ಜೆಡಿಎಸ್-ಬಿಜೆಪಿ ಮೈತ್ರಿ ಬೆನ್ನಲ್ಲೇ ದೊಡ್ಡಗೌಡರ ಮುಂದೆ ಮಂಡಿಯೂರಿ ನಮಸ್ಕರಿಸಿದ ಸಂಸದ ಪ್ರತಾಪ್ ಸಿಂಹ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ಬೆನ್ನಲ್ಲಿಯೇ ಸಂಸದ ಪ್ರತಾಪ್ ಸಿಂಹ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಮುಂದೆ ಮಂಡಿಯೂರಿ ನಮಸ್ಕರಿಸಿದ್ದಾರೆ.

ಮೈಸೂರು (ಸೆ.12): ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ವಿರುದ್ಧ, ಲೋಕಸಭಾ ಚುನಾವಣೆಯಲ್ಲಿ ಸೇಡು ತೀರಿಸಿಕೊಳ್ಳುವ ನಿಟ್ಟಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿವೆ. ಮೈತ್ರಿ ಮಾತುಕತೆ ಖಚಿತ ಆಗುತ್ತಿದ್ದಂತೆಯೇ ಜೆಡಿಎಸ್ ವಿರುದ್ಧ ಕೆಂಡ ಕಾರುತ್ತಿದ್ದ ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಹೆಚ್.ಡಇ. ದೇವೇಗೌಡರ ಮುಂದೆ ಮಂಡಿಯೂರಿ ನಮಸ್ಕರಿಸಿದ್ದಾರೆ.
ಜೆಡಿಎಸ್ ವರಿಷ್ಟ ಎಚ್.ಡಿ ದೇವೇಗೌಡರನ್ನು ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಚರ್ಚೆ ಮಾಡಿದ್ದಾರೆ. ಈಗ ಇಬ್ಬರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಮೈತ್ರಿಯ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಂಸದ ಪ್ರತಾಪ ಸಿಂಹ, ಜೆಡಿಎಸ್ ವರಿಷ್ಟರ ಭೇಟಿ ಮಾಡಿ ಆಶೀರ್ವಾದ ಪಡೆದು ಮಾತುಕತೆ ಮಾಡಿದ್ದಾರೆ. ಈ ವೇಳೆ ಪ್ರತಾಪ ಸಿಂಹ ಮಾಜಿ ಪ್ರಧಾನಿ ದೇವೇಗೌಡರಿಗೆ ಮಂಡಿಯೂರಿ ನಮಸ್ಕರಿಸಿದ್ದಾರೆ. ಈ ಘಟನೆಯು ಆದಿ ಚುಂಚನಗಿರಿ ನೂತನ ಶಾಖಾ ಮಠದ ಉದ್ಘಾಟನೆ ಕಾರ್ಯಕ್ರಮದಲ್ಲಿ ನಡೆದ ಘಟನೆಯಾಗಿದೆ ಎಂದು ತಿಳಿದುಬಂದಿದೆ.
ನನ್ನಂತೆ ಬಾಲ್ಯದಲ್ಲಿಯೇ ಕುರಿ ಕಾಯಬೇಡವೆಂದು, ಬಾಲಕನನ್ನು ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ
ಒಂದು ಫೋಟೋ ನೂರು ರಾಜಕೀಯ ಲೆಕ್ಕಾಚಾರ: ಆದಿ ಚುಂಚನಗಿರಿ ಶಾಖಾ ಮಠದ ಉದ್ಘಾಟನೆಗೆ ತೆರಳಿದ್ದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಜಿ.ಟಿ ದೇವೇಗೌಡರನ್ನ ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ ಮಾತುಕತೆ ಮಾಡಿದ್ದಾರೆ. ಮೈತ್ರಿ ಅನುಸಾರ ಜೆಡಿಎಸ್ ಪಕ್ಷದಿಂದ ಮೈಸೂರಿನಲ್ಲಿ ಬಿಜೆಪಿಗೆ ಬೆಂಬಲ ನೀಡಲಿದೆ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡರೆ ಸುಲಭವಾಗಿ ಗೆಲುವು ಸಾಧಿಸಬಹುದು ಎನ್ನುವುದು ಪ್ರತಾಪ್ ಸಿಂಹ ಲೆಕ್ಕಾಚಾರವೂ ಆಗಿರಬಹುದು. ದೇವೇಗೌಡರ ಕಾಲಿಗೆ ಬಿದ್ದು ನಮಸ್ಕರಿಸಿದ ಒಂದು ಫೋಟೊ ಹಲವು ರಾಜಕೀಯ ಲೆಕ್ಕಾಚಾರಗಳ ಬಗ್ಗೆ ಮಾಹಿತಿ ಬಿಚ್ಚಿಡುತ್ತಿದೆ.
ದೊಡ್ಡಗೌಡರ ಆಶೀರ್ವಾದ ಗಿಟ್ಟಿಸಿಕೊಂಡರೇ ಪ್ರತಾಪ್ ಸಿಂಹ: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಅತಿ ಹೆಚ್ಚು ಪ್ರಭಾಲ್ಯ ಹೊಂದಿದ್ದಾರೆ. ಈಗಿಲಿಂದಲೇ ಜೆಡಿಎಸ್ ಮತಬ್ಯಾಂಕ್‌ಗೆ ಸಂಸದ ಪ್ರತಾಪ ಸಿಂಹ ಕೈ ಹಾಕಿದ್ದಾರೆ. ಮೈಸೂರು ಭಾಗದ ಜೆಡಿಎಸ್ ನಾಯಕರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವ ಪ್ರತಾಪ ಸಿಂಹ, ಎರಡು ಭಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹ್ಯಾಟ್ರಿಕ್ ಗೆಲುವಿಗೆ ಚುನಾವಣಾ ರಣತಂತ್ರ ಹೆಣೆಯುತ್ತಿರುವ ಸಂಸದನಿಗೆ ಈಗ ದೊಡ್ಡ ಗೌಡರ ಆಶೀರ್ವಾದ ಸಿಕ್ಕಿದೆಯೇ ಎಂಬುದು ಕುತೂಹಲಕಾರಿಯಾಗಿದೆ.