ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಜೆಡಿಎಸ್‌ ಜೊತೆ ಮೈತ್ರಿ ತಪ್ಪಲ್ಲ: ಸಂಸದ ರಾಘವೇಂದ್ರ

ರಾಷ್ಟ್ರವನ್ನು ಸುಸ್ಥಿತಿಯತ್ತ ಸಾಗಿಸುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಜೆಡಿಎಸ್‌ನೊಂದಿಗೆ ಕೈಜೋಡಿಸುವುದರಲ್ಲಿ ಯಾವ ಪ್ರಮಾದವೂ ಇಲ್ಲ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸವ್ಯಕ್ತಪಡಿಸಿದರು.

MP BY Raghavendra Reaction BJP JDS Alliance At Shivamogga gvd

ಸೊರಬ (ಅ.03): ರಾಷ್ಟ್ರವನ್ನು ಸುಸ್ಥಿತಿಯತ್ತ ಸಾಗಿಸುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಜೆಡಿಎಸ್‌ನೊಂದಿಗೆ ಕೈಜೋಡಿಸುವುದರಲ್ಲಿ ಯಾವ ಪ್ರಮಾದವೂ ಇಲ್ಲ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ಗಳಲ್ಲಿ ಮಂಡ್ಯ, ಹಾಸನ, ಬೆಂಗಳೂರು ನಗರದಲ್ಲಿ ಬಿಜೆಪಿಗೆ ಕೊಂಚ ಹಿನ್ನೆಡೆಯಾಗಿತ್ತು. ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವು ದರಿಂದ ಪಕ್ಷ ಸಂಘಟನೆಯಾಗುವುದರ ಜೊತೆಗೆ ಹೆಚ್ಚಿನ ಬಲ ಬರುತ್ತದೆ. ಇದರಿಂದ ಪಕ್ಷದೊಳಗೆ ಯಾವುದೇ ಗೊಂದಲಗಳು ಸೃಷ್ಟಿಯಾಗುವುದಿಲ್ಲ ಎಂದು ಹೇಳಿದರು.

ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡಲ್ಲ: ಮಾಜಿ ಸಚಿವ ಆನಂದ್‌ ಸಿಂಗ್‌

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಜಾರಿಗೊಳಿಸಿಲ್ಲ. ಕೇವಲ ಗ್ಯಾರಂಟಿ ಯೋಜನೆಗಳೇ ತಮ್ಮ ಸಾಧನೆ ಎಂದು ಬೀಗುತ್ತಿದೆ. ೩೦೦೦ ಜನರಿಗೆ ಅನ್ವಯವಾಗುವಂತೆ ಲಿಕ್ಕರ್ ಅಂಗಡಿ ತೆರೆಯುವ ಮೂಲಕ ರಾಜ್ಯವನ್ನು ಕುಡುಕರ ರಾಜ್ಯವಾಗಿಸಿ, ಬಡತನವನ್ನು ಶಾಶ್ವತವಾಗಿ ಉಳಿಸುವ ಯೋಜನೆ ರೂಪಿಸಿದೆ ಎಂದು ಕಿಡಿಕಾರಿದ ಅವರು, ಇತರೆ ರಾಜ್ಯಗಳಲ್ಲಿ ಮದ್ಯದ ಬೆಲೆ ಕಡಿಮೆ ಇದ್ದು, ರಾಜ್ಯದಲ್ಲಿ ಅಬಕಾರಿ ಮೇಲೆ ಶೇ. ೮೩ ರಷ್ಟು ತೆರಿಗೆ ಹೆಚ್ಚಳ ಮಾಡಿದ್ದು, ಇಂಥ ಹಣದಿಂದ ಗ್ಯಾರಂಟಿ ಯೋಜನೆ ನಡೆಯುತ್ತಿದೆ ಎಂದರು.

ದಿನ ಬಳಕೆ ವಸ್ತುಗಳು ಸೇರಿದಂತೆ ಎಲ್ಲ ತೆರಿಗೆಗಳನ್ನೂ ಹೆಚ್ಚಿಸಿದ ರಾಜ್ಯ ಸರ್ಕಾರ ಗಾಂಧಿ ಜಯಂತಿಯ ಉಡುಗರೆಯಾಗಿ ಆಸ್ತಿ ನೋಂದಣಿ ಶುಲ್ಕ ಹೆಚ್ಚಿಸಿ ಜನತೆಗೆ ಹೆಚ್ಚಿನ ಹೊರೆ ಬೀಳುವಂತೆ ಮಾಡಿದ್ದು, ದಿನ ಬೆಳಗಾದರೆ ಗ್ಯಾರಂಟಿ ಬಗ್ಗೆ ಮಂತ್ರಿಗಳು ಮಾತನಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ನೀಡಿದಂತೆ ಪುರುಷರಿಗೂ ನೀಡಬೇಕು ಮತ್ತು ಇದನ್ನು ಖಾಸಗಿ ಬಸ್‌ಗಳಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕಾವೇರಿ ನದಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ಈಗಾಗಲೇ ತಪ್ಪು ಹೆಜ್ಜೆಗಳನಿಟ್ಟಿದೆ. ಕೇಂದ್ರದ ಬೃಹತ್ ನೀರಾವರಿ ಸಚಿವರ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಕೇಂದ್ರದ ನಿಲವುಗಳನ್ನು ಅಭಿನಂದಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಪರವಾಗಿಯೇ ಇದೆ. ಆದರೆ ಸಭೆಯಲ್ಲಿ ಕೇಂದ್ರದ ನಿಲುವನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಹೊರಗೆ ಬಂದು ಕೇಂದ್ರ ಸರ್ಕಾರವನ್ನು ತೆಗಳುತ್ತಾರೆ. ರಾಜ್ಯದಲ್ಲಿ ಈಗಾಗಲೇ ವಿದ್ಯುತ್ ಕೊರತೆ ಉಂಟಾಗಿದ್ದು, ಪಕ್ಕದ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ಬೆಳೆ ಉಳಿಸಿಕೊಳ್ಳಲು ರೈತರಿಗೆ ನೆರವಾಗುವಂತೆ ಒತ್ತಾಯಿಸಿದರು.

ಶರಾವತಿ ಸಂತ್ರಸ್ತರು, ಬಗರ್‌ಹುಕುಂ ಸಾಗುವಳಿದಾರರ ಹಿತ ಕಾಯುವುದೇ ತಮ್ಮ ಗುರಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಆದರೆ ಪ್ರಕೃತಿಯ ವಿರುದ್ಧವಾಗಿ ಹೊಸದಾಗಿ ಬಗರ್‌ಹುಕ್ಕುಂ ಮಾಡಲು ನಮ್ಮ ಸಹಮತವಿಲ್ಲ ಎಂದ ಅವರು, ಕೇಂದ್ರ ಸರ್ಕಾರ ಅರಣ್ಯ ಕಾಯ್ದೆಗೆ ತಿದ್ದುಪಡಿ ತಂದಿದೆ. ಅದರ ಅನ್ವಯ ಬಗರ್‌ಹುಕ್ಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರ ಹಕ್ಕು ಪತ್ರ ನೀಡಬಹುದು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ತಾಲೂಕು ಅಧ್ಯಕ್ಷ ಪ್ರಕಾಶ ತಲಕಾಲಕೊಪ್ಪ, ಉಪಾಧ್ಯಕ್ಷ ದೇವೇಂದ್ರಪ್ಪ ಚನ್ನಾಪುರ, ಕಾರ್ಯದರ್ಶಿ ಶಿವಕುಮಾರ ಕಡಸೂರು, ಪುರಸಭೆ ಸದಸ್ಯರಾದ ಈರೇಶ್ ಮೇಸ್ತ್ರಿ, ಮಧುರಾಯ್ ಜಿ. ಶೇಟ್, ಎಂ.ಡಿ. ಉಮೇಶ, ಯು. ನಟರಾಜ, ಪ್ರಮುಖರಾದ ಈಶ್ವರಪ್ಪ ಚನ್ನಪಟ್ಟಣ, ನಾಗಪ್ಪ ವಕೀಲ, ಎಂ.ಆರ್. ಪಾಟೀಲ್

ಶಿವಮೊಗ್ಗದಲ್ಲಿ ಗಲಭೆಗೆ ಆಗುವ ಮುನ್ನವೇ ನಾವು ಮುಂಜಾಗ್ರತೆ ಕ್ರಮ ತೆಗೆದುಕೊಂಡಿದ್ದೆವು: ಸಚಿವ ಪರಮೇಶ್ವರ್

ಮಾಜಿ ಶಾಸಕ ಕುಮಾರ ಬಂಗಾರಪ್ಪ ಬಿಜೆಪಿಯಲ್ಲಿ ಇದ್ದಾರೆ. ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ತಾಲೂಕನ್ನು ಅಭಿವೃದ್ಧಿ ಮಾಡಿಯೂ ಪರಾಜಿತರಾದ ಬಗ್ಗೆ ಬೇಸರವಿರಬಹುದು. ಆದರೆ ಮುಂದಿನ ದಿನಗಳಲ್ಲಿ ಸಕ್ರಿಯರಾಗುತ್ತಾರೆ. ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಾರೆ ಎನ್ನುವುದು ಸುಳ್ಳಿನ ವದಂತಿ. ಕಾಂಗ್ರೆಸ್ ಮತ್ತು ಅವರ ನಡುವೆ ಯಾವುದೇ ರೀತಿಯ ಬೆಳವಣಿಗೆ ನಡೆದಿಲ್ಲ. 
-ಸಂಸದ ಬಿ.ವೈ. ರಾಘವೇಂದ್ರ

Latest Videos
Follow Us:
Download App:
  • android
  • ios