MLC Election; 4 ಮಾಜಿ ಸಿಎಂಗಳಿಂದ ಭರ್ಜರಿ ಪ್ರಚಾರ

  •  ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ನಾಲ್ವರು ಮಾಜಿ ಮುಖ್ಯಮಂತ್ರಿಗಳಿಂದ ಪ್ರಚಾರ
  • ವಿಜಯಪುರ-ಬಾಗಲಕೋಟೆಯಲ್ಲಿ ಬಿಎಸ್‌ವೈ, ಹುಬ್ಬಳ್ಳಿಯಲ್ಲಿ ಶೆಟ್ಟರ್‌
  •  ಬಾಗಲಕೋಟೆಯಲ್ಲಿ ಸಿದ್ದು, ಮೈಸೂರು-ಮಂಡ್ಯದಲ್ಲಿ ಎಚ್‌ಡಿಕೆ ಪ್ರಚಾರ
MLC election slapping  campaign from 4 former CMs of Karanataka gow

ಬೆಂಗಳೂರು (ಜೂ.8): ರಾಜ್ಯದಲ್ಲಿ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ಚುನಾವಣೆ ರಂಗೇರುತ್ತಿದ್ದು ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಮಂಗಳವಾರ ರಾಜ್ಯದ ವಿವಿಧೆಡೆ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು. ಇವರಿಗೆ ಪಕ್ಷದ ಇತರೆ ಮುಖಂಡರು ಸಾಥ್‌ ನೀಡಿದರು.

ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರು ಬಾಗಲಕೋಟೆ, ವಿಜಯಪುರ, ಬೆಳಗಾವಿಯಲ್ಲಿ ಪ್ರಚಾರ ನಡೆಸಿದರೆ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಡ್ಯ ಮತ್ತು ಮೈಸೂರಲ್ಲಿ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಿದರು. ಇನ್ನು ಜಗದೀಶ್‌ ಶೆಟ್ಟರ್‌ ಅವರು ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ, ಮಾಜಿ ಸ್ಪೀಕರ್‌ ಬಸವರಾಜ ಹೊರಟ್ಟಿಪರ ಪ್ರಚಾರ ಕೈಗೊಂಡರು.

ನಿಲಂಬೂರು-ಮೈಸೂರು ರೈಲು ಮಾರ್ಗಕ್ಕೆ RAHUL GANDHI ಒತ್ತಾಯ,

2 ಜಿಲ್ಲೆಯಲ್ಲಿ ಬಿಎಸ್‌ವೈ ಪ್ರಚಾರ: ವಾಯವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿಯೇ ಬೆಳಗಾವಿಗೆ ಬಂದು ಉಳಿದುಕೊಂಡಿದ್ದ ಬಿ.ಎಸ್‌.ಯಡಿಯೂರಪ್ಪ ಅವರು ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಬಾಗಲಕೋಟೆಯಲ್ಲಿ ಬೆಳಗ್ಗೆ 11ಕ್ಕೆ ಪ್ರಚಾರ ಸಭೆ ನಡೆಸಿ ನಂತರ ಅಲ್ಲಿಂದ ವಿಜಯಪುರಕ್ಕೆ ತೆರಳಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಬುಧವಾರ ಬೆಳಗಾವಿಯಲ್ಲಿ ಮತ್ತೊಂದು ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಪಕ್ಷದ ಮುಖಂಡರ ಸಭೆ ನಡೆಸಿದ್ದು, ಬಳಿಕ ಬಾಗಲಕೋಟೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾದರು.

ಗೆಲ್ಸಿದ್ರೆ ನೋವು ಮರೀತೇನೆ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ಹಾಗೂ ನಂತರ ಮೈಸೂರಿನಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಪಕ್ಷದ ಅಭ್ಯರ್ಥಿ ಎಚ್‌.ಕೆ.ರಾಮು ಪರ ಎಚ್‌.ಡಿ.ಕುಮಾರಸ್ವಾಮಿ ಮತಯಾಚಿಸಿದರು. ಈ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ಮಂಡ್ಯ ಜಿಲ್ಲೆಯ ಜನತೆ ಜೆಡಿಎಸ್‌ಗೆ ಎಂದೂ ಮೋಸ ಮಾಡಿಲ್ಲ. ಕಳೆದ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆ ಹಾಗೂ ಪರಿಷತ್‌ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರ, ಹೊಂದಾಣಿಕೆ ರಾಜಕರಣದಿಂದ ಜೆಡಿಎಸ್‌ ಅಭ್ಯರ್ಥಿಗಳು ಸೋಲುಂಡರು. ಇದರಿಂದ ಮನಸ್ಸಿಗೆ ತುಂಬ ನೋವಾಗಿದೆ. ಇದೀಗ ಈ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಗೆದ್ದರೆ ಹಿಂದಿನ ನೋವು ಮರೆಯುತ್ತೇವೆ ಎಂದರು.

ಬ್ಲೂಬಾಕ್ಸ್‌ ಆದೇಶ ಪಾಲಿಸಲು ಸಮಯ ಇರಲಿಲ್ಲವೇ?: BDA Commissionerಗೆ ಹೈಕೋರ್ಟ್ ಕ್ಲಾಸ್

ವಿಜಯೇಂದ್ರಗೆ ಅದ್ಧೂರಿ ಸ್ವಾಗತ: ಮಂಡ್ಯ ಜಿಲ್ಲೆಯಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್‌ ಪರ ಪ್ರಚಾರ ನಡೆಸಲು ಆಗಮಿಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮಂಡ್ಯದಲ್ಲಿ ಮಂಗಳವಾರ ಅದ್ದೂರಿ ಸ್ವಾಗತ ನೀಡಲಾಯಿತು. ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಬಳಿ ಕ್ರೇನ್‌ ಮೂಲಕ ಭಾರೀ ಗಾತ್ರದ ಹೂವಿನ ಹಾರ ಹಾಗೂ ನಂತರ ಮಂಡ್ಯ ನಗರದ ಹೊರವಲಯದಲ್ಲಿ ಬೃಹತ್‌ ಸೇಬಿನ ಹಾರ ಹಾಕಿ ಬರಮಾಡಿಕೊಳ್ಳಲಾಯಿತು.

Charmadi Ghatನಲ್ಲಿ 20 ಅಡಿ ಕಂದಕಕ್ಕೆ ಬಿದ್ದ ಇನೋವಾ ಕಾರು, 5 ಮಂದಿ ಪಾರು

ಎಸ್‌.ಆರ್‌.ಪಾಟೀಲ್‌ ಮುನಿಸು:  ಕಳೆದ ಆರು ತಿಂಗಳಿಂದ ಕಾಂಗ್ರೆಸ್‌ನಿಂದ ದೂರವೇ ಉಳಿದಿರುವ ಮಾಜಿ ಸಚಿವ ಎಸ್‌.ಆರ್‌.ಪಾಟೀಲ ಮಂಗಳವಾರ ನಡೆದ ಕಾಂಗ್ರೆಸ್‌ನ ಪರಿಷತ್‌ ಚುನಾವಣಾ ಪ್ರಚಾರ ಸಭೆಯಿಂದ ದೂರ ಉಳಿದಿದ್ದರು. ಕಳೆದ ಡಿಸೆಂಬರ್‌ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ ಬಳಿಕ ಎಸ್‌.ಆರ್‌.ಪಾಟೀಲ ಅವರು ಬಹುತೇಕ ಕಾಂಗ್ರೆಸ್‌ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದರು.

Latest Videos
Follow Us:
Download App:
  • android
  • ios