Asianet Suvarna News Asianet Suvarna News

ಯಾರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡ್ತೀರಿ: ಸಂಸದ ತೇಜಸ್ವಿ ಸೂರ್ಯ

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂರಿಗೆ ಮತ್ತೆ ಮೀಸಲಾತಿ ನೀಡುವುದಾಗಿ ಹೇಳುತ್ತಿದೆ. ಯಾರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ನೀಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಿ ಎಂದು ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ. 

MP Tejasvi Surya Slams On Congress Over Reservation gvd
Author
First Published Mar 30, 2023, 2:40 AM IST

ಬೆಂಗಳೂರು (ಮಾ.30): ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂರಿಗೆ ಮತ್ತೆ ಮೀಸಲಾತಿ ನೀಡುವುದಾಗಿ ಹೇಳುತ್ತಿದೆ. ಯಾರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ನೀಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಿ ಎಂದು ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಸಂವಿಧಾನ ಬಾಹಿರವಾಗಿ ಕೊಡುತ್ತಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ ನೀಡಿದ್ದು ಕಾಂಗ್ರೆಸ್‌ ನಾಯಕರಾದ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.

ತಾವು ಅಧಿಕಾರಕ್ಕೆ ಬಂದರೆ ಮತ್ತೆ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಂರಿಗೆ ಕೊಡುವುದಾಗಿ ಕಾಂಗ್ರೆಸ್‌ ನಾಯಕರು ಹೇಳುತ್ತಿರುವುದು ಅಚ್ಚರಿ ತರುವಂತಿದೆ ಎಂದರು. ಮುಸ್ಲಿಂರಿಗೆ ಇದ್ದ ಮೀಸಲಾತಿ ಏಕೆ ರದ್ದುಪಡಿಸಲಾಗಿದೆ ಎಂಬುದಕ್ಕೆ ನಮ್ಮ ಬಳಿ ಉತ್ತರ ಇದೆ. ಅದರೆ ಇಷ್ಟುವರ್ಷ ಕಾಂಗ್ರೆಸ್‌ ಯಾವ ಆಧಾರದ ಮೇಲೆ ಮುಸ್ಲಿಂರಿಗೆ ಮೀಸಲಾತಿ ನೀಡಿತ್ತು? ಹಿಂದುಳಿದ ಮೀಸಲಾತಿ ಕಿತ್ತುಕೊಂಡು ಮುಸ್ಲಿಂರಿಗೆ ನೀಡಿತ್ತು. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ನನ್ನ ರಾಜಕೀಯ ಜೀವನ ಉತ್ತುಂಗಕ್ಕೆ ಏರಿದ್ದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ: ಸಚಿವ ಸಿ.ಸಿ.ಪಾಟೀಲ್‌

ರಾಜ್ಯದಲ್ಲಿ ಶೇ.13ರಷ್ಟು ಮುಸ್ಲಿಂ ಸಮುದಾಯವಿದೆ. ಅದಕ್ಕೆ ಅನುಗುಣವಾಗಿ ಅವರಿಗೆ ಮೀಸಲಾತಿ ಕೊಡುವುದಾಗಿ ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಇದು ರಾಜ್ಯದ ಹಿಂದುಳಿದ ಸಮುದಾಯಗಳಿಗೆ ಮಾಡುತ್ತಿರುವ ಅತ್ಯಂತ ಘೋರ ಅನ್ಯಾಯ. ಇದನ್ನು ರಾಜ್ಯದ ಜನತೆ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ. ಕಾಂಗ್ರೆಸ್‌ ಪಕ್ಷವು 1954ರಿಂದ ಇತಿಹಾಸದುದ್ದಕ್ಕೂ ನಿರಂತರವಾಗಿ ಇತರ ಹಿಂದುಳಿದ ವರ್ಗಗಳ ವಿರುದ್ಧ ಪಿತೂರಿ ಮಾಡುತ್ತಲೇ ಬಂದಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟುಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನ ಮಾಡಿದೆ. ಈ ನಿರ್ಧಾರದಿಂದ ಇಲ್ಲಿನವರೆಗೆ ಯಾವ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿರಲಿಲ್ಲವೋ ಅವರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿದೆ. ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್‌ ಧೋರಣೆ ಎಲ್ಲರಲ್ಲಿ ಆಶ್ಚರ್ಯ ತಂದಿದೆ. ಇದು ಅಸಹ್ಯ ತರಿಸುವಂತಿದೆ ಎಂದು ಹೇಳಿದರು.

ಕಾಂಗ್ರೆಸ್‌ಗೆ ರಾಜ್ಯದಲ್ಲಿ ಅಧಿಕಾರ: ಮಾಜಿ ಸಚಿವ ಎಚ್‌.ಆಂಜನೇಯ

ರಾಜ್ಯದಲ್ಲಿ ಸಂವಿಧಾನ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದ ಮೀಸಲಾತಿ ಜಾರಿಯಲ್ಲಿತ್ತು. ಬೊಮ್ಮಾಯಿ ಅವರ ಸರ್ಕಾರ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದೆ. ಇದರಿಂದ ಕಾಂಗ್ರೆಸ್‌ ಪಕ್ಷದ ಮತ ಬ್ಯಾಂಕಿಗೆ ಏಟು ಬಿದ್ದಿದೆ. ಕಳೆದ ಎಷ್ಟೋ ದಶಕಗಳಿಂದ ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕೆಂಬ ಬೇಡಿಕೆ ಇತ್ತು. ಆರು ವರ್ಷ ಅಧಿಕಾರದಲ್ಲಿ ಇದನ್ನು ಕಾಂಗ್ರೆಸ್‌ ಯಾಕೆ ಮಾಡಲಿಲ್ಲ? ಒಳಮೀಸಲಾತಿಯನ್ನು ಯಾಕೆ ನೀಡಲಿಲ್ಲ ಎಂದು ತೇಜಸ್ವಿ ಸೂರ್ಯ ಹರಿಹಾಯ್ದರು.

Follow Us:
Download App:
  • android
  • ios