ಸಂಸದ ಡಿ.ಕೆ.ಸುರೇಶ್ ದೇಶದ್ರೋಹಿ: ಅಪ್ಪಚ್ಚು ರಂಜನ್ ಆಕ್ರೋಶ
ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎನ್ನುವ ಸಂಸದ ಡಿ.ಕೆ. ಸುರೇಶ್ ಅವರು ದೇಶ ದ್ರೋಹಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದೇಶ ದ್ರೋಹಿ ಎಂದು ದೇಶದಿಂದ ಹೊರಗಟ್ಟಿ ಎಂದು ಮಾಜಿ ಸಚಿವ ಮಡಿಕೇರಿಯ ಮಾಜಿ ಶಾಸಕ ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ (ಫೆ.03): ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎನ್ನುವ ಸಂಸದ ಡಿ.ಕೆ. ಸುರೇಶ್ ಅವರು ದೇಶ ದ್ರೋಹಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದೇಶ ದ್ರೋಹಿ ಎಂದು ದೇಶದಿಂದ ಹೊರಗಟ್ಟಿ ಎಂದು ಮಾಜಿ ಸಚಿವ ಮಡಿಕೇರಿಯ ಮಾಜಿ ಶಾಸಕ ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕಾವೇರಿ ಹಾಲ್ ನಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಯಾರೂ ಇದುವರೆಗೆ ಪ್ರತ್ಯೇಕ ದೇಶ ಕೊಡಿ ಎಂದು ಕೇಳಲಿಲ್ಲ. ಆದರೆ ಡಿ.ಕೆ. ಸುರೇಶ್ ಅವರು ಪ್ರಚಾರಕ್ಕಾಗಿ ಅವರ ಮಾತಿನ ಚಪಲಕ್ಕಾಗಿ ಈ ರೀತಿ ಹೇಳಿರಬಹುದು. ಅವರನ್ನು ದೇಶದಿಂದ ಅರಬ್ ದೇಶಗಳಿಗೆ ಕಳುಹಿಸಲಿ ಎಂದು ಅಪ್ಪಚ್ಚು ರಂಜನ್ ಒತ್ತಾಯಿಸಿದರು.
ಪೋಷಕರು ಮಕ್ಕಳನ್ನು ಸಮಾಜದ ಆಸ್ತಿಯಾಗಿ ರೂಪಿಸಿ: ಮಕ್ಕಳಿಗೆ ಅಸ್ತಿ ಮಾಡಿ ಇಡುವ ಬದಲು ಅವರಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿ ಅವರನ್ನೇ ಸಮಾಜದ ಆಸ್ತಿಯಾಗಿಸುವ ಕೆಲಸ ಮಾಡಬೇಕೆಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ವತಿಯಿಂದ ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ವತಿಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವ, ಗೌರವ ಸಮಾರ್ಪಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣ ಮಾಡಿದರು.
ಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ: ಸಿಎಂ ಸಿದ್ದರಾಮಯ್ಯ
ಸಂತ ನಾರಾಯಣಗುರುಗಳು ಬಿಲ್ಲವ ಸಮುದಾಯಕ್ಕೆ ಮಾತ್ರ ಗುರುಗಳಾಗದೆ ಸಮಾಜದ ಎಲ್ಲಾ ಸಮುದಾಯದವರನ್ನು ಉನ್ನತ್ತಿಯಾಡೆಗೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ನಾವೆಲ್ಲಾರೂ ಸಕ್ರಿಯರಾಗಬೇಕೆಂದು ಅವರು ಕರೆ ನೀಡಿದರು. ಮುಖ್ಯ ಭಾಷಣ ಮಾಡಿದ ಯುವಕೋವಿಡ್ ವಾರಿಯರ್ ರಾಷ್ಟ್ರ ಪುರಸ್ಕಾರ ಪುರಸ್ಕೃತ ರಾ.ಸೇ.ಯೋ. ಅತ್ಯುತ್ತಮ ಸ್ವಯಂಸೇವಕ ಅಭಿನ್ ಬಂಗೇರ, ಪ್ರತಿ ಮನೆ ಮನೆಯಲ್ಲೂ ನಮ್ಮ ಮಕ್ಕಳಿಗೆ ನಮ್ಮ ಪದ್ಧತಿ ಪರಂಪರೆ ಆಚಾರ ವಿಚಾರಗಳನ್ನು ಹೇಳಿಕೊಡಲು ನಾವೆಷ್ಟು ಬಲ್ಲವರಾಗಿದ್ದೇವೆ ಎಂಬುದರ ಆತ್ಮಾವಲೋಕನಾ ಮಾಡಿಕೊಳ್ಳಬೇಕು ಎಂದರು.
ಆಕರ್ಷಕ ಮೆರವಣಿಗೆ: ಸಮಾರಂಭಕ್ಕೂ ಮುನ್ನ ಕೋದಂಡ ರಾಮ ಮಂದಿರದಿಂದ ಭವ್ಯ ಅಲಂಕೃತ ಮಂಟಪದಲ್ಲಿ ಶ್ರೀ ನಾರಾಯಣ ಗುರುಗಳ ಮತ್ತು ಕೋಟಿ ಚೆನ್ನಯ್ಯ ಅವರ ಭಾವಚಿತ್ರವನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ಪೂರ್ಣಕುಂಭ ಕಲಶದೊಂದಿಗೆ ಮಹಿಳೆಯರು ವಿಶೇಷ ಆಕರ್ಷಕವಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ವಿಷ್ಣುಮೂರ್ತಿ ಕುಣಿತ ಭಜನಾ ಮಂಡಳಿಯ ತಿರ್ಲೆ ಕುಣಾಲು ಭಜನಾ ಕುಣಿತದೊಂದಿಗೆ ಭಾವಚಿತ್ರವನ್ನು ಇರಿಸಿ ಮಹಿಳೆಯರು ಹಳದಿ ಬಣ್ಣದ ಸೀರೆ, ಪುರುಷರು ಬಿಳಿ ಶರ್ಟ್ ಧರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ದೇವೇಗೌಡರ ಮೇಲಿನ ಗೌರವಕ್ಕೆ ಸುಮ್ಮನಿದ್ದೇನೆ: ಸಚಿವ ಚಲುವರಾಯಸ್ವಾಮಿ
ಪ್ರಸ್ತುತ ವರ್ಷ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತರಾದ 7 ಮಂದಿಯನ್ನು ಸನ್ಮಾನಿಸಲಾಯಿತು. ಎಸ್ ಎಸ್‌ಎಲ್‌ಸಿ ಪಿಯುಸಿ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಭಾ ಕಾರ್ಯಕ್ರಮದ ನಂತರ 3 ವಯೋಮಾನ ವಿಭಾಗದಲ್ಲಿ ಬಲೆ ನಲಿಪುಂಗ ಜಿಲ್ಲಾ ಮಟ್ಟದ ನೃತ್ಯ ಕಲಾ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.