ಶ್ರೀರಾಮನ ಪೇಟೆಂಟ್ ಅನ್ನು ಬಿಜೆಪಿಗೆ ಕೊಟ್ಟಿದ್ದೆ ಕಾಂಗ್ರೆಸ್: ಸಂಸದ ಪ್ರತಾಪ್ ಸಿಂಹ
ಶ್ರೀರಾಮನ ಪೇಟೆಂಟ್ ಅನ್ನು ಬಿಜೆಪಿಗೆ ಕೊಟ್ಟಿದ್ದೆ ಕಾಂಗ್ರೆಸ್ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನನ್ನು ಕಾಂಗ್ರೆಸಿಗರೇ ಭಕ್ತಿ ಭಾವದಿಂದ ಪೂಜಿಸಿದ್ದರೆ ಬಿಜೆಪಿಗೆ ಯಾಕೆ ಈ ಪೇಟೆಂಟ್ ಸಿಗುತ್ತಿತ್ತು?
ಮೈಸೂರು (ಜ.11): ಶ್ರೀರಾಮನ ಪೇಟೆಂಟ್ ಅನ್ನು ಬಿಜೆಪಿಗೆ ಕೊಟ್ಟಿದ್ದೆ ಕಾಂಗ್ರೆಸ್ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನನ್ನು ಕಾಂಗ್ರೆಸಿಗರೇ ಭಕ್ತಿ ಭಾವದಿಂದ ಪೂಜಿಸಿದ್ದರೆ ಬಿಜೆಪಿಗೆ ಯಾಕೆ ಈ ಪೇಟೆಂಟ್ ಸಿಗುತ್ತಿತ್ತು? ರಾಮನ ಅಸ್ತಿತ್ವವನ್ನೇ ನ್ಯಾಯಾಲಯದಲ್ಲಿ ಪ್ರಶ್ನಿಸದ ಕಾಂಗ್ರೆಸ್ ಗೆ ರಾಮ ಏನೂ ಬಿಜೆಪಿ ಪೇಟೆಂಟಾ ಎಂದು ಕೇಳುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಕಾಂಗ್ರೆಸ್ ಗೆ ರಾಮ ರಾಜ್ಯದ ಮೇಲೆ ನಂಬಿಕೆ ಇದ್ಯಾ? ರಾವಣ ರಾಜ್ಯದ ಮೇಲೆ ನಂಬಿಕೆ ಇದ್ಯಾ ಅವರನ್ನೇ ಕೇಳಿ?ಕಾಂಗ್ರೆಸ್ ಗೆ ಗಾಂಧೀಜಿಯ ರಾಮ ರಾಜ್ಯದ ಮೇಲೆ ನಂಬಿಕೆ ಇಲ್ಲ ಎಂದು ಅವರು ಆರೋಪಿಸಿದರು.
ಅಯೋಧ್ಯೆ ಮಂತ್ರಾಕ್ಷತೆಗೆ ಅನ್ನ ಭಾಗ್ಯ ಅಕ್ಕಿ ಬಳಸಿದ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಂತ್ರಾಕ್ಷತೆ ಸ್ವೀಕರಿಸಲು ಆಗದ ಕೈಗಳಿಗೆ ಮಂತ್ರಾಕ್ಷತೆಗೆ ಅಕ್ಕಿ ಕೊಡಲು ಮನಸ್ಸು ಬರುತ್ತಾ? ಅಕ್ಷತೆ, ಗೋತ್ರದ ಮೇಲೆ ಕಾಂಗ್ರೆಸ್ ಗೆ, ಸಿದ್ದರಾಮಯ್ಯಗೆ ನಂಬಿಕೆ ಇಲ್ಲ. ಅಯೋಧ್ಯೆಗೆ ಹೋಗುವುದು ಬಿಡುವುದು ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದು ಅವರು ತಿಳಿಸಿದರು.
ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ: ನಾನು ನ್ಯಾಷನಲ್ ಲೀಡರ್ ಅಲ್ಲ. ಆದರೆ, ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು. ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದು ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ ಎಂದು ಹೇಳಿದರು.
ಪ್ರತಿ ಕೆಲಸಕ್ಕೂ ಸಲ್ಲದ ನಿಯಮದಿಂದ ಹೈರಾಣಾದ ಮಡಿಕೇರಿ ನಗರದ ಜನತೆ: ತಪ್ಪಿದ ಕೋಟ್ಯಂತರ ಆದಾಯ!
ಅಪ್ಪ ಸಿಎಂ ಆಗಿದ್ದರೆ ತನ್ನ ಖಾಸಗಿ ಲ್ಯಾಬ್ ಗೆ ಗುತ್ತಿಗೆ ಪಡೆದುಕೊಳ್ಳುವಂತವರು ನ್ಯಾಷನಲ್ ಲೀಡರ್. ಅಪ್ಪನ ನೆಲೆ ಬಿಡಿಸಿ, ಬಾದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್. ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಅಂತಾ ಸಿಎಂ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್. ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಅವರು ಕುಟುಕಿದರು.