ಕರ್ನಾಟಕ ವಿಧಾನಸಭೆ ಚುನಾವಣೆ 2023: ಬಿಜೆಪಿಗೆ 140ಕ್ಕಿಂತ ಅಧಿಕ ಸ್ಥಾನ, ಯಡಿಯೂರಪ್ಪ

ಹಣಬಲ, ತೋಳ್ಬಲ ಹಾಗೂ ಹೆಂಡದ ಬಲ ಪ್ರಯೋಗಿಸಿ ಅಧಿಕಾರಕ್ಕೆ ಬರುವ ಕನಸು ಕಾಣುವುದನ್ನು ಕಾಂಗ್ರೆಸ್‌ ಬಿಡಬೇಕು, ರಾಜ್ಯದಲ್ಲಿ ಒಬ್ಬ ನಾಯಕ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕನಸು ಕಾಣುತ್ತಿದ್ದಾನೆ. ಈ ಕನಸು ಕೈಗೊಡಲ್ಲ. ಅದು ಕೇವಲ ತಿರುಕನ ಕನಸು ಎಂದು ಅವರು ವ್ಯಂಗ್ಯವಾಡಿದ ಬಿಎಸ್‌ವೈ 

More Than 140 Seats for BJP in Karnataka Assembly Elections 2023 Says BS Yediyurappa grg

ವಿಜಯಪುರ(ಜ.22): ಬರುವ ವಿಧಾನಸಭೆ ಚುನಾವಣೆಯಲ್ಲಿ 140ಕ್ಕೂ ಅಧಿಕ ಸ್ಥಾನ ಪಡೆಯುವ ಮೂಲಕ ಸ್ವಂತ ಬಲದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯ ಸಿಂದಗಿಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಅವರು ಮಾತನಾಡಿದರು. ಹಣಬಲ, ತೋಳ್ಬಲ ಹಾಗೂ ಹೆಂಡದ ಬಲ ಪ್ರಯೋಗಿಸಿ ಅಧಿಕಾರಕ್ಕೆ ಬರುವ ಕನಸು ಕಾಣುವುದನ್ನು ಕಾಂಗ್ರೆಸ್‌ ಬಿಡಬೇಕು, ರಾಜ್ಯದಲ್ಲಿ ಒಬ್ಬ ನಾಯಕ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕನಸು ಕಾಣುತ್ತಿದ್ದಾನೆ. ಈ ಕನಸು ಕೈಗೊಡಲ್ಲ. ಅದು ಕೇವಲ ತಿರುಕನ ಕನಸು ಎಂದು ಅವರು ವ್ಯಂಗ್ಯವಾಡಿದರು.

ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಅವರಿಗೆ ಸರಿಸಮಾನವಾದ ಯಾವ ನಾಯಕರೂ ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲ. ಕಾಂಗ್ರೆಸ್ಸಿನಲ್ಲಿ ಅಲ್ಲೊಬ್ಬ, ಇಲ್ಲೊಬ್ಬ ನಾಯಕರಿದ್ದಾರೆ. ಸಮರ್ಥ ನಾಯಕತ್ವದ ಕೊರತೆ ಇದೆ ಎಂದ ಅವರು, ಅಧಿಕಾರವಿದ್ದಾಗ ನಾಟಕ ಮಾಡಿ, ತಮ್ಮ ತಮ್ಮಲ್ಲೇ ಕಚ್ಚಾಡಿಕೊಂಡು ಕಾಂಗ್ರೆಸ್‌ ಜನತೆಗೆ ದೊಡ್ಡ ದ್ರೋಹ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಸ್ತಿತ್ವದಲ್ಲಿಯೇ ಇರುವುದಿಲ್ಲ. ನಾಯಕರೇ ಇಲ್ಲದ ಕಾಂಗ್ರೆಸ್‌ ಪಕ್ಷವನ್ನು ಜನತೆ ಮರೆಯುತ್ತಿದ್ದಾರೆ ಎಂದರು.

ಬಿಜೆಪಿಯಿಂದ ಯುವಕರ ದಾರಿ ತಪ್ಪಿಸುವ ಕೆಲಸ: ಎಚ್‌.ಡಿ. ಕುಮಾರಸ್ವಾಮಿ

ಅಲ್ಪಸಂಖ್ಯಾತರು ಸೇರಿದಂತೆ ಸಕಲರಿಗೂ ಸೌಲಭ್ಯಗಳು ಸಿಗಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಕೊಟ್ಟಿದ್ದಾರೆ. ಸಬ್‌ಕಾ ಸಾಥ್‌ ಸಬ್‌ಕಾ ವಿಕಾಸ ಬಿಜೆಪಿ ಮಂತ್ರವಾಗಿದೆ ಎಂದ ಅವರು, ಜಿಲ್ಲೆಯಲ್ಲಿ ಪಂಚ ನದಿಗಳು ಹರಿಯುತ್ತಿದ್ದರೂ ಬರಪೀಡಿತ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಕಟ್ಟಿಕೊಂಡಿದ್ದ ವಿಜಯಪುರ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುವ ಕಾರ್ಯ ಮಾಡಲಾಗಿದೆ ಎಂದರು.

ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಮಾತನಾಡಿ, ಬಿಜೆಪಿ ಜನರಿಗೆ ಹಕ್ಕು ಹಾಗೂ ಸಬಲೀಕರಣದ ಬಲ ತುಂಬುವ ಮೂಲಕ ಪ್ರತಿಯೊಬ್ಬರಲ್ಲಿ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಬಿಜೆಪಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು, ಈ ಕಾರ್ಯ ಕಾರ್ಯಕರ್ತರಿಂದ ಕಾರ್ಯರೂಪಕ್ಕೆ ಬರಲು ಸಾಧ್ಯ. 1 ಕೋಟಿಗೂ ಅಧಿಕ ಸದಸ್ಯರನ್ನು ನೋಂದಾಯಿಸುವ ಗುರಿಯನ್ನು ಕಾರ್ಯಕರ್ತರು ಸ್ವೀಕರಿಸಬೇಕು ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಸ್ಥಾನದಲ್ಲಿ ಬಿಜೆಪಿ ಜಯ ಸಾಧಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಕಲ್ಪ ಮಾಡಿ ನಾಡನ್ನು ಇನ್ನಷ್ಟುಸಮೃದ್ಧವಾಗಿಸುವ ಆಶಯಕ್ಕೆ ಕೈ ಜೋಡಿಸಬೇಕು ಎಂದರು.
ಶಾಸಕ ರಮೇಶ ಭೂಸನೂರ ಮಾತನಾಡಿ, ಉಪ ಚುನಾವಣೆಯಲ್ಲಿ ನನಗೆ ಅಭೂತಪೂರ್ವ ಆಶೀರ್ವಾದ ನೀಡಿದ್ದೀರಿ. ಉಪ ಚುನಾವಣೆಯಲ್ಲಿ ನೀಡಿದ ಗಂಗಾಮತ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ಸೇರಿದಂತೆ ಹಲವಾರು ಭರವಸೆಗಳನ್ನು ಈಡೇರಿಸಲಾಗಿದೆ ಎಂದರು.

Latest Videos
Follow Us:
Download App:
  • android
  • ios