Asianet Suvarna News Asianet Suvarna News

ಗ್ಯಾರಂಟಿ ಯೋಜನೆಗೆ ಮತ್ತಷ್ಟು ಒತ್ತು, ವಿಪಕ್ಷ ಟೀಕೆಗೆ ಉತ್ತರಿಸಲ್ಲ: ಸಚಿವ ಮಧು ಬಂಗಾರಪ್ಪ

ಗ್ಯಾರಂಟಿ ಯೋಜನೆಗಳ ಅನುಷ್ಟಾನವಾಗಿದ್ದು, ಅವುಗಳಿಗೆ ಬಜೆಟ್‌ನಲ್ಲಿ ಹೆಚ್ಚು ಆದ್ಯತೆ ನೀಡಲಾಗುವುದು. ಜನರು ನಮ್ಮ ಮೇಲೆ ವಿಶ್ವಾಸವಿಟ್ಟು, ಅಧಿಕಾರ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಬೇಕಾಗಿದೆ. ವಿಪಕ್ಷದವರ ಟೀಕೆಗಳಿಗೆ ನಾವು ಉತ್ತರ ಕೊಡುವುದೂ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
 

More emphasis on guarantee schemes not responding to opposition criticism Says Minister Madhu Bangarappa gvd
Author
First Published Feb 16, 2024, 2:00 AM IST

ದಾವಣಗೆರೆ (ಫೆ.16): ಗ್ಯಾರಂಟಿ ಯೋಜನೆಗಳ ಅನುಷ್ಟಾನವಾಗಿದ್ದು, ಅವುಗಳಿಗೆ ಬಜೆಟ್‌ನಲ್ಲಿ ಹೆಚ್ಚು ಆದ್ಯತೆ ನೀಡಲಾಗುವುದು. ಜನರು ನಮ್ಮ ಮೇಲೆ ವಿಶ್ವಾಸವಿಟ್ಟು, ಅಧಿಕಾರ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಬೇಕಾಗಿದೆ. ವಿಪಕ್ಷದವರ ಟೀಕೆಗಳಿಗೆ ನಾವು ಉತ್ತರ ಕೊಡುವುದೂ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನ್ಯಾಮತಿ ತಾ. ಸೂರಗೊಂಡನಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ವಿಶ್ವಾಸಕ್ಕೆ ಪೂರಕವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಅನುಷ್ಟಾನವಾಗಿದೆ. ಬಜೆಟ್‌ನಲ್ಲಿ ಇನ್ನೂ ಹೆಚ್ಚು ಒತ್ತು ನೀಡುತ್ತೇವೆ. ವಿಪಕ್ಷದವರ ಟೀಕೆಗೆಲ್ಲಾ ನಾವು ಉತ್ತರ ಕೊಡಬೇಕಿಲ್ಲ ಎಂದರು.

ರಾಜ್ಯದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಆರಂಭಿಸಲು ಯೋಜಿಸಲಾಗಿದೆ. ಈಗಾಗಲೇ 12 ಸಾವಿರ ಶಿಕ್ಷಕರ ಭರ್ತಿ ಮಾಡಿದ್ದು, ಮತ್ತೆ ಹೊಸದಾಗಿ 10 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಅನುದಾನ ಕೋರಿದ್ದೇವೆ. 2015ರ ನಂತರ ಅನುದಾನಿತ ಶಾಲೆಗಳ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿಲ್ಲ. ನಂತರದ ವರ್ಷಗಳ ಹುದ್ದೆಗಳ ಭರ್ತಿಗೂ ಅನುಮತಿ ಕೇಳಿದ್ದೇವೆ. ಹಿಂದಿನ ಶಿಕ್ಷಣ ನೀತಿಗಿಂತಲೂ ಉತ್ತಮವಾದ ಶಿಕ್ಷಣ ನೀತಿಯನ್ನು ನಾವು ಜಾರಿಗೆ ತರುತ್ತೇವೆ ಎಂದು ಅವರು ತಿಳಿಸಿದರು.

ದೇಶ ವಿಭಜನೆ ಮಾಡಿದ ಕಾಂಗ್ರೆಸ್ಸಿಂದ ಪಾಠ ಕಲಿಯಬೇಕಿಲ್ಲ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರೆಂಬುದನ್ನು ಪಕ್ಷವು ತೀರ್ಮಾನಿಸುತ್ತದೆ. ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸತ್ತಿದ್ದು, ಪಕ್ಷದ ಅಭ್ಯರ್ಥಿ ಬಗ್ಗೆ ಸಮಿತಿ ತೀರ್ಮಾನಿಸುತ್ತದೆ. ಎಲ್ಲಾ ಮುಖಂಡರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಪಕ್ಷವನ್ನು ಶಿವಮೊಗ್ಗ ಕ್ಷೇತ್ರದಲ್ಲಿ ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ. ಪಕ್ಷವು ಘೋಷಿಸಿದ ಅಭ್ಯರ್ಥಿಯನ್ನು ಶೇ.100ಕ್ಕೆ ನೂರು ಗೆಲ್ಲಿಸುತ್ತೇವೆ ಎಂದ ಅವರು, ಶಿವಮೊಗ್ಗ ಕ್ಷೇತ್ರದ ಕುರಿತಂತೆ ಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಹಳೆ ವಿಚಾರ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಕಾನೂನಿಗೆ ತಿದ್ದುಪಡಿ: ಕಾನೂನಿಗೆ ತಿದ್ದುಪಡಿ ತಂದು ಪದೋನ್ನತಿ ಪಡೆದ ಶಿಕ್ಷಕರ ನಡುವಿನ ವೇತನ ತಾರತಮ್ಯ ಸರಿಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಜೆಡಿಎಸ್‌ ನ ಮರಿತಿಬ್ಬೇಗೌಡ, ಭೋಜೇಗೌಡ, ಬಿಜೆಪಿ ಸದಸ್ಯ ಎಸ್‌.ವಿ.ಸಂಕನೂರ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಡ್ತಿ ಪಡೆದ ಹಿರಿಯರು ಮತ್ತು ಪ್ರಸ್ತುತ ಇರುವ ಕಿರಿಯ ಶಿಕ್ಷಕರ ನಡುವೆ ವೇತನ ತಾರತಮ್ಯ ಇರುವುದು ನನ್ನ ಗಮನಕ್ಕೆ ಬಂದಿದೆ. ಸಮಸ್ಯೆ ಇದೆ ಎನ್ನುವುದನ್ನು ಒಪ್ಪಿಕೊಳ್ಳುತ್ತೇವೆ. 

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎಚ್‌ಡಿಕೆ ಸ್ಪರ್ಧೆ ಮಾಡಲ್ವಾ?: ಶಾಸಕ ಬಾಲಕೃಷ್ಣ

ಅದನ್ನು ಸರಿಪಡಿಸಲು ಕಾನೂನು ತಿದ್ದುಪಡಿ ಮಾಡಬೇಕಾಗಿದ್ದು ಅದಕ್ಕೆ ನಮ್ಮ ಸಹಮತವಿದೆ. ಕಾಲಮಿತಿಯಲ್ಲಿ ತಿದ್ದುಪಡಿ ಮಾಡಬೇಕಾಗಿದ್ದು ತಾರತಮ್ಯ ಸರಿಪಡಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತದೆ ಎಂದರು. ‘ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ಹೊಂದಿದ ಶಿಕ್ಷಕರು ಪ್ರೌಢಶಾಲೆಯಲ್ಲಿ ತಮಗಿಂತ ಕಿರಿಯ ಶಿಕ್ಷಕ ಪಡೆಯುವ ವೇತನಕ್ಕೂ ಕಡಿಮೆ ವೇತನ ಪಡೆಯುತ್ತಿದ್ದಾರೆ. ಪ್ರೌಢಶಾಲೆಯಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆದು ಉಪನ್ಯಾಸಕರಾಗಿರುವ ಹಿರಿಯರು ಕಿರಿಯ ಉಪನ್ಯಾಸಕರಿಗಿಂತ ಕಡಿಮೆ ವೇತನ ಪಡೆಯುತ್ತಿದ್ದಾರೆ ಎಂದು ಹೇಳಿದರು.

Follow Us:
Download App:
  • android
  • ios