ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ಬದಲಿಸಿ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸಲು ಮುಂದಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ (ಕೆಸಿಆರ್) ಅವರು ಇನ್ನು ಮುಂದೆ ತಿಂಗಳಲ್ಲಿ ಒಂದು ವಾರವನ್ನು ದೆಹಲಿಯಲ್ಲಿ ಕಳೆಯಲಿದ್ದಾರೆ.
ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ಬದಲಿಸಿ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸಲು ಮುಂದಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ (ಕೆಸಿಆರ್) ಅವರು ಇನ್ನು ಮುಂದೆ ತಿಂಗಳಲ್ಲಿ ಒಂದು ವಾರವನ್ನು ದೆಹಲಿಯಲ್ಲಿ ಕಳೆಯಲಿದ್ದಾರೆ. ಪಕ್ಷದ ರಾಷ್ಟ್ರೀಯ ಕಚೇರಿ ಉದ್ಘಾಟನೆ ಸಲುವಾಗಿ ದೆಹಲಿಯಲ್ಲಿ ಒಂದು ವಾರದಿಂದ ಬೀಡುಬಿಟ್ಟಿದ್ದ ಕೆಸಿಆರ್ ಶುಕ್ರವಾರ ಹೈದರಾಬಾದ್‌ಗೆ ಮರಳಿದ್ದಾರೆ.
ದೆಹಲಿ ವಾಸ್ತವ್ಯದ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷಗಳ ನಾಯಕರು ಹಾಗೂ ರೈತ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಜನವರಿಯಿಂದ ತಿಂಗಳಲ್ಲಿ ಒಂದು ವಾರ ದೆಹಲಿಯಲ್ಲಿರುತ್ತೇನೆ. ತೆಲಂಗಾಣದ ಬಜೆಟ್ ಅಧಿವೇಶನ ಮಾರ್ಚ್‌ನಲ್ಲಿ ನಡೆಯಲಿದ್ದು, ಆನಂತರ ತಿಂಗಳಲ್ಲಿ 2 ವಾರ ದೆಹಲಿಯಲ್ಲಿ ಲಭ್ಯ ಇರುತ್ತೇನೆ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿದೆ. 2023ರ ಡಿಸೆಂಬರ್‌ಗೆ ತೆಲಂಗಾಣ ವಿಧಾನಸಭೆ ಹಾಗೂ 2024ರ ಏಪ್ರಿಲ್‌ನಲ್ಲಿ ಲೋಕಸಭೆ ಚುನಾವಣೆ ನಡೆಯಬೇಕಿದೆ. ಹೀಗಾಗಿ ಎರಡೂ ಚುನಾವಣೆಗಳತ್ತ ಸಮಾನ ಗಮನಹರಿಸಲು ಹೈದರಾಬಾದ್-ದೆಹಲಿ ಮಧ್ಯೆ ಓಡಾಡುವುದು ಕೆಸಿಆರ್ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಮದ್ಯ ನೀತಿ ಹಗರಣ: ಸಿಬಿಐನಿಂದ ಕೆಸಿಆರ್ ಪುತ್ರಿ ಕವಿತಾ ವಿಚಾರಣೆ
ಟಿಆರ್‌ಎಸ್ ಈಗ ಅಧಿಕೃತವಾಗಿ ಬಿಆರ್‌ಎಸ್, ರಾಜ್ಯ ಚುನಾವಣೆಯಲ್ಲಿ ಜೆಡಿಎಸ್‌ಗೆ ಬೆಂಬಲ!
