ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಆಗಿಲ್ಲ: ಸಂಸದ ಬೊಮ್ಮಾಯಿ

ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ. ಕಾಂಗ್ರೆಸ್ಸಿಗರು ಮೊದಲು ಬಜೆಟನ್ನು ಪೂರ್ಣವಾಗಿ ಓದಲಿ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

mp basavaraj bommai slams on karnataka congress govt at haveri gvd

ಹಾವೇರಿ (ಜು.28): ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ. ಕಾಂಗ್ರೆಸ್ಸಿಗರು ಮೊದಲು ಬಜೆಟನ್ನು ಪೂರ್ಣವಾಗಿ ಓದಲಿ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಕ್ಕೆ ಕೇಂದ್ರದಿಂದ ಅನುದಾನವೇ ಬಂದಿಲ್ಲವೆಂದು ಕಾಂಗ್ರೆಸ್ ನಾಯಕರು ಜನರ ದಾರಿ ತಪ್ಪಿಸುತ್ತಿದ್ದಾರೆ. ಕೇಂದ್ರದ ಬಜೆಟ್‌ನಲ್ಲಿ ಯಾವ ಇಲಾಖೆಗೆ ಎಷ್ಟು ಹಣ ಬಂದಿದೆ. ಅದೇ ಖಾತೆಗೆ ಈ ಹಿಂದೆ ಯುಪಿಎ ಸರ್ಕಾರ ಎಷ್ಟು ಹಣ ಹಾಕಿದೆ ಎಂಬುದನ್ನೂ ಕಾಂಗ್ರೆಸ್ಸಿನವರು ನೋಡಲಿ ಎಂದು ಕಿಡಿಕಾರಿದರು.

ಕೇಂದ್ರದಿಂದ ಇದುವರೆಗೆ ಕರ್ನಾಟಕಕ್ಕೆ ₹44,870 ಕೋಟಿ ಕೋಡಲಾಗಿದೆ. ಕಳೆದ 3 ವರ್ಷಗಳಿಂದ ರಾಜ್ಯದ ರೈಲ್ವೆ ಯೋಜನೆಗೆ ಪ್ರತಿ ವರ್ಷ ₹7000 ಕೋಟಿ ಬರುತ್ತಿದೆ. ಯುಪಿಎ ಅವಧಿಯಲ್ಲಿ ಕೇವಲ ₹700 ಕೋಟಿ ಬರುತ್ತಿತ್ತು ಎಂದರು. ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಹಾಗೂ ಭೂಸ್ವಾಧೀನ ಮಾಡಿ ಕೊಡುತ್ತಿಲ್ಲ. ಹಾಗಾಗಿ ಕಾಮಗಾರಿ ವಿಳಂಬವಾಗುತ್ತಿವೆ. ಈ ಬಗ್ಗೆ ಸೋಮವಾರ ಎಲ್ಲ ಮಾಹಿತಿ ಬಿಡುಗಡೆ ಮಾಡುವೆ ಎಂದರು. ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರ್ಕಾರ ಪ್ರಯತ್ನ ಮಾಡಿದರೆ ಕೇಂದ್ರದಿಂದ ಹಣ ಬರುತ್ತದೆ. ಆದರೆ, ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ಆಪಾದನೆ ಮಾಡಿಕೊಂಡು ಕೂತಿದ್ದಾರೆ ಎಂದರು.

ಮಾಜಿ ಸಿಎಂಗಳಾದ ಬಿಎಸ್‌ವೈ, ಬೊಮ್ಮಾಯಿ ಇದ್ದಾಗ ₹300 ಕೋಟಿ ಅಕ್ರಮ: ಡಿ.ಕೆ.ಶಿವಕುಮಾರ್‌

ಭದ್ರಾ ಮೇಲ್ದಂಡೆಗೆ ರು.5300 ಕೋಟಿ ತಕ್ಷಣ ಬಿಡುಗಡೆ ಮಾಡಿ: ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ ತಕ್ಷಣವೇ ಬಜೆಟ್ ಘೋಷಿತ 5300 ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಲ್ಲಿ ಮನವಿ ಮಾಡಿದ್ದಾರೆ. ಸಂಸತ್ ಅಧಿವೇಶನದ ನಡುವೆಯೇ ದೆಹಲಿಯಲ್ಲಿ ಜಲಶಕ್ತಿಸಚಿವರ ಭೇಟಿಯಾದ ಸಂಸದ್ವಯರು, ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯ ವೇಗವರ್ಧಿತ ನೀರಾವರಿ ಪ್ರಯೋಜನಾ ಯೋಜನೆಯಡಿ 5300 ಕೋಟಿ ಅನುದಾನ ಬಿಡುಗಡೆ ಮಾಡಿ, ಕರ್ನಾಟಕದ ರೈತರ ನೆರವಿಗೆ ಧಾವಿಸಬೇಕು ಎಂದು ವಿನಂತಿಸಿದ್ದಾರೆ.

ಮಧ್ಯ ಕರ್ನಾಟಕದ ಬರಪೀಡಿತ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರುಣಿಸುವ ಮಹತ್ವದ ನೀರಾವರಿ ಯೋಜನೆಯಾಗಿದ್ದು, ಮೊದಲ ಹಂತದಲ್ಲಿ ತುಂಗಾ ನದಿಯಿಂದ 17.40 ಟಿಎಂಸಿ ನೀರನ್ನು ಭದ್ರಾ ಜಲಾಶಯಕ್ಕೆ ಲಿಫ್ಟ್ ಮಾಡಿ, ಎರಡನೇ ಹಂತದಲ್ಲಿ ಭದ್ರಾ ಜಲಾಶಯದಿಂದ 29.90 ಟಿಎಂಸಿ ನೀರನ್ನು ನಾಲ್ಕು ಬರಪೀಡಿತ ಜಿಲ್ಲೆಗಳ 2,55,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಕಲ್ಪಿಸುವುದಾಗಿದೆ. ಮುಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ನೀರಾವರಿ ಕಲ್ಪಿಸುವುದು ಹಾಗೂ 367 ಕೆರೆಗಳ ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದಾಗಿದೆ.

ಸಿಎಂ, ಡಿಸಿಎಂ ಮಧ್ಯೆ ಏನು ಚರ್ಚೆ ಆಗುತ್ತೆ ಅನ್ನೋದನ್ನ ಸಲೀಂ ಅಹ್ಮದ್ ತಿಳಿದುಕೊಳ್ಳಲಿ: ಸಂಸದ ಬೊಮ್ಮಾಯಿ

ಈ ಯೋಜನೆಗೆ 2020ರ ಡಿಸೆಂಬರ್ 16ರಂದು 21,473 ಕೋಟಿ ರು. ಪರಿಷ್ಕೃತ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದ್ದು, ಜಲ ಸಂಪನ್ಮೂಲ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ 2020ರ ಡಿಸೆಂಬರ್ 24 ರಂದು 16,125 ಕೋಟಿ ರು. ಗಳಿಗೆ ಸ್ಥಿರೀಕರಿಸಿದೆ. ಬಂಡವಾಳ ಒಪ್ಪಿಗೆ ಸಮಿತಿ 2021 ರ ಮಾರ್ಚ್ 25ರಂದು ಒಪ್ಪಿಗೆ ನೀಡಿದೆಯಲ್ಲದೇ ಉನ್ನತ ಮಟ್ಟದ ಪರಿಶೀಲನಾ ಸಮಿತಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಶಿಫಾರಸ್ಸು ಮಾಡಿದೆ.

Latest Videos
Follow Us:
Download App:
  • android
  • ios