ಕರ್ನಾಟಕದಲ್ಲಿ ಲೋಕಸಭೆ ಆಯ್ತು, ಈಗ ಎಂಎಲ್‌ಸಿ ಚುನಾವಣೆಯ ಕಾವು..!

ಮೇ. 16ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ 20 ರಂದು ಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ. 
 

MLC Election will Be Held on June 30th in Karnataka grg

ಬೆಂಗಳೂರು(ಮೇ.09): ಮೂರು ಮತ್ತು ಮೂತ್ತು ವಿಧಾನಪರಿಷತ್‌ನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಇದೇ ತಿಂಗಳು 16ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ 20 ರಂದು ಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತ ದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.

ಈಸಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ಚಂದ್ರಶೇಖರ್‌ಬಿ.ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದ ಎ.ದೇವೇಗೌಡ, ಆತ್ಮೀಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ವೈ.ಎ. ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಸ್.ಎಲ್.ಭೋಜೇಗೌಡ, ನೈಯತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಅವರ ಅವಧಿಯು ಜೂ.21ಕ್ಕೆ ಅವಧಿ ಮುಕ್ತಾ ಯಗೊಳ್ಳಲಿದೆ. ಆಯನೂರು ಮಂಜುನಾಥ, ಮರಿತಿಬ್ಬೇಗೌಡ ಈಗಾಗಲೇ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಗೆ ಮತ್ತೊಬ್ಬ ಎಂಎಲ್‌ಸಿ ಗುಡ್‌ಬೈ: ಕೆ.ಪಿ.ನಂಜುಂಡಿ ನಾಳೆ ಕಾಂಗ್ರೆಸ್‌ ಸೇರ್ಪಡೆ

ಮೈತ್ರಿಕೂಟಕ್ಕೆ ಮೇಲ್ಮನೆ ಅಗ್ನಿ ಪರೀಕ್ಷೆ: 

ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯದ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ಎದುರಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಕೂಟಕ್ಕೆ ಅಗ್ನಿಪರೀಕ್ಷೆ ಎದುರಾಗಿದೆ.
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ತಾರಕಕ್ಕೇರಿ ರುವ ಈ ಸಂದರ್ಭದಲ್ಲಿ ಉಭಯ ಪಕ್ಷಗಳು ಹೇಗೆ ಸ್ಥಾನ ಹೊಂದಾಣಿಕೆ ಮಾಡಿಕೊಂಡು ಪರಿಷತ್ ಚುನಾವಣೆಗೆ ಎದುರಿಸುತ್ತವೆ ಎಂಬುದು ಕುತೂಹಲ ಮೂಡಿದೆ.

ರಾಜ್ಯದಲ್ಲಿ ಎರಡು ಹಂತದ ಲೋಕಸಭಾ ಚುನಾ ವಣೆ ಮುಗಿದಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ಅವರು ಬುಧವಾರ ಪಕ್ಷದ ವರಿಷ್ಠ ರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ಹೊರಬೀಳುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.

ಕಾನೂನು ತಿದ್ದುಪಡಿ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಚಳವಳಿ: ಪ್ರಲ್ಹಾದ್‌ ಜೋಶಿ ಎಚ್ಚರಿಕೆ

ವಿಧಾನಪರಿಷತ್‌ನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

ಈ ಪೈಕಿ ಜೆಡಿಎಸ್ ಕಳೆದ ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಹಾಗೂ ನೈಯತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಭೋಜೇಗೌಡ ಪ್ರತಿನಿಧಿಸುತ್ತಿದ್ದರು. ಈ ಪೈಕಿ ಮರಿತಿದ್ದೇಗೌಡ ಈಗಾಗಲೇ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹೀಗಾಗಿ, ಈ ಆರು ಕ್ಷೇತ್ರಗಳ ಪೈಕಿ ಬಿಜೆಪಿಯು ಭೋಜೇಗೌಡ ಪ್ರತಿನಿಧಿಸುತ್ತಿರುವ ಕ್ಷೇತ್ರವನ್ನು ಮಾತ್ರ ಜೆಡಿಎಸ್‌ಗೆ ಬಿಟ್ಟುಕೊಡುವ ಉದ್ದೇಶ ಹೊಂದಿದೆ. ಆದರೆ, ಜೆಡಿಎಸ್ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನೂ ಬಿಟ್ಟುಕೊಡುವಂತೆ ಡುವಂತೆ ಬೇಡಿಕೆ ಇಡುವ ಸಾಧ್ಯತೆಯಿದೆ ಎನ್ನಲಾಗಿದೆ.

Latest Videos
Follow Us:
Download App:
  • android
  • ios