ಬೆಂಗಳೂರು–ಮೈಸೂರು ದಶಪಥ ರಸ್ತೆ ಕ್ರೆಡಿಟ್: ಬಿಜೆಪಿ ನಾಯಕರಲ್ಲೇ ಕುಸ್ತಿ
* ಮೈಸೂರು ಬಿಜೆಪಿ ನಾಯಕರ ಮಾತಿನ ಸಮರ
* ಬೆಂಗಳೂರು–ಮೈಸೂರು ದಶಪಥ ರಸ್ತೆ ವಿಚಾರಕ್ಕೆ ಟಾಕ್ ವಾರ್
* ವಿಶ್ವನಾಥ್ ಹೇಳಿಕೆಗೆ ಪ್ರತಾಪ್ ಸಿಂಗ್ ತಿರುಗೇಟು
ಮೈಸೂರು, (ಆ.24): ಬೆಂಗಳೂರು–ಮೈಸೂರು ದಶಪಥ ರಸ್ತೆಯ ಕ್ರೆಡಿಟ್ ವಾರ್ ವಿಚಾರ ಇದೀಗ ಬಿಜೆಪಿ ನಾಯಕರಲ್ಲಿ ಮಾತಿನ ಸಮರ ಶುರುವಾಗಿದೆ.
ಹೌದು...ಬೆಂಗಳೂರು–ಮೈಸೂರು ದಶಪಥ ರಸ್ತೆಯ ಕ್ರೆಡಿಟ್ ಬಗ್ಗೆ ಮಾತನಾಡಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್‌ಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ.
ಇಂದು (ಆ.24) ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಹ, ಮೈಸೂರು–ಬೆಂಗಳೂರು ದಶಪಥ ರಸ್ತೆಯ ಕಾಮಗಾರಿ ವೀಡಿಯೋ ಮಾಡಿದ್ದು ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತದೆಯೆಂದು ಗೊತ್ತಿರಲಿಲ್ಲ. ಮೋದಿ ಸರಕಾರ ಈ ಯೋಜನೆಗೆ ಹಣ ಬಿಡುಗಡೆ ಕಾಮಗಾರಿ ಚಾಲನೆ ನೀಡಲಾಗಿತ್ತು. 8,666 ಕೋಟಿ ರೂ ಪ್ರಾಜೆಕ್ಟ್ ನಲ್ಲಿ 8 ಪೈಸೆನಾದರೂ ವಿಶ್ವನಾಥ್ ಅವರು ಬಿಡುಗಡೆ ಮಾಡಿಸಿದ್ದರಾ? ಎಂದು ಪ್ರಶ್ನಿಸಿದರು.
ವಿಶ್ವನಾಥ್ ಉಚ್ಛಾಟನೆಗೆ ಬಿಜೆಪಿ ಮುಖಂಡರಿಂದ ಒತ್ತಾಯ
ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರ? ನಿತಿನ್ ಗಡ್ಕರಿ ನಮ್ಮ ಕೇಂದ್ರ ಸರಕಾರದ ಮಂತ್ರಿ ಮೋದಿ ಅವರ ಆಡಳಿತದಲ್ಲಿ ಶುರುವಾಗುವ ಪ್ರಾಜೆಕ್ಟ್ ಗಳು ಮೋದಿ ಸರಕಾರಕ್ಕೆ ಸಲ್ಲಬೇಕು. ವಿಶ್ವನಾಥ್ ಅವರು ತಾವೇ ಈ ಯೋಜನೆ ತಂದಿದ್ದರೆ ತಮ್ಮ ಚುನಾವಣೆ ವೇಳೆ ಯಾಕೆ ಹೇಳಿಲ್ಲ? ಕಿಡಿಕಾರಿದರು.
ವಿಶ್ವನಾಥ್ ಅವರು ಟೀಕೆ ಮಾಡದ ವ್ಯಕ್ತಿಯೇ ಇಲ್ಲ. ಟ್ರಂಪ್, ಬೈಡೆನ್ ರನ್ನೂ ಅವರು ಬಿಟ್ಟಿಲ್ಲ. ದೇವೇಗೌಡರು, ಯಡಿಯೂರಪ್ಪ, ವಿಜಯೇಂದ್ರ, ಎಸ್.ಟಿ. ಸೋಮಶೇಖರ್ ಎಲ್ಲರನ್ನೂ ವಿಶ್ವನಾಥ್ ಬೈಯ್ದಿದ್ದು ಆಯ್ತು, ಬಸವರಾಜ್ ಬೊಮ್ಮಾಯಿ ಬಗ್ಗೆ ಮಾತಾಡೋಕೆ ಇನ್ನೂ ಆರಂಭಿಸಿಲ್ಲ. ಈ ಗ್ಯಾಪ್ ನಲ್ಲಿ ನನ್ನ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.