Mysuru: ಕಾಂಗ್ರೆಸ್‌ಗೆ ಗಜೇಂದ್ರ ಮೋಕ್ಷ ಸಿಕ್ಕಿದೆ: ಸಂಸದ ಶ್ರೀನಿವಾಸ್ ಪ್ರಸಾದ್‌

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸುಮಾರು 22 ವರ್ಷದ ಬಳಿಕ ಚುನಾವಣೆ ನಡೆಯುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್‌ ಲೇವಡಿ ಮಾಡಿದರು. 

MP V Srinivas Prasad Slams On Congress Over AICC President Election gvd

ಮೈಸೂರು (ಅ.17): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸುಮಾರು 22 ವರ್ಷದ ಬಳಿಕ ಚುನಾವಣೆ ನಡೆಯುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್‌ ಲೇವಡಿ ಮಾಡಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಮೂಲಕ ಕಾಂಗ್ರೆಸ್‌ಗೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. ಆನೆ ನೀರು ಕುಡಿಯಲು ಕೆರೆಯ ಬಳಿ ಹೋದಾಗ ಮೊಸಳೆ ಆನೆಯ ಕಾಲು ಹಿಡಿದುಕೊಳ್ಳುತ್ತದೆ. ಆಗ ವಿಷ್ಣು ಚಕ್ರವನ್ನು ಪ್ರಯೋಗಿಸಿದಾಗ ಮೊಸಳೆಯಿಂದ ಆನೆಗೆ ಮುಕ್ತಿ ಸಿಗುತ್ತದೆ. ಅದೇ ರೀತಿ ಈಗ ಕಾಂಗ್ರೆಸ್‌ ಪಕ್ಷದ ಪರಿಸ್ಥಿತಿಯೂ ಆಗಿದೆ ಎಂದು ಮಾರ್ಮಿಕವಾಗಿ ಹೇಳಿದರು.

ರಾಜ್ಯವನ್ನೆಲ್ಲ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಿದೆ ರಾಹುಲ್‌ ಗಾಂಧಿ ಯಾತ್ರೆ. ಎಲ್ಲವನ್ನೂ ಲೂಟಿ ಮಾಡಿದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ ರಾಹುಲ್‌ ಗಾಂಧಿ ಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ರಾಜ್ಯ ಸರ್ಕಾರ ಎಸ್ಸಿ, ಎಸ್ಟಿಮೀಸಲಾತಿ ಹೆಚ್ಚಳ ಮಾಡಿದೆ. ಆದರೆ ಸಂವಿಧಾನ ಬದ್ಧವಾಗಿ ರಾಜ್ಯದ ಇತಿಮಿತಿ ಒಳಗೆ ಹೇಗೆ ಮಾಡಬಹುದು ಅನ್ನೋದನ್ನು ತಿಳಿದುಕೊಂಡು ಮಾಡಬೇಕು. ನಾನು ಅದನ್ನೆಲ್ಲ ಹೇಳುವುದಕ್ಕೆ ಹೋದರೆ ವಿವಾದವಾಗುತ್ತದೆ. ನಾನು ಕೇಂದ್ರದಲ್ಲಿ ಇದ್ದವನು, ಸಂವಿಧಾನ ನೋಡಿ ಮಾತನಾಡುವವನು. ಯಾರದೋ ಒತ್ತಡಕ್ಕೆ ಮಣಿದು ಮಾತನಾಡುವುದಕ್ಕೆ ಆಗುವುದಿಲ್ಲ. ಇದೊಂದು ಇಕ್ಕಟ್ಟಿನ ಪರಿಸ್ಥಿತಿ. ಅದೇನು ಎತ್ತ ಅಂಥ ನನಗೆ ಗೊತ್ತು, ಮಾಡಲಿ ಬಿಡಿ ನೋಡೋಣ. ಸರಿಯಾಗಿ ಬಿಡಿಸಿ ಹೇಳಿದರೆ ಅದರ ಕಥೆನೇ ಬೇರೆ ಇದೆ ಎಂದರು.

ಒಕ್ಕಲಿಗರ ಮೀಸಲಾತಿ ಶೇ.8ಕ್ಕೆ ಏರಿಸಲು ಹೋರಾಟ: ಚುಂಚಶ್ರೀ

ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಾಗಿ: ಸಂಸದ ವಿ. ಶ್ರೀನಿವಾಸಪ್ರಸಾದ್‌ ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಾಗುವಂತೆ ಕರೆ ನೀಡಿದರು. ಸುದೀರ್ಘ ಎರಡು ತಾಸುಗಳ ಕಾಲ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ ಅವರು, ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಪಕ್ಷದ ಸಂಘಟನೆ ಹಾಗೂ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮುಖಂಡರೊಂದಿಗೆ ಮಾತುಕತೆ ನಡೆಸಿದರು.

ಮತ್ತೊಮ್ಮೆ ನಂಜನಗೂಡಿನಲ್ಲಿ ಬಿಜೆಪಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಸನ್ನದ್ಧಗೊಳಿಸಬೇಕು. ಶಾಸಕ ಬಿ. ಹರ್ಷವರ್ಧನ್‌ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ಆಗಬೇಕು. ಮುಂದಿನ ದಿನಗಳಲ್ಲಿ ನಂಜನಗೂಡಿಗೆ ಹೆಚ್ಚು ಭೇಟಿ ನೀಡಲಿದ್ದೇನೆ. ಚುನಾವಣಾ ಗೆಲುವಿಗಾಗಿ ಈಗಿಂದಲೇ ಕಾರ್ಯಕರ್ತರನ್ನು ಸಂಘಟನೆಗೊಳಿಸುವ ನಿಟ್ಟಿನಲ್ಲಿ ಮುಖಂಡರು ಮುಂದಾಗುವಂತೆ ಅವರು ಹೇಳಿದರು. ಸಂಸದ ವಿ. ಶ್ರೀನಿವಾಸಪ್ರಸಾದ್‌ ಭೇಟಿ ನೀಡುವ ವಿಚಾರ ತಿಳಿಯುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ನ.30 ಕೊನೆ ದಿನ: ಸಚಿವ ಅಶ್ವತ್ಥ್‌ ನಾರಾಯಣ

ಮೇಲ್ಸೇತುವೆ ಕಾಮಗಾರಿ ವೀಕ್ಷಣೆ: ಪಟ್ಟಣದ ಅಪೋಲೋ ವೃತ್ತದ ಬಳಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ವಿ. ಶ್ರೀನಿವಾಸಪ್ರಸಾದ್‌ ವೀಕ್ಷಣೆ ಮಾಡಿದರು. 147 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಕಾಮಗಾರಿ ಗುಣಮಟ್ಟಕಾಯ್ದುಕೊಂಡು 18 ತಿಂಗಳ ನಿಗದಿತ ಗಡುವಿನ ಒಳಗಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಮೇಲ್ಸೇತುವೆ ನಿರ್ಮಾಣ ಆಗುವುದರಿಂದ ಎರಡು ರಾಷ್ಟ್ರೀಯ ಹೆದ್ದಾರಿಯಲ್ಲಿ ತಲೆದೋರುತ್ತಿದ್ದ ಸಂಚಾರ ಸಮಸ್ಯೆ ನಿವಾರಣೆ ಆಗಲಿದೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios