Asianet Suvarna News Asianet Suvarna News

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನ: ಸಂಸದ ರಾಘವೇಂದ್ರ ಭವಿಷ್ಯ

2024ರ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ ನುಡಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 2024ರ ಲೋಕಸಭಾ ಚುನಾವಣೆ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದರು. 

More than 400 seats for BJP in Lok Sabha elections Says MP BY Raghavendra gvd
Author
First Published Jan 31, 2024, 10:13 AM IST

ಶಿವಮೊಗ್ಗ (ಜ.31): 2024ರ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ ನುಡಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 2024ರ ಲೋಕಸಭಾ ಚುನಾವಣೆ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದರು. ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ನಾವು ಈ ಬಾರಿ ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿಯೂ ಕೂಡ ಒಳ್ಳೆಯ ವಾತಾವರಣವಿದೆ. ಅಭಿವೃದ್ಧಿಯ ಹಿನ್ನಲೆಯಿದೆ. ನಾವು ಮಾಡಿದ ಅಭಿವೃದ್ಧಿ ಕೆಲಸಗಳೇ ನಮ್ಮನ್ನು ಬಾರಿ ಅತ್ಯಧಿಕ ದಾಖಲೆ ರೀತಿಯ ಗೆಲ್ಲಿಸುತ್ತದೆ. ಬಿಜೆಪಿ ಸೀಟುಗಳನ್ನು ಪಡೆದು ಕೇಂದ್ರದಲ್ಲಿ ಕಾರ್ಯಕರ್ತರನ್ನು ಒಳಗೊಂಡತೆ ನಾಯಕರುಗಳೆಲ್ಲ ಸೇರಿಕೊಂಡು ಈ ಬಿಜೆಪಿ ಸರ್ಕಾರ ರಚನೆಯಾಗುತ್ತದೆ ಎಂದರು.

ಲೋಕಸಭಾ ಕ್ಷೇತ್ರದ ಸಂಚಾಲಕ ಹಾಗೂ ಮಾಜಿ ಶಾಸಕ ರಘುಪತಿ ಮಾತನಾಡಿ, ಶ್ರೀರಾಮಮಂದಿರ ಪ್ರತಿಷ್ಠಾಪನೆ ಆದ ಮೇಲೆ ಜನರು ಚುನಾವಣೆಗಾಗಿಯೇ ಕಾಯುತ್ತಿದ್ದಾರೆ. ಬಿಜೆಪಿಯನ್ನು ಯಾವಾಗ ಗೆಲ್ಲಿಸುತ್ತೇವೆ ಎಂಬ ಉತ್ಸಾಹದಲ್ಲಿ ಇದ್ದಾರೆ. ಬಿಜೆಪಿ ಗೆಲ್ಲುವಿಗೆ ಸಂಕಲ್ಪ ತೊಟ್ಟಿದ್ದಾರೆ. ಇಡೀ ಜಿಲ್ಲೆಯಲ್ಲೂ ಕೂಡ ಅಭಿವೃದ್ಧಿ ಕೆಲಸ ಆಗಿದೆ ಎಂದು ಹೇಳಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಕಾರ್ಯಾಲಯ ಆರಂಭಗೊಂಡಿದೆ. ಜಿಲ್ಲೆಯಲ್ಲಿ ಬಿಜೆಪಿಯ ಪರವಾದ ಅಲೆ ಎದ್ದಿದೆ ಎಂದರು. ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಪ ಸದಸ್ಯರಾದ ಡಿ.ಎಸ್.ಅರುಣ್, ಎಸ್. ರುದ್ರೇಗೌಡ, ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷ ಆರ್.ಕೆ.ಸಿದ್ರಾಮಣ್ಣ, ಜಿಲ್ಲಾ ಪ್ರಭಾರ ಗಿರೀಶ್ ಪಟೇಲ್, ಪ್ರಮುಖರಾದ ಎಸ್.ದತ್ತಾತ್ರಿ, ಶಿವರಾಜ್, ಮಾಲತೇಶ್ ಮತ್ತಿತರರು ಇದ್ದರು.

ಬಿಜೆಪಿ ವಿರುದ್ಧ ಕುತಂತ್ರ ಬಗ್ಗೆ ಎಚ್ಚರವಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಮುಖ ಇಟ್ಟುಕೊಂಡು ಶೋಷಿತ ವರ್ಗಗಳ ಸಮಾವೇಶ ಮಾಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಶ್ನಿಸಿದರು. ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅನೇಕ ಪಕ್ಷಗಳು ಬಿಜೆಪಿ ವಿರುದ್ಧ ಕೆಲಸ ಮಾಡುತ್ತಿವೆ. ಹಾಗಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ಹಿಂದುಳಿದ ಹಾಗೂ ಶೋಷಿತ ವರ್ಗಕ್ಕೆ ಕಾಂಗ್ರೆಸ್ ಏನೂ ಮಾಡಲಿಲ್ಲ. ಆದಾಗ್ಯೂ ಚಿತ್ರದುರ್ಗದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರ ಮಾತನಾಡಿದ್ದಾರೆ. 

ಹೆಸರಿನಲ್ಲಿ ರಾಮ ಇದ್ದರೆ ಸಾಲದು, ಆತನ ಸಂಸ್ಕೃತಿ, ಗುಣವೂ ಮುಖ್ಯ: ಎಚ್.ಡಿ.ಕುಮಾರಸ್ವಾಮಿ

ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರ ಅಂತಿಮ ಸಂಸ್ಕಾರಕ್ಕೆ ಕಾಂಗ್ರೆಸ್ ದಿಲ್ಲಿಯಲ್ಲಿ ಅವಕಾಶ ನೀಡಲಿಲ್ಲ. ಅಂಬೇಡ್ಕರ್ ಗೆ ಸೇರಿದ ಪಂಚತೀರ್ಥವನ್ನು ಅಭಿವೃದ್ಧಿಪಡಿಸಲು ಮೋದಿ ಬರಬೇಕಾಯಿತು. ಹಾಗಾಗಿ ಕಾರ್ಯ ಕರ್ತರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ ಹುಸಿ ಗ್ಯಾರಂಟಿಯ ಸತ್ಯಾಂಶ ತಿಳಿದುಕೊಳ್ಳಬೇಕು ಎಂದರು. ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕ ಎಸ್.ಎನ್. ಚನ್ನಬಸಪ್ಪ, ಪ್ರಮುಖರಾದ ರಘುಪತಿ ಭಟ್, ಡಿ.ಎಸ್. ಅರುಣ್, ಗಿರೀಶ್ ಪಟೇಲ್, ಆರ್.ಕೆ.ಸಿದ್ದರಾಮಣ್ಣ ಇದ್ದರು.

Follow Us:
Download App:
  • android
  • ios