ಕಾಂಗ್ರೆಸ್ಸಿನಲ್ಲಿ ನಿಷ್ಠಾವಂತರಾಗಿ ದುಡಿದವರಿಗೆ ಹೆಚ್ಚು ಮಾನ್ಯತೆ: ಸಚಿವ ಡಿ.ಸುಧಾಕರ್
ಕಳೆದ ನೂರಾರು ವರ್ಷಗಳಿಂದ ಜನರ ಮನದಲ್ಲಿ ಆಳವಾಗಿ ಬೇರೂರಿರುವ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಕಾರ್ಯನಿರ್ವಹಿಸಿದವರಿಗೆ ಸ್ಥಾನಮಾನಗಳು ಸುಲಭವಾಗಿ ಸಿಗಲಿವೆ. ತಾಲೂಕಿನ ಮೀರಸಾಬಿಹಳ್ಳಿ ಗ್ರಾಮದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಓ.ರಂಗಸ್ವಾಮಿ (ತಬಲ) ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿರಲಿಲ್ಲ.
ಚಳ್ಳಕೆರೆ (ನ.15): ಕಳೆದ ನೂರಾರು ವರ್ಷಗಳಿಂದ ಜನರ ಮನದಲ್ಲಿ ಆಳವಾಗಿ ಬೇರೂರಿರುವ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಕಾರ್ಯನಿರ್ವಹಿಸಿದವರಿಗೆ ಸ್ಥಾನಮಾನಗಳು ಸುಲಭವಾಗಿ ಸಿಗಲಿವೆ. ತಾಲೂಕಿನ ಮೀರಸಾಬಿಹಳ್ಳಿ ಗ್ರಾಮದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಓ.ರಂಗಸ್ವಾಮಿ (ತಬಲ) ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿರಲಿಲ್ಲ. ಆದರೆ, ಪಕ್ಷ ಆತನಿಗೆ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ ಮಾಡುವ ಮೂಲಕ ದುಡಿದವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.
ಇಲ್ಲಿನ ನಿವಾಸದಲ್ಲಿ ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶನ ಸದಸ್ಯ ಓ.ರಂಗಸ್ವಾಮಿ ನಾಮನಿರ್ದೇಶನ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಸಚಿವರನ್ನು ಅಭಿನಂದಿಸಿ, ಸನ್ಮಾನಿಸಿದ ಸಂದರ್ಭದಲ್ಲಿ ಮಾತನಾಡಿದರು. ಚಳ್ಳಕೆರೆ ತಾಲೂಕಿನ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ರಂಗಸ್ವಾಮಿಯಂತಹ ಸಾವಿರಾರು ಕಾರ್ಯಕರ್ತರ ಪಡೆ ನಮ್ಮಲ್ಲಿದೆ. ಎಲ್ಲರಿಗೂ ಸ್ಥಾನಮಾನ ಕಲ್ಪಿಸಲು ಸಾಧ್ಯವಿಲ್ಲ, ಸ್ಥಾನಮಾನ ಸಿಗಲಿ ಬಿಡಲಿ ಪಕ್ಷ ಸಂಘಟನೆಗೆ ಎಲ್ಲರೂ ಮುಂದಾಗಬೇಕು ಎಂದರು. ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾಗಿ ಓ.ರಂಗಸ್ವಾಮಿ ಜನಸಾಮಾನ್ಯರ ಸಮಸ್ಯೆಗಳ ನಿವಾರಣೆಗೆ ಹೆಚ್ಚು ಸ್ಪಂದಿಸುವ ಮೂಲಕ ಮತ್ತಷ್ಟು ಖ್ಯಾತಿಗಳಿಸಲಿ ಎಂದು ಶುಭಹಾರೈಸಿದರು.
ಬಾನಂಗಳಕ್ಕೆ ಕನ್ನಡ ರಂಗು: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಂದ ಕನ್ನಡ ಧ್ವಜ ವರ್ಣದ ಗಾಳಿಪಟ ಹಾರಾಟ!
ಕೆಡಿಪಿ ನೂತನ ನಾಮನಿರ್ದೇಶನ ಸದಸ್ಯ ಓ.ರಂಗಸ್ವಾಮಿ ಮಾತನಾಡಿ, ನಾನು ಪಕ್ಷದ ಮುಖಂಡರಿಗೆ ಯಾವುದೇ ಒತ್ತಡ ಹೇರಿರಲಿಲ್ಲ. ಆದರೆ, ನನಗೆ ಎರಡು ದಿನಗಳ ಕೆಳಗೆ ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶನ ಮಾಡಿದ ಬಗ್ಗೆ ಮಾಹಿತಿ ಪಡೆಯಲಾಯಿತು. ಶಾಸಕ ಟಿ.ರಘುಮೂರ್ತಿಯವರು ನನ್ನ ಹೆಸರನ್ನು ಶಿಫಾರಸ್ಸು ಮಾಡಿದ್ದು, ಸಚಿವರಾದ ಸುಧಾಕರ್ ಸಹ ಸಮ್ಮತಿಸಿ ಆದೇಶ ನೀಡಿದ್ದಾರೆ. ನನ್ನ ನೂತನ ಜವಾಬ್ದಾರಿಯನ್ನು ಅತ್ಯಂತ ಎಚ್ಚರಿಕೆಯಿಂದ ಪಕ್ಷಕ್ಕೆ ಒಳ್ಳೆ ಹೆಸರು ಬರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ವೀರಭದ್ರಪ್ಪ, ದೊಡ್ಡಬೀರನಹಳ್ಳಿ ಜಯಣ್ಣ, ಮೀರಸಾಬಿಹಳ್ಳಿ ಮಲ್ಲೇಶ್, ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.