* ಶಾಸಕ ಜಿ.ಟಿ.ದೇವೇಗೌಡರ ಸವಾಲಿಗೆ ತಿರುಗೇಟು ಕೊಟ್ಟ ಪ್ರತಾಪ್ ಸಿಂಹ* ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿಸು ಎಂದು ಪ್ರತಾಪ್ ಸಿಂಹಗೆ ಸವಾಲು ಹಾಕಿದ್ದ ಜಿಟಿಡಿ* ಇದಕ್ಕೆ ಈಗ ಪ್ರತಾಪ್ ಸಿಂಹ ಟಾಂಗ್

ಮೈಸೂರು, (ಮೇ.28): ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿಚಾರವಾಗಿ ಶಾಸಕ ಜಿ.ಡಿ ದೇವೇಗೌಡ ಹಾಕಿದ್ದ ಸವಾಲಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. 

ರೋಹಿಣಿ ಸಿಂಧೂರಿ ವಿರುದ್ಧ ಪ್ರತಾಪ್‌ಸಿಂಹ ಇತ್ತೀಚೆಗೆ ವಾಗ್ದಾಳಿ ನಡೆಸಿದ್ದರು. ಇದರಿಂದ ಗರಂ ಆಗಿದ್ದ ಶಾಸಕ ಜಿ.ಟಿ ದೇವೇಗೌಡ ನಿನಗೆ ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿಸು ಎಂದು ಪ್ರತಾಪ್ ಸಿಂಹಗೆ ಸವಾಲು ಹಾಕಿದ್ದರು. 

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ಅಧಿಕಾರಿಗಳನ್ನ ಟ್ರಾನ್ಸಫರ್ ಮಾಡೋದೇ ತಾಕತ್ತಾದರೆ, ಅಂತಹ ತಾಕತ್ತು ನನಗೆ ಬೇಡ. ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೆನೆ ಎಂದು ಜಿ.ಟಿ.ದೇವೇಗೌಡ ಅವರಿಗೆ ಟಾಂಗ್ ಕೊಟ್ಟರು.

ತಾಕತ್ತಿದ್ರೆ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿಸು: ಪ್ರತಾಪ್ ಸಿಂಹಗೆ ಸವಾಲು

ಮೈಸೂರಿಗೆ ನಾನು ಹೊರಗಿನವನು. ಆದರೂ ಮೊದಲ ಚುನಾವಣೆಯಲ್ಲಿ ಮೈಸೂರು- ಕೊಡಗಿನ ಜನ ಮೂವತ್ತು ಸಾವಿರ ಅಂತರದ ಮತಗಳಿಂದ ಗೆಲ್ಲಿಸಿದ್ರು. ನನ್ನ ತಾಕತ್ತು ತೋರಿಸಿ ಒಳ್ಳೆಯ ಕೆಲಸ ಮಾಡಿದ್ದರಿಂದಾಗಿ, ಎರಡನೇ ಚುನಾವಣೆಯಲ್ಲಿ ಒಂದು ಲಕ್ಷದ ನಲವತ್ತು ಸಾವಿರ ಮತಗಳಿಂದ ಗೆಲ್ಲಿಸಿದ್ರು. ಇದಕ್ಕಿಂತಲೂ ನಾನು ಯಾವ ತಾಕತ್ತು ತೋರಿಸಬೇಕು ಎಂದು ಪ್ರಶ್ನಿಸಿದರು.

ಡಿಸಿಯನ್ನೋ, ಇನ್ಯಾರೋ ಅಧಿಕಾರಿಯನ್ನ ವರ್ಗಾವಣೆ ಮಾಡಿಸೋದು ರಾಜಕಾರಣಿಗಳಿಗೆ ಕಾಮನ್. ನನ್ನ ದೃಷ್ಟಿಯಲ್ಲಿ ಅದು ಅತ್ಯಂತ ಸಣ್ಣ ಕೆಲಸ. ಅಂತಹ ಸಣ್ಣ ಕೆಲಸವನ್ನ ನಾನು ಮಾಡೋದಿಲ್ಲ. ಸರ್ಕಾರ ಕೊಟ್ಟ ಅಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತೇನೆ ಎಂದರು.

ಚಾಮರಾಜನಗರ ಘಟನೆಯಿಂದ ಡಿಸಿಯನ್ನ ಕಟಕಟೆಗೆ ನಿಲ್ಲಿಸುತ್ತಿದ್ರು. ಆವಾಗೆಲ್ಲಾ ಇವರು ಎಲ್ಲಿ ಹೋಗಿದ್ರು..?. ಆಗ ಡಿಸಿ ಪರವಾಗಿ ಧ್ವನಿ ಎತ್ತಿದ್ದು ನಾನೇ. ಡಿಸಿ ಕಾರ್ಯ ವೈಖರಿಗೆ ಎಲ್ಲರೂ ಅಸಮಾಧಾನ ವ್ಯಕ್ತಪಡಿಸಿದ್ರು. ನಾನು ಈಗ ಹೇಳಿರೋದು, ಗ್ರಾಮೀಣಾ ಭಾಗದಲ್ಲಿ ಕೊರೋನಾ ಹೆಚ್ಚಾಗಿದೆ. ಜನ ಕಷ್ಟದಲ್ಲಿದ್ದಾರೆ. ಹಳ್ಳಿಗಳಿಗೆ ಹೋಗಿ ಅಂದೆ. ಹಳ್ಳಿಗಳಿಗೆ ಹೋಗಿ ಎಂದು ಹೇಳಿದ್ದೆ ತಪ್ಪಾ..? ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದರು.