ಎಲ್ಲೆಲ್ಲೋ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣ ನಮಗೇಕೆ?. ಮಂಡ್ಯ ಜಿಲ್ಲೆಯಲ್ಲೆ ಬೇಕಾದಷ್ಟುಇಂತಹ ಹಗರಣಗಳು ನಡೆದಿವೆ. ಇವುಗಳ ಬಗ್ಗೆ ನಡೆಯುತ್ತಿರುವ ತನಿಖೆಗಳು ಹಳ್ಳ ಹಿಡಿಯುತ್ತಿವೆ. 

ಮದ್ದೂರು (ಮಾ.04): ಎಲ್ಲೆಲ್ಲೋ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣ ನಮಗೇಕೆ?. ಮಂಡ್ಯ ಜಿಲ್ಲೆಯಲ್ಲೆ ಬೇಕಾದಷ್ಟುಇಂತಹ ಹಗರಣಗಳು ನಡೆದಿವೆ. ಇವುಗಳ ಬಗ್ಗೆ ನಡೆಯುತ್ತಿರುವ ತನಿಖೆಗಳು ಹಳ್ಳ ಹಿಡಿಯುತ್ತಿವೆ. ಬೇರೆ ಜಿಲ್ಲೆಗಳ ನಾಯಕರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ದೊಡ್ಡ ರಾಜಕಾರಿಣಿ ನಾನಲ್ಲ ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿರುವ ಪ್ರಕರಣದ ಬಗ್ಗೆ ಸೂಕ್ತ ಉತ್ತರ ನೀಡದೇ ಜಾರಿಕೊಂಡರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ಮನ್‌ಮುಲ್‌ನಲ್ಲಿ ನಡೆದಿರುವ ನೀರು ಮಿಶ್ರಿತ ಹಾಲು ಹಗರಣ, ಹಾಲಿಗೆ ರಾಸಾಯನಿಕ ಹಾಗೂ ಅಕ್ರಮ ಕಲ್ಲು ಮತ್ತು ಮರಳು ಗಣಿಗಾರಿಕೆ ನಡೆಯುತ್ತಿದ್ದರು ಸಹ ಯಾವ ರಾಜಕಾರಣಿಗಳು ವಿರೋಧ ವ್ಯಕ್ತಪಡಿಸದೆ ಹಗರಣಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ನಾವು ರೈತ ಮಕ್ಕಳು, ಮಣ್ಣಿನ ಮಕ್ಕಳು ಎಂದು ಮಹಿಳೆಯರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ನಾಯಕರು, ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇವರು ನಾಯಕರಾ? ನಾಲಾಯಕರಾ ಜನರೇ ತೀರ್ಮಾನ ಮಾಡಬೇಕು: ಸಿದ್ದರಾಮಯ್ಯ

ಬಿಜೆಪಿ, ಕಾಂಗ್ರೆಸ್‌ ಎರಡೂ ಪಕ್ಷದಿಂದ ನನಗೆ ಆಹ್ವಾನ: ಬಿಜೆಪಿ, ಕಾಂಗ್ರೆಸ್‌ ಎರಡೂ ಪಕ್ಷದಿಂದ ನನಗೆ ಆಹ್ವಾನವಿದೆ. ಆ ಪಕ್ಷಗಳ ನಾಯಕರು ನನ್ನ ಜೊತೆ ಮಾತನಾಡಿದ್ದಾರೆ. ಯಾವ ಪಕ್ಷ ಸೇರಬೇಕೆಂಬ ಬಗ್ಗೆ ನಾನಿನ್ನೂ ನಿರ್ಧಾರ ಮಾಡಿಲ್ಲ ಎಂದು ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಹೇಳಿ​ದ್ದಾ​ರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾವ ಪಕ್ಷ ಸೇರಬೇಕು, ಚುನಾವಣೆಗೆ ಸ್ಪರ್ಧಿಸಬೇಕೋ, ಬೇಡವೋ ಎಂಬ ಬಗ್ಗೆ ಮತ್ತೊಮ್ಮೆ ಜನಾಭಿಪ್ರಾಯ ಕೇಳುತ್ತೇನೆ. ಸಮಯ ಬಂದಾಗ ನನ್ನ ನಿರ್ಧಾರ ತಿಳಿಸುತ್ತೇನೆ ಎಂದರು. 

ರಾಜ್ಯ ರಾಜಕಾರಣಕ್ಕೆ ಬರಬೇಕು, ಚುನಾವಣೆಗೆ ನಿಲ್ಲಬೇಕೆನ್ನುವುದು ಅಷ್ಟು ಸುಲಭದ ವಿಚಾರ ಅಲ್ಲ. ಅದೊಂದು ದೊಡ್ಡ ನಿರ್ಧಾರ. ಚುನಾವಣೆಗೆ ಎಷ್ಟುದಿನ ಎನ್ನುವುದು ಮುಖ್ಯವಲ್ಲ. ಗೆಲ್ಲಲು ಅನುಕೂಲಕರ ವಾತಾವರಣ ಎಷ್ಟಿದೆ ಎನ್ನುವುದು ಮುಖ್ಯ. ಹಾಗಾಗಿ ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂದು ಹೇಳಲು ಇದು ಸಮಯವಲ್ಲ. ಆ ಸಮಯ ಬಂದಾಗ ನಾನು ಎಲ್ಲರ ಸಮ್ಮುಖದಲ್ಲಿ ನಿರ್ಧಾರ ಮಾಡುತ್ತೇನೆ ಎಂದರು. ನಾನು ರಾಜಕೀಯಕ್ಕೆ ಬಂದಿರೋದೆ ಒಂದು ಆಕಸ್ಮಿಕ. ನಾನು ಪೂರ್ಣ ಪ್ರಮಾಣದಲ್ಲಿ ಇಲ್ಲೇ ಇರಲೂ ಬಂದಿಲ್ಲ. ಚುನಾವಣೆಗೆ ನಿಲ್ಲುವ, ರಾಜಕೀಯ ಪಕ್ಷ ಸೇರುವ ಅಥವಾ ಸ್ವತಂತ್ರವಾಗಿ ಉಳಿಯುವ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದು ತಿಳಿಸಿದರು.

ಸಿದ್ದು, ಡಿಕೆಶಿ ಪ್ರಚಾರದಿಂದ ಕಾಂಗ್ರೆಸ್‌ ಠೇವಣಿ ಹೋಗುತ್ತೆ: ಕೆ.ಎಸ್‌.ಈಶ್ವರಪ್ಪ

ದಶಪಥ ಹೆದ್ದಾರಿ ಉದ್ಘಾಟನೆ ವೇಳೆ ಸಂಸದೆಯಾಗಿ ಪ್ರಧಾನಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಾನು ಕೆಲ ವಿಚಾರದಲ್ಲಿ ಬಿಜೆಪಿಗೆ ಸಪೋರ್ಟ್‌ ಮಾಡಿದ್ದೇನೆ. ಅದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಪಕ್ಷ ಸೇರುವ, ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಾನು ಮತ್ತೊಮ್ಮೆ ಜನಾಭಿಪ್ರಾಯ ಕೇಳುತ್ತೇನೆ. ಒಂದು ನಿರ್ಧಾರ ತೆಗೆ​ದು​ಕೊಂಡಾಗ ಅದಕ್ಕೆ ವಿರೋಧ ಇರೋದು ಸಾಮಾನ್ಯ. ಎಲ್ಲರ ಅಭಿಪ್ರಾಯವನ್ನೂ ಪಡೆಯುತ್ತೇನೆ. ನಂತರ ನನ್ನ ನಿರ್ಧಾರ ತಿಳಿಸುತ್ತೇನೆ ಎಂದ​ರು.