ಕಾಂಗ್ರೆಸ್ಸಿಗರಿಗೆ ಸಾವರ್ಕರ್ ಕುರಿತ ಪುಸ್ತಕ ಕಳಿಸುವೆ: ಶಾಸಕ ರೇಣುಕಾಚಾರ್ಯ
ವೀರ ಸಾವರ್ಕರ್ ಅವರು ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಟೀಕೆ ಮಾಡುತ್ತಿರುವ ಕಾಂಗ್ರೆಸ್ ಮುಖಂಡರಿಗೆ ಸಾವರ್ಕರ್ ಹೋರಾಟದ ಕುರಿತು ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಬರೆದ ಪುಸ್ತಕವನ್ನು ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರು (ಆ.20): ವೀರ ಸಾವರ್ಕರ್ ಅವರು ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಟೀಕೆ ಮಾಡುತ್ತಿರುವ ಕಾಂಗ್ರೆಸ್ ಮುಖಂಡರಿಗೆ ಸಾವರ್ಕರ್ ಹೋರಾಟದ ಕುರಿತು ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಬರೆದ ಪುಸ್ತಕವನ್ನು ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಅವರ ಬಗ್ಗೆ ಟೀಕೆ ಮಾಡುತ್ತಿರುವವರಿಗೆ ಪುಸ್ತಕಗಳನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿ ವಿತರಿಸುವ ಅಭಿಯಾನ ಆರಂಭಿಸುತ್ತಿದ್ದೇನೆ. ಎಲ್ಲೆಲ್ಲಿ ಪುಸ್ತಕ ಸಿಗುತ್ತದೆಯೋ ಎಲ್ಲವನ್ನು ಖರೀದಿಸಿ ಕಾಂಗ್ರೆಸ್ಸಿನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಟೀಕೆ ಮಾಡುತ್ತಿರುವ ಎಲ್ಲರ ಮನೆಗೆ ಕಳಿಸಲಾಗುವುದು ಎಂದು ತಿಳಿಸಿದರು.
ವಾಜಪೇಯಿ ದೇಶದ ಅಪ್ರತಿಮ ರಾಜಕಾರಣಿ: ರಾಜಕೀಯ ಕ್ಷೇತ್ರದಲ್ಲಿ ಅಜಾತ ಶತ್ರು ಎನಿಸಿದ್ದ ಅಟಲ್ ಬಿಹಾರಿ ವಾಜಪೇಯಿ ದೇಶ ಕಂಡ ಅಪ್ಪಟ ದೇಶ ಪ್ರೇಮಿ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು. ಶಾಸಕ ರೇಣುಕಾಚಾರ್ಯ ಅವರ ನಿವಾಸದಲ್ಲಿ ಹಮ್ಮಿಕೊಂಡಿದ್ದ ಅಟಲ್ ಬಿಹಾರಿ ವಾಜಪೇಯಿಯವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಬಿಜೆಪಿ ಸದೃಢವಾಗಿ ಬೆಳೆಯಲು ವಾಜಪೇಯಿ ಅವರ ಪಾತ್ರ ಬಹು ದೊಡ್ಡದು. ಅವರ ಅಧಿಕಾರವಧಿಯಲ್ಲಿ ಆದ ಚತುಷ್ಪಥ ರಸ್ತೆಗಳು ಇಂದು ರಾರಾಜಿಸುತ್ತಿವೆ. ವಾಜಪೇಯಿ ಅವರು ವಿದೇಶಾಂಗ ಸಚಿವರಾಗಿದ್ದಾಗ ಎಲ್ಲಾ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸಿದ್ದರು. ಇಂದಿನ ಪ್ರಧಾನಿ ನರೇಂದ್ರ ಮೋದಿಯವರು ಅವರದೇ ಮಾದರಿಯ ವಿದೇಶಾಂಗ ನೀತಿ ಮುಂದುವರಿಸಿ ವಿಶ್ವದ ಎಲ್ಲಾ ನಾಯಕರ ಸ್ನೇಹ ಸಂಪಾದಿಸಿದ್ದಾರೆ ಎಂದು ಹೇಳಿದರು.
ಅಲ್ಪಸಂಖ್ಯಾತ ಗೂಂಡಗಳನ್ನು ಎನ್‌ಕೌಂಟರ್ ಮಾಡಬೇಕು: ಶಾಸಕ ರೇಣುಕಾಚಾರ್ಯ
ವಾಜಪೇಯಿಯವರು ಗ್ರಾಮ ಸಡಕ್ ಯೋಜನೆ ಸೇರಿದಂತೆ ದೀನ ದಲಿತರ ಪರವಾದ ಯೋಜನೆಗಳನ್ನು ರೂಪಿಸಿದ್ದರು. ಅವರ ಯೋಜನೆಗಳನ್ನು ದೇಶದುದ್ದಕ್ಕೂ ತಲುಪಿಸಲು ವಿಫಲವಾಗಿದ್ದು ಪಕ್ಷದ ಸೋಲಿಗೆ ಕಾರಣವಾಯಿತು. ಅಟಲ್‌ಜಿ ಒಬ್ಬ ಕವಿ, ಸಾಹಿತಿ, ಮೇರು ಸಂಸತ್‌ಪಟುವಾಗಿದ್ದರು. ವಾಜಪೇಯಿ ಸಂಸತ್ತಿನಲ್ಲಿ ಮಾತನಾಡಲು ಪ್ರಾರಂಭಿಸಿದರೆ ವಿಪಕ್ಷದವರು ತಲೆದೂಗುತ್ತಿದ್ದರು ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಟಿ.ಎಚ್.ರಂಗನಾಥ್, ಕೆಎಸ್‌ಡಿಎಲ್ ನಿರ್ದೇಶಕ ಶಿವು ಹುಡೇದ್, ಬಂಜಾರ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ ಸುರೇಶ್, ಜಿಪಂ ಮಾಜಿ ಉಪಾಧ್ಯಕ್ಷ ಸುರೇಂದ್ರನಾಯ್ಕ ಇತರರಿದ್ದರು.
ಮುಸ್ಲಿಮರು ಸಿಎಂ ಆಗಲು ಬಿಡಲ್ಲ: ಶಾಸಕ ರೇಣುಕಾಚಾರ್ಯ
ಜನರ ಕಷ್ಟಕ್ಕೆ ಸ್ಪಂದಿಸಬೇಕಾದ್ದು ನನ್ನ ಕರ್ತವ್ಯ: ಜನರು ಕಷ್ಟದಲ್ಲಿರುವಾಗ ಅವರ ಸಂಕಷ್ಟಕ್ಕೆ ಸ್ಪಂದಿಸಬೇಕಾದ್ದು ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ನಾನು ಅವಳಿ ತಾಲೂಕಿನಾದ್ಯಂತ ಸಂಚರಿಸಿ ಮಳೆಹಾನಿ ವೀಕ್ಷಿಸಿ, ಜನರ ಕಷ್ಟಆಲಿಸುವ ಕೆಲಸ ಮಾಡುತ್ತಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ತಾಲೂಕಿನ ಮಳೆಹಾನಿ ಪೀಡಿತ ವಿವಿಧ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಅವಳಿ ತಾಲೂಕಿನ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿ ಮಳೆಯಾಗಿದ್ದು, ರೈತರು ಹಾಗೂ ಸಾರ್ವಜನಿಕರ ಪಾಲಿಗೆ ಮಳೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅತಿಯಾದ ಮಳೆಯಿಂದಾಗಿ ಕಷ್ಟಪಟ್ಟು ಬೆಳೆದ ಬೆಳೆಗಳು, ಮನೆಗಳು ಧರಶಾಯಿಯಾಗುವಂತೆ ಮಾಡಿದ್ದು ಅವಳಿ ತಾಲೂಕಿನ ಜನರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ ಎಂದರು.