ಸೋಮಣ್ಣ ಪ್ರಚಾರದ ವೇಳೆ ಕಲ್ಲು ತೂರಾಟ: ಸಿದ್ದರಾಮನ ಹುಂಡಿಯೇನು ಸಿದ್ದು ಸಂಸ್ಥಾನನಾ?: ಪ್ರತಾಪ್ ಸಿಂಹ ಕಿಡಿ
ಸಿದ್ದರಾಮಯ್ಯ ಪಾಳಯದಲ್ಲಿ ಹತಾಶೆ ಮತ್ತು ಸೋಲಿನ ಭಯ ಶುರುವಾಗಿದೆ. ಬಿಜೆಪಿ ಅವರು ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಿದ್ದರಾಮಯ್ಯ ಈ ರೀತಿ ಸಣ್ಣತನ ಯಾಕೆ ಮಾಡುತ್ತಿದ್ದಾರೆ ಗೊತ್ತಾಗುತ್ತಿಲ್ಲ: ಪ್ರತಾಪ್ ಸಿಂಹ
ಮೈಸೂರು(ಏ.28): ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದಯೇ ಗಲಾಟೆ ನಡೆದಿದೆ. ಹತಾಶೆ ಮನೋಭಾವ ದಿಂದ ಸೋಲಿನ ಭಯದಿಂದ ಈ ಕೆಲಸ ಮಾಡಿದ್ದಾರೆ. ನಾನು ಎಲ್ಲಿ ಹೋಗ್ತಿನೋ ಅಲ್ಲಿಗೆ ಕೆಲವರು ಬರುತ್ತಾರೆ. ಎಲ್ಲಾ ಕೋಮಿನ ಜನ ಪ್ರೀತಿ ಮಾಡುತ್ತಾರೆ. ಒಂದು ಕೋಮಿನ ಜನ ಮಾತ್ರ ದ್ವೇಷ ಮಾಡುತ್ತಾರೆ. ನಮ್ಮ ಕಾರ್ಯಕರ್ತನಿಗೆ ಆದ ನೋವು ಸಿದ್ದರಾಮಯ್ಯರ ಅಣ್ಣನ ಮಗನಿಗೆ ಆಗಿದ್ದರೆ ನನ್ನನ್ನು ಯಾವ ದೃಷ್ಟಿಯಲ್ಲಿ ಸಿದ್ದರಾಮಯ್ಯ ನೋಡ್ತಿದ್ದರು. ಸಿದ್ದರಾಮಯ್ಯ ಘನತೆಗೆ ಇದು ಒಳ್ಳೆಯದು ಅಲ್ಲ. ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ನಾನು ಯಾವತ್ತಿಗೂ ವಿಚಲಿತ ಆಗಲ್ಲ. ವರುಣ ಕ್ಷೇತ್ರದ ಸ್ಥಿತಿ ಬಗ್ಗೆ ಚುನಾವಣಾ ಆಯುಕ್ತರಿಗೆ ಪತ್ರ ಬರೆಯುತ್ತೇನೆ ಅಂತ ವರುಣ ಬಿಜೆಪಿ ವಿ. ಸೋಮಣ್ಣ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿ. ಸೋಮಣ್ಣ, ನಿನ್ನೆಯ ಘಟನೆ ವಿಚಾರದಲ್ಲಿ ಪೊಲೀಸರು ಕೂಡ ಕುತಂತ್ರ ಮಾಡಿದರು ಅಂತ ಆರೋಪಿಸಿದ್ದಾರೆ.
ನನ್ನ ವೋಟು ನನ್ನ ಮಾತು: ಮತ್ತೆ ಜಿಟಿಡಿಗೆ ಒಲಿಯುತ್ತಾಳ ಚಾಮುಂಡೇಶ್ವರಿ?
ಸಿದ್ದರಾಮಯ್ಯ ಪಾಳಯದಲ್ಲಿ ಹತಾಶೆ ಮತ್ತು ಸೋಲಿನ ಭಯ ಶುರು
ಸಿದ್ದರಾಮಯ್ಯ ಪಾಳಯದಲ್ಲಿ ಹತಾಶೆ ಮತ್ತು ಸೋಲಿನ ಭಯ ಶುರುವಾಗಿದೆ. ಬಿಜೆಪಿ ಅವರು ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಿದ್ದರಾಮಯ್ಯ ಈ ರೀತಿ ಸಣ್ಣತನ ಯಾಕೆ ಮಾಡುತ್ತಿದ್ದಾರೆ ಗೊತ್ತಾಗುತ್ತಿಲ್ಲ ಅಂತ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್ ಸಿಂಹ, ನಿನ್ನೆ ನಮ್ಮ ಪ್ರಚಾರ ಮೆರವಣಿಗೆ ಮೇಲೆ ಕಲ್ಲಲ್ಲಿ ಹೊಡೆದಿದ್ದಾರೆ. ಬಕೆಟ್ ಗಳಲ್ಲಿ ಕಲ್ಲು ಇಟ್ಟು ಕೊಂಡಿದ್ದರು. ಗಲಾಟೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಸೋಲಿನ ಭಯದಿಂದ ಈ ರೀತಿ ಸಿದ್ದರಾಮಯ್ಯ ಟೀಂ ಮಾಡುತ್ತಿದೆ. ಸಿದ್ದರಾಮನ ಹುಂಡಿಯೇನೂ ಸಿದ್ದರಾಮಯ್ಯನ ಸಂಸ್ಥಾನನಾ?, ಸಿದ್ದರಾಮಯ್ಯ ಏನೂ ಪಾಳೇಗಾರಿಕೆ ಮಾಡುತ್ತಿದ್ದಾರಾ?, ಸಿದ್ದರಾಮಯ್ಯ ಅವರು ತಮ್ಮ ಸ್ವಜಾತಿಗೆ ಚಿತಾವಣೆ ಕೊಟ್ಟು ಈ ರೀತಿ ತೊಂದರೆ ಕೊಡಿಸುತ್ತಿದ್ದಾರೆ. ಸಿದ್ದರಾಮಯ್ಯ ಒಬ್ಬ ಜಾತಿವಾದಿ. ಸಿದ್ದರಾಮಯ್ಯ ಅವರಿಗೆ ಸ್ವಜಾತಿ ಮಾತ್ರ ಮುಖ್ಯ ಅನ್ನೋದು ವರುಣ ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ಜಾತಿವಾದಿ ಕಾರಣ ಎಲ್ಲಾ ವರ್ಗದ ಜನ ಸೋಮಣ್ಣ ಪರವಾಗಿ ನಿಂತಿದ್ದಾರೆ. ಸೋಮಣ್ಣ ಒಂದು ಕರೆ ಕೊಟ್ಟರೆ ನಿಮಗೂ ಎಲ್ಲಾ ಊರುಗಳಲ್ಲೂ ಇದೇ ಆಗಬಹುದು. ಆಗ ಪರಿಸ್ಥಿತಿ ಏನಾಗುತ್ತದೆ ಊಹಿಸಿ. ಇದನ್ನು ನೀವು ಮುಂದುವರಿಸಿದರೆ ನಮಗೂ ಶಕ್ತಿ ಇದೆ. ಅದನ್ನು ನಾವು ಸಾಬೀತು ಮಾಡಬೇಕಾಗುತ್ತೆ. ಆಗ ವರುಣ ಶಾಂತಿ ಕೆಡುತ್ತದೆ ಅಂತ ತಿಳಿಸಿದ್ದಾರೆ.
ಸಿದ್ದು ಹುಟ್ಟೂರಲ್ಲಿ ವಿ. ಸೋಮಣ್ಣ ಪ್ರಚಾರದ ವೇಳೆ ಕಲ್ಲು ತೂರಾಟ
ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಪ್ರಚಾರದ ವೇಳೆ ಗಲಾಟೆ ನಡೆದ ಪ್ರಕರಣ ಗುರುವಾರ ನಡೆದಿದೆ. ಕಾಂಗ್ರೆಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕಲ್ಲು ತೂರಾಟ ಆಗಿದ್ದು, ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಸಿದ್ದರಾಮನಹುಂಡಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋದರನ ಮನೆ ಎದುರು ರಾತ್ರಿ 8 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತ ನಾಗೇಶ್ ಎಂಬವರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವರುಣ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ವಿ.ಸೋಮಣ್ಣ ಅವರು ಕಾರ್ಯಕರ್ತರೊಂದಿಗೆ ಚುನಾವಣಾ ರಥದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಸಿದ್ದರಾಮಯ್ಯ ಅವರ ಸೋದರನ ಮನೆ ಎದುರು ಸಾಗುತ್ತಿದ್ದಾಗ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿಯವರು ಆರೋಪಿಸಿದ್ದಾರೆ.
ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್: ಸೋಮಣ್ಣ ಪರ ಸ್ಟಾರ್ ಪ್ರಚಾರಕರ ಕ್ಯಾಂಪೇನ್
ಸೋಮಣ್ಣ ಅವರಿದ್ದ ವಾಹನ ಸಿದ್ದರಾಮಯ್ಯರ ಅಣ್ಣನ ಮನೆ ಸಮೀಪ ಬರುತ್ತಿದ್ದಂತೆ ಕಾಂಗ್ರೆಸ್ ಬೆಂಬಲಿತ ಯುವಕರ ಗುಂಪೊಂದು ಸಿದ್ದರಾಮಯ್ಯ ಪರ ಘೋಷಣೆ ಕೂಗಿತ್ತು. ಈ ಸಂದರ್ಭದಲ್ಲಿ ಮತ್ತೊಂದು ಗುಂಪು ಸೋಮಣ್ಣ ಪರ ಜೈಕಾರ ಹಾಕಿದೆ. ಆಗ, ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಕೆಲವರು ನಾಗೇಶ್ ಮೇಲೆ ಹಲ್ಲೆ ಮಾಡಿದರು. ಪೊಲೀಸರು ಎರಡೂ ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ತಿಳಿಯಾಗಿಸಿದರು.
ನಂತರ ಪೊಲೀಸ್ ಬಂದೋಬಸ್ತ್‌ನಲ್ಲಿ ಬಿಜೆಪಿ ಪ್ರಚಾರ ವಾಹನ ಸಾಗಿದೆ. ಗಲಾಟೆ ಬಳಿಕವೂ ಸೋಮಣ್ಣ ಅವರು ಪ್ರಚಾರ ಕಾರ್ಯ ಮುಂದುವರಿಸಿದ್ದಾರೆ. ಈ ಸಂಬಂಧ ಬಿಜೆಪಿ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದರೆ ಪೊಲೀಸರು ಮಾತ್ರ ಸಿದ್ದರಾಮಯ್ಯನಹುಂಡಿಯಲ್ಲಿ ನಾಗೇಶ್ ಎನ್ನುವವರಿಗೆ ರವಿ ಎಂಬವರ ವಾಹನ ಡಿಕ್ಕಿಯಾಗಿದೆ ಎಂಬ ಮಾಹಿತಿ ಬಂದಿದೆ. ಬೇರಾವುದೇ ಗಲಾಟೆಯಾಗಿಲ್ಲ. ಸ್ಥಳದಲ್ಲಿ ನಮ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು ಎಂದು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಸ್ಪಷ್ಟಪಡಿಸಿದ್ದಾರೆ.