ಮೈಸೂರಲ್ಲಿ ಮುಖ್ಯಮಂತ್ರಿ ಪುತ್ರನ ಗೆಲ್ಲಿಸಲು ಷಡ್ಯಂತ್ರ: ಪ್ರತಾಪ್ ಸಿಂಹ ಆರೋಪ
ಕೊಡಗು-ಮೈಸೂರು ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿ ತನ್ನ ಪುತ್ರ ಯತೀಂದ್ರ ಅವರನ್ನು ಗೆಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಆದರೆ ಈ ಷಡ್ಯಂತ್ರ ಫಲಿಸುವುದಿಲ್ಲ. ಕಾವೇರಿ ಮಾತೆ ಆಶೀರ್ವಾದ ಮತ್ತು ಕೊಡಗು -ಮೈಸೂರು ಮತದಾರರ ನಂಬಿಕೆ ತನ್ನ ಮೇಲಿದೆ.
ನಾಪೋಕ್ಲು (ಜ.01): ಕೊಡಗು-ಮೈಸೂರು ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿ ತನ್ನ ಪುತ್ರ ಯತೀಂದ್ರ ಅವರನ್ನು ಗೆಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಆದರೆ ಈ ಷಡ್ಯಂತ್ರ ಫಲಿಸುವುದಿಲ್ಲ. ಕಾವೇರಿ ಮಾತೆ ಆಶೀರ್ವಾದ ಮತ್ತು ಕೊಡಗು -ಮೈಸೂರು ಮತದಾರರ ನಂಬಿಕೆ ತನ್ನ ಮೇಲಿದೆ. ಹೀಗಾಗಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲಿದ್ದೇನೆ. ಸತ್ಯವನ್ನು ಅರಗಿಸಿಕೊಳ್ಳಲಾರದ ಕಾಂಗ್ರೆಸ್ ನನ್ನವಿರುದ್ಧ ಷಡ್ಯಂತ್ರ ಹೂಡಿ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾಪೋಕ್ಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಮೇಲೆ ದ್ವೇಷ ರಾಜಕೀಯ ಮಾಡುತ್ತಿದೆ.
ರಾಜ್ಯದ ಜನತೆ ಎಲ್ಲವನ್ನು ಕೂಡ ಗಮನಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿ ಚುನಾವಣೆಯಲ್ಲಿ ನನ್ನನ್ನು ಹಣಿಯಲು ಸಿದ್ದರಾಮಯ್ಯ ಷಡ್ಯಂತ್ರ ಮಾಡಿದ್ದಾರೆ. ಮರ ಕಳ್ಳತನ ಪ್ರಕರಣದಲ್ಲಿ ಅಮಾನತು ಆದ ಅರಣ್ಯ ಅಧಿಕಾರಿಗಳನ್ನು ತನಿಖೆಗೆ ಬಿಟ್ಟು ತಮ್ಮ ವಿಕ್ರಂಸಿಂಹನನ್ನು ವಿಚಾರಣೆ ಮಾಡುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ಸಹೋದರನ ಹೆಸರು ಇಲ್ಲದಿದ್ದರೂ ಆತನನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ದೂರಿದರು. ಸಚಿವ ಮಧು ಬಂಗಾರಪ್ಪ ವಿರುದ್ಧ 6.50 ಕೋಟಿ ರು. ಚೆಕ್ ಅಮಾನ್ಯ ಪ್ರಕರಣದಲ್ಲಿ ಶಿಕ್ಷೆ ಆಗಿದೆ. ಸಚಿವ ಮಧು ತಪ್ಪಿತಸ್ಥ ಅಂಥ ಕೋರ್ಟ್ ಹೇಳಿದೆ. ಈ ಪ್ರಕರಣದ ಗಮನ ಬೇರೆಡೆ ಸೆಳೆಯಲು ನನ್ನ ತಮ್ಮನ ಪ್ರಕರಣಕ್ಕೆ ಸರ್ಕಾರ ಗಮನ ನೀಡಿದೆ ಎಂದು ಸಂಸದ ಹೇಳಿದರು.
ವಿ.ಸೋಮಣ್ಣ ಜೊತೆ ಮಾತನಾಡಿದ್ದೇನೆ, ಅವರು ಬಿಜೆಪಿ ಪಕ್ಷ ಬಿಡೊಲ್ಲ: ಆರ್.ಅಶೋಕ್
ತಾಯಿ, ತಂಗಿಯನ್ನೂ ಬಂಧಿಸಿಬಿಡಿ: ‘ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿ, ತಮ್ಮ ಮಗನನ್ನು ಎಂಪಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಹೀಗಾಗಿ, ಮರ ಕಳ್ಳತನ ಪ್ರಕರಣದಲ್ಲಿ ಎಫ್ಐಆರ್‌ನಲ್ಲಿ ಹೆಸರಿಲ್ಲದಿದ್ದರೂ ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದಾರೆ. ಮನೆಯಲ್ಲಿ ವಯೋವೃದ್ದ ತಾಯಿ ಇದ್ದಾಳೆ. ನನ್ನ ತಂಗಿ ಇದ್ದಾಳೆ. ಅವರನ್ನೂ ಅರೆಸ್ಟ್ ಮಾಡಿಬಿಡಿ’ ಎಂದು ಸಂಸದ ಪ್ರತಾಪ್ ಸಿಂಹ ಅವರು ಭಾವುಕರಾಗಿ ನುಡಿದಿದ್ದಾರೆ.
ಮೈಸೂರು ಹಾಗೂ ಕೊಡಗಿನ ನಾಪೋಕ್ಲಿನಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಮರಗಳ ಹನನ ಪ್ರಕರಣದಲ್ಲಿ ತಮ್ಮ ಸೋದರ ವಿಕ್ರಂ ಸಿಂಹ ಅವರನ್ನು ಬಂಧಿಸಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ ಒಬ್ಬ ಬ್ರಿಲಿಯಂಟ್ ಫಾದರ್. ತಮ್ಮ ಪುತ್ರ ಯತೀಂದ್ರ ಅವರನ್ನು ಮೈಸೂರು-ಕೊಡಗು ಕ್ಷೇತ್ರದಲ್ಲಿ ಗೆಲ್ಲಿಸಲು ಪ್ಲ್ಯಾನ್ ಮಾಡಿದ್ದಾರೆ. ಇದಕ್ಕೆ ಪ್ರತಾಪ್ ಸಿಂಹ ಅಡ್ಡಿ ಆಗಿದ್ದಾನೆ ಅಂತ ಮುಗಿಸಲು ಮುಂದಾಗಿದ್ದಾರೆ. ನಿಜಕ್ಕೂ ಸಿದ್ದರಾಮಯ್ಯ ಅವರಂತಹ ತಂದೆ ಎಲ್ಲರಿಗೂ ಸಿಗಲ್ಲ. ಈ ವಿಷಯದಲ್ಲಿ ಅವರನ್ನು ಮೆಚ್ಚಲೇಬೇಕು. ಆದರೆ, ಈ ಷಡ್ಯಂತ್ರ ಫಲಿಸುವುದಿಲ್ಲ. ಚಾಮುಂಡಿ, ಕಾವೇರಿ ಮಾತೆಯ ಆಶೀರ್ವಾದ, ಕೊಡಗು-ಮೈಸೂರು ಮತದಾರರ ನಂಬಿಕೆ ನನ್ನ ಮೇಲಿದೆ. ಹೀಗಾಗಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲಿದ್ದೇನೆ ಎಂದರು.
ಸರ್ಕಾರ ತಪ್ಪು ಮಾಡಿದರೆ ನೇರವಾಗಿ ಹೇಳಿ: ಸಿಎಂ ಸಿದ್ದರಾಮಯ್ಯ
‘ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿ ಚುನಾವಣೆಯಲ್ಲಿ ನನ್ನನ್ನು ಹಣಿಯಲು ಸಿದ್ದರಾಮಯ್ಯ ಷಡ್ಯಂತ್ರ ಮಾಡಿದ್ದಾರೆ. ಮರ ಕಳ್ಳತನ ಪ್ರಕರಣದಲ್ಲಿ ಅಮಾನತು ಆದ ಅರಣ್ಯ ಅಧಿಕಾರಿಗಳನ್ನು ತನಿಖೆಗೆ ಬಿಟ್ಟು ವಿಕ್ರಂಸಿಂಹನನ್ನು ವಿಚಾರಣೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ, ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ನನ್ನ ತೇಜೋವಧೆ ಮಾಡಿದ್ದಾಯಿತು. ಈಗ ನನ್ನ ಕುಟುಂಬವನ್ನು ಮುಗಿಸಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದ್ಯಾವುದಕ್ಕೂ ನಾನು ಜಗ್ಗುವ ಮಗನಲ್ಲ. ನನ್ನ ಮುಗಿಸಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ. ಆದರೆ, ಕೊನೆಗೆ ನನ್ನ ಜೀವ ತೆಗೆಯಬಹುದು ಅಷ್ಟೆ’ ಎಂದು ದೂರಿದರು.