ಬಿಜೆಪಿ ಗೆಲುವಿಗೆ ಮೋದಿ ಕೊಟ್ಟ ಹಣವೇ ಕಾರಣ: ಶಾಸಕ ಕೆ.ಎಂ.ಉದಯ್ ಆರೋಪ

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಪ್ರಧಾನಿ ಮೋದಿ ಕೊಟ್ಟ ಹಣವೇ ಕಾರಣ ಎಂದು ಶಾಸಕ ಕೆ.ಎಂ.ಉದಯ್ ಆರೋಪಿಸಿದರು.

Money given by PM Modi is the reason for BJPs victory Says MLA KM Uday gvd

ಮದ್ದೂರು (ಡಿ.06): ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಪ್ರಧಾನಿ ಮೋದಿ ಕೊಟ್ಟ ಹಣವೇ ಕಾರಣ ಎಂದು ಶಾಸಕ ಕೆ.ಎಂ.ಉದಯ್ ಆರೋಪಿಸಿದರು. ಪಟ್ಟಣದ ಉರ್ದು ಸರ್ಕಾರಿ ಶಾಲಾ ಆವರಣದಲ್ಲಿ ಜೆಡಿಎಸ್‌ನ ಅಲ್ಪಸಂಖ್ಯಾತರ ಮುಖಂಡರನ್ನು ಕಾಂಗ್ರೆಸ್ ಸೇರ್ಪಡೆ ಕಾರ್‍ಯಕ್ರಮದ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಕರ್ನಾಟಕದಿಂದ ಲೂಟಿ ಹಣದಿಂದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ಕೈ ದುಡ್ಡು ಕಾರಣ ಎನ್ನುವುದು ಕುಮಾರಸ್ವಾಮಿ ಯಾವುದೇ ದಾಖಲೆ ನೀಡಿಲ್ಲ. 

ನಾವೂ ಕೂಡ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲು ಮೋದಿ ಕಳುಹಿಸಿದ ದುಡ್ಡು ಕಾರಣ ಎಂದು ಹೇಳುತ್ತೇವೆಂದು ದೂಷಿಸಿದರು. ಕರ್ನಾಟಕದಲ್ಲಿ ಜನಪರ ಯೋಜನೆಯನ್ನು ಹತ್ತಿರದಿಂದ ಗಮನಿಸಿದ ತೆಲಂಗಾಣ ಮತದಾರರು ನಮ್ಮ ರಾಜ್ಯದಲ್ಲೂ ಕಾಂಗ್ರೆಸ್ ಬಡವರ ಪರವಾಗಿ ಆಡಳಿತ ನಡೆಸುತ್ತದೆ ಎನ್ನುವುದನ್ನು ಅರಿತ ಆ ರಾಜ್ಯದ ಮತದಾರರು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವ ಅಲ್ಪಸಂಖ್ಯಾತರಿಂದ ಪಕ್ಷದ ಬಲವರ್ಧನೆಗೆ ಇನ್ನಷ್ಟು ಶಕ್ತಿ ಬಂದಿದೆ. ಮುಂದಿನ ಲೋಕಸಭಾ ಚುನಾವಣಎ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

40 ವರ್ಷದ ಹಿಂದೆ ಜಲಾಶಯದೊಳಗೆ ಮುಳುಗಿದ್ದ ಶಿವನ ದೇವಾಲಯ ಪತ್ತೆ!

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ: ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ತೀರ್ಮಾನ ವಿರೋಧಿಸಿ ಅಲ್ಪಸಂಖ್ಯಾತ ಮುಖಂಡರು ಭಾನುವಾರ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಪಟ್ಟಣದ ರಾಂರಹೀಂ ಬಡಾವಣೆಯ ಸರ್ಕಾರಿ ಉರ್ದು ಶಾಲಾ ಆವರಣದಲ್ಲಿ ಶಾಸಕ ಕೆ.ಎಂ. ಉದಯ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ರಾಜ್ಯ ಸಂಘಟನಾ ಕಾರ್‍ಯದರ್ಶಿ ಫೈರೋಜ್ ನೇತೃತ್ವದಲ್ಲಿ ಸುಮಾರು 60 ಮಂದಿ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು. ನಂತರ ಶಾಸಕ ಕೆ.ಎಂ. ಉದಯ್, ಪಕ್ಷ ಸೇರ್ಪಡೆಗೊಂಡ ಅಲ್ಪಸಂಖ್ಯಾತ ಮುಖಂಡರಿಗೆ ಪಕ್ಷದ ಬಾವುಟ ನೀಡಿ ಶಾಲು ಹೊದಿಸಿ ಅಭಿನಂದಿಸಿ ಪಕ್ಷಕ್ಕೆ ಬರಮಾಡಿಕೊಂಡರು.

Latest Videos
Follow Us:
Download App:
  • android
  • ios