ಮೋದಿ ಪ್ರಮಾಣವಚನ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸಂಭ್ರಮ
ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ಪ್ರಧಾ ನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾನುವಾರ ರಾಜ್ಯಾದ್ಯಂತ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಬೆಂಗಳೂರು (ಜೂ.10): ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ಪ್ರಧಾ ನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾನುವಾರ ರಾಜ್ಯಾದ್ಯಂತ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಸಂಜೆ 7.15ಕ್ಕೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿಯಾಗಿ ಮೋದಿಯವರು ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲಾ ಬಿಜೆಪಿ ಕಚೇರಿಗಳ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಮೋದಿ ಪರ ಜಯಘೋಷಗಳು ಮೊಳಗಿದವು. ಬಿಜೆಪಿ ಬಾವುಟ ಬೀಸುತ್ತಾ ಭಾರತ ಮಾತಾಕಿ ಜೈ, ಮೋದಿಕಿ ಜೈ ಎಂದು ಘೋಷಣೆ ಕೂಗಿದರು.
ಈ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾ ದ್ಯಂತ ಹಬ್ಬದ ರೀತಿಯಲ್ಲಿ ಆಚರಿಸಿತು. ಪಕ್ಷದ ಕಚೇರಿ ಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿಎಲ್‌ಇಡಿ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಯಿತು. ಮಂಡ್ಯದಲ್ಲಿ ಬೆಂಗಳೂರು - ಮೈಸೂರು ಹೆದ್ದಾರಿ ಯಲ್ಲಿ ಸೇರಿದ ಮೈತ್ರಿ ಪಕ್ಷದ ನೂರಾರು ಕಾರ್ಯ ಕರ್ತರು, ಮೋದಿ, ಕುಮಾರಸ್ವಾಮಿ ಪರ ಜೈಕಾರ ಕೂಗಿದರು. ನಗರದ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಾಲಯದ ಆವರಣದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ ಆರಾಧ್ಯ ಉರುಳು ಸೇವೆ ಸಲ್ಲಿಸಿದರು.
ಭೋವಿ ನಿಗಮದ ಅವ್ಯವಹಾರ ತನಿಖೆಯಾಗಲಿ: ಮತ್ತೊಂದು ಆಡಿಯೋ ಹರಿಬಿಟ್ಟ ಗೂಳಿಹಟ್ಟಿ ಶೇಖರ್
ಇದೇ ವೇಳೆ, ಮೈಸೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಈ.ಸಿ.ನಿಂಗರಾಜ್ ಗೌಡ ಅವರು ನಗರದ ಮಿಮ್ ಹೆರಿಗೆ ಆಸ್ಪತ್ರೆ ಬಳಿ ಅನ್ನದಾಸೋಹ ನಡೆಸಿದರು. ಬೆಳಗ್ಗೆ ಉಪಹಾರ ಗಂಜಿ, ಮಧ್ಯಾಹ್ನ ಮತ್ತು ರಾತ್ರಿ ಊಟ, ಹಣ್ಣಿನ ವ್ಯವಸ್ಥೆ ಮಾಡಿದರು. ಹುಬ್ಬಳ್ಳಿಯಲ್ಲಿ ಕರವೇ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಹಳೇ ಕೋರ್ಟ್ ಬಳಿ ಇರುವ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ದರು. ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಸಿದ್ದಾರ್ಥ ಸಿಂಗ್ ನೇತೃತ್ವದಲ್ಲಿ ನಗರದ ಭಟ್ಟರಹಳ್ಳಿ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬೃಹತ್ ಬೈಕ್ ಬ್ಯಾಲಿ ನಡೆಸಲಾಯಿತು.
ಮಾಜಿ ಸ್ಪೀಕರ್‌ಕೆ.ಜಿ.ಬೋಪಯ್ಯ ಸಮ್ಮುಖದಲ್ಲಿ ಮಡಿಕೇರಿಯ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಯಾದಗಿರಿಯಲ್ಲಿ ಇಷ್ಟಸಿದ್ಧಿ ಆಂಜನೇಯ ದೇವಾಲಯದಲ್ಲಿ ಮೋದಿಗೆ ಶುಭ ಕೋರಿ ವಿಶೇಷ ಪೂಜೆ ನಡೆಸಲಾಯಿತು. ಮೈಸೂರಿನಲ್ಲಿ ಯದುವೀರ್ ಒಡೆಯರ್‌ಸೇನೆ ಹಾಗೂ ನರೇಂದ್ರ ಮೋದಿ ಅಭಿಮಾನಿ ಬಳಗದವರು ನಗರದ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಸಾರ್ವಜನಿಕರಿಗೆ ಚಹ ವಿತರಿಸಿ ಸಂಭ್ರಮಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಸದನದಲ್ಲಿ ಆಕಳಿಸುತ್ತಿದ್ರು: ಕೇಂದ್ರ ಸಚಿವ ಜೋಶಿ ವ್ಯಂಗ್ಯ
ಇದೇ ವೇಳೆ, ಚನ್ನಪಟ್ಟಣ, ಕಂಪ್ಲಿ, ಎಚ್.ಡಿ.ಕೋಟೆ, ರಾಮನಗರ, ಚನ್ನಗಿರಿ, ಬಂಗಾರಪೇಟೆ, ಶಿವಮೊಗ್ಗ, ಉಡುಪಿ, ಹರಪನಹಳ್ಳಿ ಸೇರಿ ರಾಜ್ಯದ ಇತರೆಡೆಯೂ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಜನರಿಗೆ ಹೋಳಿಗೆ ಊಟ: ಮೋದಿ ಪ್ರಮಾಣವಚನ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಹಲಗೇರಿಗ್ರಾಮದವೀರೇಶಉಜ್ಜನಗೌಡ್ರ ಮಾಲೀಕತ್ವದ ಮೋದಿ ಹೋಟೆಲ್‌ನವರು ಜನರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಮಧ್ಯಾಹ್ನ 12ರಿಂದ ಸಾರ್ವಜನಿಕರಿಗೆ ಜೋಳದ ರೊಟ್ಟಿ, ಎರಡು ಬಗೆಯ ಪಲ್ಯ, ಹೋಳಿಗೆ, ಅನ್ನ-ಸಾಂಬಾರ ಬಡಿಸಿದರು. 4 ಸಾವಿರಕ್ಕೂ ಅಧಿಕ ಜನ ಸರದಿ ಸಾಲಿನಲ್ಲಿ ನಿಂತು ಊಟ ಮಾಡಿದರು.