ನನ್ನ ಕ್ಷೇತ್ರದ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಹೋಗಿ ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಪ್ರಹ್ಲಾದ್‌ ಜೋಶಿ ಅವರನ್ನು ಭೇಟಿ ಮಾಡಿದ್ದೆ| ಮುಖ್ಯಮಂತ್ರಿಗಳು ಸಹ 2-3 ಬಾರಿ ಕರೆ ಮಾಡಿ ಮಾತನಾಡಿದ್ದಾರೆ| ಸಚಿವ ಸ್ಥಾನ ಹಂಚಿಕೆ ಕೇವಲ ಎರಡು ಜಿಲ್ಲೆಗೆ ಮಾತ್ರ ಕೇಂದ್ರೀಕೃತವಾಗಿದೆ:ರೇಣುಕಾಚಾರ್ಯ| 

ಬೆಂಗಳೂರು(ಜ.23): ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ನನಗೆ ಯಾವ ಅಸಮಾಧಾನವೂ ಇಲ್ಲ. ಸಚಿವ ಸ್ಥಾನ ಹಂಚಿಕೆ ಕೇವಲ ಎರಡು ಜಿಲ್ಲೆಗೆ ಮಾತ್ರ ಕೇಂದ್ರೀಕೃತವಾಗಿದೆ. ಇದು ಸರಿಯಲ್ಲ ಎಂದು ಹೇಳಿದ್ದೇನೆ ಅಷ್ಟೇ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಮಜಾಯಿಷಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಹೋಗಿ ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಪ್ರಹ್ಲಾದ್‌ ಜೋಶಿ ಅವರನ್ನು ಭೇಟಿ ಮಾಡಿದ್ದೆ. ಮುಖ್ಯಮಂತ್ರಿಗಳು ಸಹ 2-3 ಬಾರಿ ಕರೆ ಮಾಡಿ ಮಾತನಾಡಿದ್ದಾರೆ ಎಂದರು. 

ಅಸಮಧಾನಗೊಂಡಿರುವ ರೇಣುಕಾಚಾರ್ಯಗೆ ಬಂಪರ್ ಗಿಫ್ಟ್..!

ಸಿ.ಪಿ.ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಿರುವುದರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪದೇ ಪದೇ ಒಬ್ಬ ವ್ಯಕ್ತಿಯ ಬಗ್ಗೆ ಯಾಕೆ ಕೇಳುತ್ತೀರಿ? ನನ್ನ ಬಾಯಿಂದ ಹೇಳಿಸಬೇಡಿ. ಆ ವ್ಯಕ್ತಿಯ ಬಗ್ಗೆ ನಾನು ಮಾತನಾಡಲ್ಲ. ನನಗೆ ಯಾರ ಮೇಲೂ ದ್ವೇಷ ಇಲ್ಲ ಎಂದು ತಿಳಿಸಿದ್ದಾರೆ.