟಿಕೆಟ್‌ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಪಡಿಸಿದ್ದರು. ಅಲ್ಲದೆ ಪಕ್ಷಕ್ಕಾಗಿ ಜೀವವನ್ನೇ ಲೆಕ್ಕಿಸದೆ ದುಡಿದ ಧ್ರುವನಾರಾಯಣ್‌ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಅವರ ಕುಟುಂಬಕ್ಕೆ ಟಿಕೆಟ್‌ ನೀಡಬೇಕೆಂಬುದು ಪಕ್ಷದ ಬಹಳ ಜನರ ಬೇಡಿಕೆಯಾಗಿದ್ದರಿಂದ ಮಾಜಿ ಸಚಿವ ಎಚ್‌.ಸಿ. ಮಹದೇವಪ್ಪ ಅವರು ಉದಾರ ಮನಸ್ಸಿನಿಂದ ನಾನು ಅರ್ಜಿಯನ್ನು ಹಿಂಪಡೆಯುತ್ತೇನೆ.

ಧ್ರುವನಾರಾಯಣ ಪುತ್ರ ದರ್ಶನ್‌ಗೆ ನಂಜನಗೂಡು ಟಿಕೆಟ್‌ ಕೊಡಿ: ಮಹದೇವಪ್ಪ

ನಂಜನಗೂಡಿನಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದು ಅವರ ದೊಡ್ಡ ಗುಣ, ಕಾಂಗ್ರೆಸ್‌ನ ಎಲ್ಲ ನಾಯಕರ ಅಭಿಲಾಷೆಯಂತೆ ದರ್ಶನ್‌ಧ್ರುವ ಅವರಿಗೆ ಟಿಕೆಟ್‌ ದೊರಕಲಿದೆ, ಅಲ್ಲದೆ ಮಾ. 19ರಂದು ವರುಣ ಕಾಂಗ್ರೆಸ್‌ ವತಿಯಿಂದ ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ಧ್ರುವನಾರಾಯಣ್‌ ಅವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್‌.ಸಿ. ಬಸವರಾಜು, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ತಾಂಡವಪುರ ಗ್ರಾಪಂ ಅಧ್ಯಕ್ಷೆ ನಾಗವೇಣಿ ರಾಜು, ಉಪಾಧ್ಯಕ್ಷೆ ಲೀಲಾವತಿ, ಸದಸ್ಯರಾದ ಬಿ.ಪಿ. ಮಹದೇವು, ಎಪಿಎಂಸಿ ಮಾಜಿ ಉಪಾಧ್ಯಕ್ಷ ಮಹದೇವು ಇದ್ದರು.

Follow Us:
Download App:
  • android
  • ios