MLC Election | ಮೇಲ್ಮನೆ ದೋಸ್ತಿ : ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ
- ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲವೋ ಅಲ್ಲಿ ಬಿಜೆಪಿ
- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ
ಚಿಕ್ಕೋಡಿ (ನ.22): ವಿಧಾನ ಪರಿಷತ್ ಚುನಾವಣೆಯಲ್ಲಿ (MLC Election) ಎಲ್ಲಿ ಜೆಡಿಎಸ್ (JDS) ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲವೋ ಅಲ್ಲಿ ಬಿಜೆಪಿಯನ್ನು (BJP) ಜೆಡಿಎಸ್ ಬೆಂಬಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.
ಭಾನುವಾರ ಇಲ್ಲಿನ ಹಾಲಟ್ಟಿಬಳಿ ಇರುವ ಕವಟಗಿ ಮಠ ಫಾಮ್ ಹೌಸ್‌ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕಡೆ ಬಿಜೆಪಿಗೆ ಸಹಕಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಗೂ ಮಾಜಿ ಪ್ರಧಾಮಿ ಎಚ್.ಡಿ.ದೇವೇಗೌಡರಿಗೆ (HD Devegowda) ಮನವಿ ಮಾಡುವುದಾಗಿ ಹೇಳಿದರು.
ಅಭ್ಯರ್ಥಿಗಳ ಘೋಷಣೆ ಮಾಡುವ ಮೊದಲೇ ನಾಲ್ಕು ತಂಡಗಳ ಮೂಲಕ ರಾಜ್ಯದ ಮೂವತ್ತು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಬಿಜೆಪಿ ಜನ ಸ್ವರಾಜ್ (Jan Swaraj yatra) ಕಾರ್ಯಕ್ರಮ ಹಮ್ಮಿಕೊಂಡಿದೆ. ಮುಂದಿನ ದಿನಗಳಲ್ಲಿ ಕೇಂದ್ರದ ನಾಯಕರು ಪ್ರಚಾರ ನಡೆಸಲಿದ್ದಾರೆ ಎಂದರು.
ಶೀಘ್ರ ನೆರೆ ಪರಿಹಾರ: ರಾಜ್ಯದೆಲ್ಲೆಡೆ ಈ ಬಾರಿ ತೀವ್ರ ಮಳೆ (Rain) ಹಾನಿ ಆಗಿದೆ. ನೆರೆ ಹಾವಳಿ ಬಗ್ಗೆ ಎಲ್ಲ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡಿದ್ದು, ಈ ಕುರಿತು ಸರ್ಕಾರ ಶೀಘ್ರವೇ ಸಂಪೂರ್ಣ ವರದಿ ತರಿಸಿಕೊಂಡು ಸಂತ್ರಸ್ತರಿಗೆ ಸೂಕ್ತ ಪರಿಹಾರದ ವ್ಯವಸ್ಥೆ ಮಾಡಲಿದೆ. ಇದಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ಯಡಿಯೂರಪ್ಪ ಹೇಳಿದರು.
ಚಿಕ್ಕೋಡಿ ಜಿಲ್ಲೆ ಸ್ಥಾಪನೆಗೆ ಸಿಎಂ ಜತೆ ಚರ್ಚೆ: ಬಿಎಸ್‌ವೈ
ಕಳೆದ ಲೋಕಸಭೆ (Loksabha) ಮತ್ತು ವಿಧಾನಸಭೆ ಚುನಾವಣೆಯಲ್ಲಿ (Assembly Election) ಪ್ರಧಾನಮಂತ್ರಿ ನರೇಂದ್ರ ಮೋದಿ (Prime Minister Narendra Modi) ಸಮ್ಮುಖದಲ್ಲಿ ಬಹಿರಂಗವಾಗಿ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡುವ ಮಾತನ್ನು ತಾವು ಕೊಟ್ಟಿದ್ದು ನಿಜ. ಆದರೆ, ಕಾರಣಾಂತರಗಳಿಂದ ಚಿಕ್ಕೋಡಿ (chikkodi) ಜಿಲ್ಲೆ ರಚನೆ ವಿಳಂಬವಾಗಿದೆ. ಆದಷÜು್ಟಬೇಗ ಮುಖ್ಯಮಂತ್ರಿಗಳ ಜೊತೆ ನೂತನ ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ಮಾತನಾಡಿ, ಈ ಭಾಗದ ಜನರಿಗೆ ಕೊಟ್ಟಭರವಸೆಯನ್ನು ಈಡೇರಿಸುವುದಾಗಿ ಯಡಿಯೂರಪ್ಪ ಹೇಳಿದರು.
ನಮ್ಮನ್ನು ಹಲವು ಮುಖಂಡರು ಸಂಪರ್ಕಿಸಿದ್ದಾರೆ :
ಕಾಂಗ್ರೆಸ್‌ನ (Congress) ಮಾಜಿ ಮುಖ್ಯಮಂತ್ರಿ ನಮ್ಮ ಶಾಸಕರನ್ನ ಸಂಪರ್ಕಿಸಿದ್ದಾರೆ. 10 ಬಾರಿ ಸಂಪರ್ಕ ಮಾಡಿ ಕಾಂಗ್ರೆಸ್‌ಗೆ ಬರಲು ಹೇಳಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನ (Benglauru) ಜೆಪಿ ಭವನದಲ್ಲಿ ಇಂದು (ನ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿ ನಮ್ಮ ಶಾಸಕರನ್ನ ಸಂಪರ್ಕಿಸಿದ್ದಾರೆ. ನಮ್ಮ ಶಾಸಕರು ನನಗೆ ಕರೆ ಮಾಡಿ ಎಲ್ಲವನ್ನೂ ತಿಳಿಸಿದ್ದಾರೆ. ಜೆಡಿಎಸ್ ಮುಗಿದುಹೋಯ್ತು, ಭವಿಷ್ಯ ಇಲ್ಲವೆಂದು ಹೇಳಿದ್ದಾರೆ. ಈ ರೀತಿ ಹೇಳಿ ಜೆಡಿಎಸ್ ಮುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
'ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ದೇವೇಗೌಡ್ರು ಸಿದ್ಧ'
ಅವರು ಯಾವ ಪ್ರಯತ್ನ ಮಾಡಿದರೂ ಪ್ರಯೋಜನವಾಗಲ್ಲ. ನಮ್ಮ ಶಾಸಕರ ಬ್ರೈನ್ ವಾಶ್ ಮಾಡುವ ಕೆಲಸ ಮಾಡ್ತಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ (JDS) ಶಾಸಕರನ್ನ ಸೆಳೆಯುವ ಕೆಲಸ ಆಗುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಹೋಗುವವರು ಎಲ್ಲಿ ಭವಿಷ್ಯವಿದೆ ಅಲ್ಲಿಗೆ ಹೋಗಬಹುದು. ನಮ್ಮಲ್ಲಿ ಬೆಳೆದು ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಬೇಡ ಎಂದು ಕುಮಾರಸ್ವಾಮಿ ಕಿಡಿಕಾರಿದರು.
ಜಿಲ್ಲಾ ಕೇಂದ್ರಗಳಲ್ಲಿ ಜೆಡಿಎಸ್ ಕಾರ್ಯಕ್ರಮ
ಜನವರಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಜೆಡಿಎಸ್ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ. ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿಗೂ ನಾವು ಹೋಗುತ್ತೇವೆ. ಪಂಚರತ್ನ ಯೋಜನೆ ಜೊತೆ ಜನರ ಮುಂದೆ ಹೋಗುತ್ತೇವೆ. ಪಕ್ಷದ ಕಚೇರಿಯಲ್ಲಿ ಹೆಚ್ಚು ಕಾರ್ಯಕ್ರಮ ಇರುವುದಿಲ್ಲ. ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದೆವು. ಹೀಗಾಗಿ ಎಲ್ಲ ಮಾಹಿತಿ ಪಡೆದು ಗೆಲುವಿಗೆ ಪ್ರಯತ್ನಿಸುತ್ತೇವೆ ಎಂದರು.